ಮಳವಳ್ಳಿ: ಐತಿಹಾಸಿಕ ದಂಡಿನಮಾರಮ್ಮ ಹಾಗೂ ಪಟ್ಟಲದಮ್ಮ ಸಿಡಿ ಹಬ್ಬ ಸಮೀಪಿಸುತ್ತಿರುವುದರಿಂದ ಪುರಸಭೆ ಅಧಿಕಾರಿಗಳು ಪ್ರತಿಯೊಂದು ವಾರ್ಡ್ ಗಳಿಗೆ ಭೇಟಿ ಕೊಟ್ಟು ಪರಿಶೀಲನೆ ಮಾಡುವ ಮೂಲಕ ಮೂಲ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳಬೇಕೆಂದು ಶಾಸಕ ಪಿ.ಎಂ ನರೇಂದ್ರಸ್ವಾಮಿ ಸೂಚನೆ ನೀಡಿದರು.
ಸಿಡಿ ಹಬ್ಬದ ಅಂಗವಾಗಿ ತುರ್ತು ನಿಮಿತ್ತ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ನೀಡುವಂತೆ ಈಗಾಗಲೇ ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ ತರಲಾಗಿದೆ. ಪುರಸಭೆ ಸೇರಿ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಎಲ್ಲಾ ಸಮುದಾಯದ ಮುಖಂಡರು ಹಬ್ಬದ ಯಶಸ್ಸಿಗೆ ಕೈ ಜೋಡಿಸಬೇಕೆಂದು ಕೋರಿದರು.
ಇದೇ ವೇಳೆ ಅಧಿಕಾರಿಗಳು ಮತ್ತು ಮುಖಂಡರು ಸಮಸ್ಯೆಗಳ ಬಗ್ಗೆ ಶಾಸಕರ ಗಮನಕ್ಕೆ ತಂದರು. ಶಾಸಕರು ತಕ್ಷಣದಲ್ಲಿಯೇ ಸಮಸ್ಯೆಗಳ ಪರಿಹಾರಕ್ಕೆ ಹಲವು ಸಲಹೆ- ಸೂಚನೆಗಳನ್ನು ನೀಡಿದರು.ಸಭೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಎಂ.ಸಿ ನಾಗರತ್ನ, ಅಧಿಕಾರಿಗಳಾದ ನವೀನಕುಮಾರಿ, ಲೋಕೋಪಯೋಗಿ ಎಇ ಸೋಮಶೇಖರ್ ಸೇರಿ ಮುಖಂಡರು ಇದ್ದರು.