ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಅಧಿಕಾರಿಗಳ ಭೇಟಿ, ದಾಖಲೆಗಳ ಪರಿಶೀಲನೆ

KannadaprabhaNewsNetwork |  
Published : Apr 30, 2026, 01:45 AM IST
29ಕೆಎಂಎನ್ ಡಿ21 | Kannada Prabha

ಸಾರಾಂಶ

ಗರ್ಭಿಣಿ ಮಹಿಳೆ ಹಾಗೂ ಬರುವ ಪೋಷಕರಿಗೆ ಜಾಗೃತಿ ಮೂಡಿಸಲು ಹಾಗೂ ಎಚ್ಚರಿಕೆ ನೀಡಲು ಶಿಕ್ಷೆ ಮತ್ತು ದಂಡ ಹಾಗೂ ಹೆಣ್ಣು ಮಕ್ಕಳ ಮಹತ್ವ, ಲಿಂಗ ಪತ್ತೆ ಕಾನುನೂಬಾಹಿರ ಎಂಬ ಜಾಗೃತಿ ಸೂಚನಾ ಫಲಕಗಳನ್ನು ದೊಡ್ಡ ಗಾತ್ರದಲ್ಲಿ ಪ್ರದರ್ಶನ ಮಾಡುವಂತೆ ಸೂಚನೆ.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಪಟ್ಟಣದ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ತಹಸೀಲ್ದಾರ್ ಎಸ್.ವಿ.ಲೋಕೇಶ್ ನೇತೃತ್ವದಲ್ಲಿ ಆರೋಗ್ಯ ಇಲಾಖೆ ಅಧಿಕಾರಿಗಳ ತಂಡ ಭೇಟಿ ನೀಡಿ ಹಲವು ದಾಖಲೆ ಪರಿಶೀಲನೆ ನಡೆಸಿ ಡಯಾಗ್ನೋಸ್ಟಿಕ್ ಸೆಂಟರ್ ಮಾಲೀಕರಿಗೆ ಹಲವು ಕಟ್ಟು ನಿಟ್ಟಿನ ಸೂಚನೆ ನೀಡಿದರು.

ತಹಸೀಲ್ದಾರ್ ಲೊಕೇಶ್, ತಾಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ, ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಸಂಜಯ್ ಸೇರಿದಂತೆ ಜಾಗೃತಿ ಸಮಿತಿ ಸದಸ್ಯರು. ಪಟ್ಟಣದ 6 ಹಾಗೂ ಹಲಗೂರಿನ 2 ಡಯಾಗ್ನೋಸ್ಟಿಕ್ ಸೆಂಟರ್‌ಗಳಿಗೆ ಡಿಢೀರ್ ಭೇಟಿ ನೀಡಿ ಸ್ಕ್ಯಾನಿಂಗ್ ಮಾಡಿಸಿರುವ ಗರ್ಭಿಣಿ ಮಹಿಳೆಯರ ದಾಖಲೆ ಮತ್ತು ಫಾರಂಗಳನ್ನು ಪರಿಶೀಲನೆ ನಡೆಸಿದರು.

ಗರ್ಭಿಣಿ ಮಹಿಳೆ ಹಾಗೂ ಬರುವ ಪೋಷಕರಿಗೆ ಜಾಗೃತಿ ಮೂಡಿಸಲು ಹಾಗೂ ಎಚ್ಚರಿಕೆ ನೀಡಲು ಶಿಕ್ಷೆ ಮತ್ತು ದಂಡ ಹಾಗೂ ಹೆಣ್ಣು ಮಕ್ಕಳ ಮಹತ್ವ, ಲಿಂಗ ಪತ್ತೆ ಕಾನುನೂಬಾಹಿರ ಎಂಬ ಜಾಗೃತಿ ಸೂಚನಾ ಫಲಕಗಳನ್ನು ದೊಡ್ಡ ಗಾತ್ರದಲ್ಲಿ ಪ್ರದರ್ಶನ ಮಾಡುವಂತೆ ಸೂಚನೆ ನೀಡಿದರು.

