ಕುಶಾಲನಗರ: ವಿಶ್ವಕರ್ಮ ಪೂಜಾ ಮಹೋತ್ಸವ ಸಂಪನ್ನ

KannadaprabhaNewsNetwork |  
Published : Sep 29, 2025, 12:05 AM IST
ಮೆರವಣಿಗೆ ಸಂದರ್ಭ | Kannada Prabha

ಸಾರಾಂಶ

ಕುಶಾಲನಗರ ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ ವಿಶ್ವಕರ್ಮ ಪೂಜಾ ಮಹೋತ್ಸವ ಕಾರ್ಯಕ್ರಮ ಜರುಗಿತು.

ಕನ್ನಡಪ್ರಭ ವಾರ್ತೆ ಕುಶಾಲನಗರಕುಶಾಲನಗರ ತಾಲೂಕು ವಿಶ್ವಕರ್ಮ ಸಮಾಜದ ವತಿಯಿಂದ 22ನೇ ವರ್ಷದ ಶ್ರೀ ವಿಶ್ವಕರ್ಮ ಪೂಜಾ ಮಹೋತ್ಸವ ದುರ್ಗಾ ನಮಸ್ಕಾರ ಪೂಜೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಜರುಗಿತು.ಕುಶಾಲನಗರ ಗಾಯತ್ರಿ ಕಲ್ಯಾಣ ಮಂಟಪ ಸಭಾಂಗಣದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸಿದ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜದ ಅಧ್ಯಕ್ಷ ಈಶ್ವರಾಚಾರ್ ಮಾತನಾಡಿ , ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ತುಂಬ ಮಹತ್ವದಾಗಿದ್ದು, ಇದು ನಮ್ಮ ಸಮುದಾಯ ಸಾಮಾಜಿಕವಾಗಿ ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಅಭಿವೃದ್ಧಿ ಹೊಂದಲು ಕಾರಣವಾಗಿದ್ದು, ಪ್ರತಿಯೊಬ್ಬರು ನಿಖರ‌ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.ಕೆ.ಆರ್.ಪೇಟೆಯ ಕರ್ನಾಟಕ ರಾಜ್ಯ ಲೆಕ್ಕಪತ್ರ ಇಲಾಖೆ, ನಿವೃತ್ತ ಲೆಕ್ಕ ಪರಿಶೋಧಕ ಲೋಕೇಶ್ ವಿಶ್ವಕರ್ಮ ಮಾತನಾಡಿ, ಮನುಷ್ಯ ನಾಗರಿಕತೆಯ ಬೆಳವಣಿಗೆಯಲ್ಲಿ ಪಂಚಮ ವೃತ್ತಿಗಳ ಪಾಲು ಬಹುದೊಡ್ಡದಾಗಿದ್ದು ವಿಶ್ವಕರ್ಮರು ಜ್ಞಾನ ವಿಜ್ಞಾನ ತಂತ್ರಜ್ಞಾನದ ಹರಿಕಾರರು ಎಂದು ಬಣ್ಣಿಸಿದರು.

ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜ ಬೆಂಗಳೂರು ಗೌರವಾಧ್ಯಕ್ಷ ಸಿ.ಉಮೇಶ್ ಮಾತನಾಡಿ, ವಿಶ್ವಕರ್ಮ ಸಮುದಾಯದ ಬಾಂಧವರು ಸಂಘಟಿತರಾಗಬೇಕು. ತಮ್ಮ ಮಕ್ಕಳಿಗೆ ಉನ್ನತ ಮಟ್ಟದ ಶಿಕ್ಷಣ ಕೊಡಿಸಿ ಅವರನ್ನು ಸಮಾಜದ ಆಸ್ತಿಯಾಗಿ ಮಾಡಬೇಕು ಎಂದರು.ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜ, ಬೆಂಗಳೂರು ಕಾರ್ಯಾಧ್ಯಕ್ಷ ಬಾಬು ಪತ್ತಾರ್ ಮಾತನಾಡಿ, ವಿಶ್ವಕರ್ಮ ಸಮುದಾಯ ಕೆಲವೇ ಕ್ಷೇತ್ರಗಳಿಗೆ ಸೀಮಿತರಾಗದೆ ಇತರೆ ಕ್ಷೇತ್ರಗಳಲ್ಲೂ ತಮ್ಮ ಛಾಪು ಮೂಡಿಸಬೇಕು ಎಂದು ಸಲಹೆ ನೀಡಿದರು.ಅರಕಲಗೂಡು ತಾಲೂಕಿನ ಅರೆಮಾದನಹಳ್ಳಿ ಮಠದ ಪೀಠಾಧಿಪತಿ ಅನಂತ ವಿಭೂಷಿತ ಶಿವಜ್ಞಾನತೀರ್ಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದರು.

