ವಿಶ್ವಕರ್ಮ ಯೋಜನೆಯಿಂದ ಸಾಂಪ್ರದಾಯಕ ವೃತ್ತಿಗೆ ಪ್ರೊತ್ಸಾಹ: ಕೋಟಾ ಶ್ರೀನಿವಾಸ ಪೂಜಾರಿ

KannadaprabhaNewsNetwork |  
Published : Jun 20, 2025, 12:34 AM IST
ವಿಶ್ವಕರ್ಮ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಕಿಟ್ ವಿತರಣಾ ಕಾರ್ಯಕ್ರಮ | Kannada Prabha

ಸಾರಾಂಶ

ತರೀಕೆರೆ, ಸಾಂಪ್ರದಾಯಿಕ ವೃತ್ತಿ ಮಾಡುತ್ತಿರುವವರಿಗೆ ಕೇಂದ್ರ ಸರ್ಕಾರದ ವಿಶ್ವಕರ್ಮ ಯೋಜನೆಯಿಂದ ಹೆಚ್ಚು ಪ್ರೋತ್ಸಾಹ ದೊರೆಯುತ್ತದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

- ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ಕಿಟ್ ವಿತರಣಾ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ, ತರೀಕೆರೆ

ಸಾಂಪ್ರದಾಯಕ ವೃತ್ತಿ ಮಾಡುತ್ತಿರುವವರಿಗೆ ಕೇಂದ್ರ ಸರ್ಕಾರದ ವಿಶ್ವಕರ್ಮ ಯೋಜನೆಯಿಂದ ಹೆಚ್ಚು ಪ್ರೋತ್ಸಾಹ ದೊರೆಯುತ್ತದೆ ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಗುರುವಾರ ಪಟ್ಟಣದ ಅಂಚೆ ಇಲಾಖೆ ಕಚೇರಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ಕಿಟ್ ವಿತರಿಸಿ ಮಾತನಾಡಿದರು. ಅಲಂಕಾರಿಕ ಮಡಕೆ ಮಾಡುವುದು ಇತ್ಯಾದಿ ವೃತ್ತಿಪರ ಕೆಲಸ ನಿರ್ವಹಿಸುವವರಿಗೆ ಶಕ್ತಿ ತುಂಬಲು ಕೇಂದ್ರ ಸರ್ಕಾರ ಈ ಯೋಜನೆ ಅನುಷ್ಠಾನಕ್ಕೆ ತಂದಿದೆ. ಯೋಜನೆಯಡಿ ಅರ್ಥಿಕ ನೆರವು ನೀಡಿ ತರಬೇತಿ ಕೂಡ ನೀಡಲಾಗುವುದು. ಕೇಂದ್ರ ಸರ್ಕಾರದ ಈ ಯೋಜನೆ ಪಾರದರ್ಶಕವಾಗಿರಲಿ ಎಂಬ ಆಶಯದೊಂದಿಗೆ ಅಂಚೆ ಇಲಾಖೆ ಮೂಲಕ ಈ ಯೋಜನೆ ಜಾರಿಗೆ ತರಲಾಗಿದೆ. ಗುಣಮಟ್ಟದ ಪರಿಕರಗಳನ್ನು ನೀಡಲು, ಕೇಂದ್ರ ಸರ್ಕಾರದ ಈ ಯೋಜನೆ ಮನೆ ಮನೆಗೂ ತಲುಪಲು ಅಂಚೆ ಇಲಾಖೆ ಮತ್ತು ಬ್ಯಾಂಕುಗಳು ಸಹಕರಿಸುತ್ತದೆ ಎಲ್ಲರಿಗೂ ಶುಭವಾಗಲಿ ಎಂದು ಹೇಳಿದರು.

ಚಿಕ್ಕಮಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ಡಿ.ಎಸ್.ಸುರೇಶ್, ಮುಖಂಡರಾದ ಕಲ್ಮರುಡಪ್ಪ, ಬಿಜೆಪಿ ತಾಲೂಕು ಅಧ್ಯಕ್ಷ ಪ್ರತಾಪ್ ಗರಗದಹಳ್ಳಿ, ಪುರಸಭೆ ಸದಸ್ಯ ಟಿ.ಎಂ.ಭೋಜರಾಜ್, ಪುರಸಭಾ ಮಾಜಿ ಅಧ್ಯಕ್ಷ ಎಂ. ನರೇಂದ್ರ, ರಾಜೇಶ್ವರಿ ರಾಜಶೇಖರ್, ರಾಜಶೇಖರ್, ಕೃಷ್ಣಮೂರ್ತಿ, ಚಿಕ್ಕಮಗಳೂರು ಜಿಲ್ಲಾ ಅಂಚೆ ಅಧೀಕ್ಷ ಶ್ರೀನಾಥ್, ಮಾರುಕಟ್ಟೆ ಅಧಿಕಾರಿ ದೊಡ್ಡೇಶ, ಅಂಚೆ ಪಾಲಕರು ಸೇವ್ಯಾನಾಯಕ್, ಗಂಗಾಧರ ವೈ.ಯು, ಫಳನಿಸ್ವಾಮಿ, ಅನಿತ, ಅಂಚೆ ಇಲಾಖೆ ಸಿಬ್ಬಂದಿ ಭಾಗವಹಿಸಿದ್ದರು.

--

19ಕೆಟಿಆರ್.ಕೆ2ಃ

ತರೀಕೆರೆಯಲ್ಲಿ ಅಂಚೆ ಇಲಾಖೆ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಕೋಟಾ ಶ್ರೀನಿವಾಸ ಪೂಜಾರಿ ವಿಶ್ವಕರ್ಮ ಯೋಜನೆಯಡಿ ಫಲಾನುಭವಿಗಳಿಗೆ ಕಿಟ್ ವಿತರಿಸಿದರು. ಚಿಕ್ಕಮಗಳೂರು ಡಿಸಿಸಿ ಬ್ಯಾಂಕ್ ಅಧ್ಯಕ್ಷ, ಮಾಜಿ ಶಾಸಕ ಡಿ.ಎಸ್.ಸುರೇಶ್, ಬಿಜೆಪಿ ತಾಲೂಕು ಅಧ್ಯಕ್ಷ ಪ್ರತಾಪ್ ಗರಗದಹಳ್ಳಿ, ಪುರಸಭೆ ಸದಸ್ಯ ಟಿ.ಎಂ.ಭೋಜರಾಜ್, ಮಾಜಿ ಪುರಸಭಾಧ್ಯಕ್ಷ ಎಂ.ನರೇಂದ್ರ, ಮುಖಂಡ ಕಲ್ಮರುಡಪ್ಪ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೋಳಿ ಸಂಭ್ರಮದಲ್ಲಿ ಮಿಂದೆದ್ದ ಬೆಂಗಳೂರಿನ ಯುವ ಸಮೂಹ
ಕನ್ನಡಪ್ರಭ- ಏಷ್ಯಾನೆಟ್‌ ಸುವರ್ಣ ನ್ಯೂಸ್‌ ಪ್ರತಿಷ್ಠಿತ ಯುಗಾದಿ ಪುರಸ್ಕಾರ ಪ್ರಕಟ