ವಿಶ್ವಕರ್ಮ ಜಯಂತಿ ಸೃಜನಶೀಲತೆ ಮಹತ್ವ ಸಾರುವ ಪವಿತ್ರ ದಿನ

KannadaprabhaNewsNetwork |  
Published : Sep 19, 2026, 02:00 AM IST
ಪೋಟೋ | Kannada Prabha

ಸಾರಾಂಶ

ಚಿಕ್ಕಮಗಳೂರುವಿಶ್ವಕರ್ಮ ಜಯಂತಿ ಕೇವಲ ಪರಂಪರೆಯ ಆಚರಣೆಯಲ್ಲ. ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಮಹತ್ವವನ್ನು ಸಾರುವ ಪವಿತ್ರ ದಿನವಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ಶಾಸಕ ಎಚ್.ಡಿ. ತಮ್ಮಯ್ಯ । ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತದಿಂದ ವಿಶ್ವಕರ್ಮ ಜಯಂತಿ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು

ವಿಶ್ವಕರ್ಮ ಜಯಂತಿ ಕೇವಲ ಪರಂಪರೆಯ ಆಚರಣೆಯಲ್ಲ. ಕೌಶಲ, ಶ್ರಮ ಹಾಗೂ ಸೃಜನಶೀಲತೆಯ ಮಹತ್ವವನ್ನು ಸಾರುವ ಪವಿತ್ರ ದಿನವಾಗಿದೆ ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ನಗರದ ಕುವೆಂಪು ಕಲಾಮಂದಿರದಲ್ಲಿ ಜಿಲ್ಲಾಡಳಿತದಿಂದ ಗುರುವಾರ ಆಯೋಜಿಸಿದ್ದ ವಿಶ್ವಕರ್ಮ ಜಯಂತಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ವಿಶ್ವಕರ್ಮ ಆಚಾರ್ಯರನ್ನು ಹಿಂದೂ ಪರಂಪರೆಯಲ್ಲಿ ದೇವಶಿಲ್ಪಿಯಾಗಿ ಪೂಜಿಸಲಾಗುತ್ತದೆ. ದೇವಾ ಲಯಗಳು, ನಗರಗಳು, ಶಸ್ತ್ರಾಸ್ತ್ರಗಳು ಹಾಗೂ ಆಭರಣಗಳ ನಿರ್ಮಾಣದಲ್ಲಿ ವಿಶ್ವಕರ್ಮ ಶಿಲ್ಪಿಗಳ ಕೊಡುಗೆ ಮಹತ್ವ ದ್ದಾಗಿದೆ. ಕಬ್ಬಿಣ, ಮರ, ಚಿನ್ನ-ಬೆಳ್ಳಿ ಕೆಲಸ ಹಾಗೂ ಶಿಲ್ಪಕಲೆ ಸೇರಿದಂತೆ ವಿಶ್ವಕರ್ಮ ಸಮಾಜದ ಸಾಂಪ್ರದಾಯಿಕ ಕಸುಬು ಇಂದಿಗೂ ಸಮಾಜಕ್ಕೆ ಮಹತ್ವದ ಕೊಡುಗೆ ನೀಡುತ್ತಿವೆ ಎಂದರು.ಆಧುನಿಕ ತಂತ್ರಜ್ಞಾನ ಹಾಗೂ ಯಂತ್ರೋಪಕರಣಗಳಿಲ್ಲದ ಕಾಲದಲ್ಲಿಯೇ ಹೊಯ್ಸಳರು, ಚೋಳರು ಸೇರಿದಂತೆ ವಿವಿಧ ರಾಜವಂಶಗಳ ಅವಧಿಯಲ್ಲಿ ನಿರ್ಮಾಣಗೊಂಡಿರುವ ಅದ್ಭುತ ದೇವಾಲಯಗಳು ವಿಶ್ವಕರ್ಮ ಶಿಲ್ಪಿಗಳ ಜ್ಞಾನ, ಕೌಶಲ ಮತ್ತು ತಾಂತ್ರಿಕ ಸಾಮರ್ಥ್ಯಕ್ಕೆ ಸಾಕ್ಷಿಯಾಗಿವೆ. ಶಿಲ್ಪಿಗಳು ಕೇವಲ ಕಲಾವಿದರಲ್ಲದೆ ತಂತ್ರಜ್ಞಾನ, ವಾಸ್ತುಶಿಲ್ಪ ಹಾಗೂ ಕೌಶಲವನ್ನು ಸಮನ್ವಯಗೊಳಿಸಿದ ಸೃಜನಶೀಲ ತಂತ್ರಜ್ಞರಾಗಿದ್ದರು ಎಂದು ಹೇಳಿದರು.