ತಾಲೂಕು ವಿಶ್ವಕರ್ಮ ಸಮಾಜದ ಅಧ್ಯಕ್ಷ ಎಚ್.ಬಿ. ಲಿಂಗಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭ ಕರ್ನಾಟಕ ರಾಜ್ಯ ವಿಶ್ವಕರ್ಮ ಸಮಾಜ ಪ್ರಧಾನ ಕಾರ್ಯದರ್ಶಿ ಶರತ್‌ಚಂದ್ರ, ಮಹಿಳಾ ಘಟಕದ ಅಧ್ಯಕ್ಷೆ ಎನ್. ಎಸ್. ಶೋಭ, ಖಜಾಂಚಿ ಸುಮಾ, ಕಾನೂನು ಸಲಹೆಗಾರ ಕೆ.ಎಸ್.ಚಂದ್ರಶೇಖರ್, ತಾಲೂಕು ಘಟಕದ ಗೌರವಾಧ್ಯಕ್ಷ ವಿ.ಕುಮಾರ್, ತಾಲೂಕು ಮಹಿಳಾ ಘಟಕದ ಅಧ್ಯಕ್ಷೆ ಲಲಿತಾ ವರದಾರಾಜು, ಮಡಿಕೇರಿ ತಾಲೂಕು ಅಧ್ಯಕ್ಷ ಜಗದೀಶ್, ಮಾಜಿ ಅಧ್ಯಕ್ಷ ಅಶೋಕ್, ಶಿರಂಗಾಲದ ಎಸ್. ಎಂ. ಶ್ಯಾಂ ಸುಂದರ್, ಮುಖಂಡರಾದ ನಾಗರಾಜು, ವಿದ್ಯಾಲತಾ, ದಾಮೋದರ್, ಸೋಮಶೇಖರ್, ಸದಾನಂದ, ಎಚ್.ಎನ್.ಸುಬ್ರಹ್ಮಣ್ಯ, ದುರ್ಗೆಶ್, ಮತ್ತಿತರರು ಪಾಲ್ಗೊಂಡಿದ್ದರು.

ಸಭಾಂಗಣದಲ್ಲಿ ಗಣಪತಿ ಹೋಮ, ವಿಶ್ವಕರ್ಮ‌ ಪೂಜೆ, ಪೂರ್ಣಾಹುತಿ ನಡೆಯಿತು.ಕಾವೇರಿ‌ ನದಿಯಿಂದ ಪೂರ್ಣ ಕುಂಭ ಕಳಸದೊಂದಿಗೆ ತೆರೆದ ಅಲಂಕೃತ ರಥದಲ್ಲಿ ವಿಶ್ವಕರ್ಮ‌ಮೂರ್ತಿ ಹಾಗೂ ಶಿವಸುಜ್ಞಾನ ತೀರ್ಥ ಸ್ವಾಮಿಗಳ ಭವ್ಯ‌ ಮೆರವಣಿಗೆ ನಡೆಸಲಾಯಿತು. ಇದೇ ಸಂದರ್ಭ ರಾಜ್ಯ ಪ್ರಶಸ್ತಿ ಪುರಸ್ಕೃತ ದೈಹಿಕ ಶಿಕ್ಷಣ ಶಿಕ್ಷಕ ಕೆ.ಎಸ್.ಶಾಸ್ತ್ರಿ, ಡಾ.ಪ್ರಾಣೇಶ್, ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ಸಮಾಜದ ಮುಖಂಡರನ್ನು ಸನ್ಮಾನಿಸಿ ಗೌರವಿಸಲಾಯಿತು.

PREV

Recommended Stories

ಸಿಲೋಗನಾ ಹೆಸರಿನಲ್ಲಿ ವಿಜಯ ದಶಮಿ ಆಚರಿಸುವ ದನಗರ ಗೌಳಿಗರು
ಭಟ್ಕಳದಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