ವಿಜ್ಞಾನ ಮತ್ತು ಸಂಸ್ಕೃತಿ ಸಮನ್ವಯದಿಂದ ಸಮಾಜದ ಪ್ರಗತಿ ಸಾಧ್ಯ. ಪ್ರತಿಯೊಬ್ಬರೂ ತಮ್ಮ ದುಡಿಮೆ, ಶ್ರದ್ಧೆ ಮತ್ತು ಕೌಶಲದಿಂದ ಬದುಕು ರೂಪಿಸಿಕೊಳ್ಳುವ ಮೂಲಕ ತಮ್ಮ ಜೀವನದ ವಿಶ್ವಕರ್ಮರಾಗಬೇಕು. ವಿಶ್ವಕರ್ಮ ಆಚಾರ್ಯರ ವಿಚಾರಧಾರೆ ಜಯಂತಿಗೆ ಸೀಮಿತಗೊಳಿಸದೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.ವಿಧಾನ ಪರಿಷತ್ ಸದಸ್ಯೆ ಎ.ವಿ. ಗಾಯತ್ರಿ ಶಾಂತೇಗೌಡ ಮಾತನಾಡಿ, ವಿಶ್ವಕರ್ಮ ಸಮುದಾಯದ ಇತಿಹಾಸ, ಪರಂಪರೆ ಮತ್ತು ಸಾಧನೆಗಳನ್ನು ಯುವಜನತೆ ಹಾಗೂ ಮಕ್ಕಳಿಗೆ ಪರಿಚಯಿಸುವ ಅಗತ್ಯವಿದೆ. ಸಮುದಾಯದ ಯುವಕರು ರಾಜಕೀಯ, ಸಾಂಸ್ಕೃತಿಕ ಹಾಗೂ ಆರ್ಥಿಕ ಕ್ಷೇತ್ರಗಳಲ್ಲಿ ಹೆಚ್ಚಿನ ಸಾಧನೆ ಮಾಡಬೇಕು ಎಂದರು.ಬೇಲೂರು, ಹಳೇಬೀಡು, ಬೆಳವಾಡಿ ಹಾಗೂ ಅಮೃತಾಪುರದ ಐತಿಹಾಸಿಕ ದೇವಾಲಯಗಳ ಶಿಲ್ಪಕಲೆ ವಿಶ್ವಕರ್ಮ ಶಿಲ್ಪಿಗಳ ಅಪೂರ್ವ ಪ್ರತಿಭೆಗೆ ಸಾಕ್ಷಿ. ಅಮರಶಿಲ್ಪಿ ಜಕಣಾಚಾರಿ ಅವರಂತಹ ಮಹಾನ್ ಶಿಲ್ಪಿಗಳ ಕೊಡುಗೆ ಸ್ಮರಿಸಿ, ಮುಂದಿನ ಪೀಳಿಗೆ ಯಲ್ಲಿ ಶಿಲ್ಪಕಲೆ ಮತ್ತು ಪರಂಪರೆಯ ಬಗ್ಗೆ ಗೌರವ ಮೂಡಿಸಬೇಕು ಎಂದು ಹೇಳಿದರು.ರಾಜ್ಯ ಪರಿಸರ ಮೌಲ್ಯಮಾಪನ ಪ್ರಾಧಿಕಾರದ ಅಧ್ಯಕ್ಷ ಎ.ಎನ್. ಮಹೇಶ್ ಕಾರ್ಯಕ್ರಮ ಉದ್ಘಾಟಿಸಿದರು. ಉಪ ತಹಸೀಲ್ದಾರ್ ರಾಮ್ ರಾವ್ ದೇಸಾಯಿ, ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ಚಂದ್ರಶೇಖರಾಚಾರ್ಯ, ಗೌರವಾಧ್ಯಕ್ಷ ಚೇತನ್ ಕುಮಾರ್, ಮುಖಂಡರಾದ ರತೀಶ್, ರಮೇಶ್ ಕಡಿದಾಳ್, ನಾರಾಯಣಚಾರ್ಯ ಉಪಸ್ಥಿತರಿದ್ದರು.-- ಫೋಟೋ --ಚಿಕ್ಕಮಗಳೂರಿನ ಕುವೆಂಪು ಕಲಾಮಂದಿರದಲ್ಲಿ ಗುರುವಾರ ನಡೆದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಶಾಸಕ ಎಚ್.ಡಿ. ತಮ್ಮಯ್ಯ ಮಾತನಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್
ದಸರಾ ಕ್ರೀಡಾಕೂಟದಲ್ಲಿ ಉತ್ಸಾಹದಿಂದ ಪಾಲ್ಗೊಳ್ಳಿ: ಬಿ.ಬಿ. ಅಸೂಟಿ