ತಹಸೀಲ್ದಾರ್ ಎಸ್.ವಿ.ಲೋಕೇಶ್ ಮಾತನಾಡಿ, ಭ್ರೂಣ ಲಿಂಗ ಪತ್ತೆ ನಿಷೇಧ ಹಾಗೂ ಅಪ್ರಾಪ್ತೆಯರು ಗರ್ಭಿಣಿಯಾಗುವುದನ್ನು ತಡೆಯಲು ಜಿಲ್ಲಾಧಿಕಾರಿಗಳ ಆದೇಶದಂತೆ ತಾಲೂಕು ಮಟ್ಟದ ಜಾಗೃತಿ ಸಮಿತಿ ರಚನೆ ಮಾಡಲಾಗಿದೆ. ತಾಲೂಕಿನ ಪ್ರತಿಯೊಂದು ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಆರೋಗ್ಯ ಇಲಾಖೆ ಸಿಡಿಪಿಒ ಅಧಿಕಾರಿಗಳ ತಂಡ ಭೇಟಿಕೊಟ್ಟು ನಿಟ್ಟಾಗಿ ಪರಿಶೀಲನೆ ನಡೆಸಲಾಗುತ್ತಿದೆ. ಇಲ್ಲಿಯವರೆವಿಗೂ ಯಾವುದೇ ಲೋಪದೋಷಗಳು ಕಂಡುಬಂದಿಲ್ಲ ಎಂದರು.

ಮುಂದಿನ ದಿನಗಳಲ್ಲಿ ಯಾವುದೇ ತಪ್ಪು ನಡೆಯದಂತೆ ಜಾಗೃತಿ ವಹಿಸಲು ಸೂಚಿಸಲಾಗಿದೆ. 18 ವರ್ಷದೊಳಗಿನವರು ಸ್ಕ್ಯಾನಿಂಗ್ ಗೆ ಬಂದಾಗ ಪೋಕ್ಸೋ ಕಾಯ್ದೆ ಪ್ರಕಾರ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆಗೆ ಹಾಗೂ ತಾಲೂಕು ವೈದ್ಯಾಧಿಕಾರಿಗಳಿಗೆ ಮಾಹಿತಿ ನೀಡಬೇಕೆಂದು ಸೂಚನೆ ನೀಡಲಾಗಿದೆ ಎಂದರು.

ತಾಲೂಕು ವೈದ್ಯಾಧಿಕಾರಿ ಡಾ.ಪಿ.ವೀರಭದ್ರಪ್ಪ ಮಾತನಾಡಿ, ಒಂದು ಮತ್ತು ಎರಡನೇ ಹೆಣ್ಣು ಮಗು ಆಗಿ ನಂತರ ಗರ್ಣಿಣಿಯಾಗಿರುವ ಮಹಿಳೆಯರು ಹಾಗೂ ಅಪ್ರಾಪ್ತೆಯರು ಸ್ಯಾನಿಂಗ್ ಸೆಂಟರ್‌ಗಳಿಗೆ ಭೇಟಿಕೊಟ್ಟಾಗ ಕೂಡಲೇ ತಾಲೂಕು ವೈದ್ಯಾಧಿಕಾರಿಗಳು ಹಾಗೂ ಸಿಡಿಪಿಒ ಮಾಹಿತಿ ನೀಡಬೇಕು ಎಂದರು.

ಸ್ಕ್ಯಾನಿಂಗ್ ಮಾಡುವಾಗ ಕಡ್ಡಾಯವಾಗಿ ವಯಸ್ಸು ಖಾತರಿ ಪಡಿಸಿಕೊಳ್ಳಲು ಎಸ್‌ಎಸ್‌ಎಲ್‌ಸಿ ಅಂಕ ಪಟ್ಟಿ ಪರಿಶೀಲನೆ ನಡೆಸಬೇಕು. ಪ್ರತಿದಿನ ಸ್ಕ್ಯಾನಿಂಗ್ ಮಾಡುವ ವರದಿಯನ್ನು ಆರೋಗ್ಯ ಇಲಾಖೆಗೆ ನೀಡಬೇಕು. ಕಾನೂನು ಉಲ್ಲಂಘನೆ ಮಾಡುವ ಸ್ಕ್ಯಾನಿಂಗ್ ಸೆಂಟರ್ ವಿರುದ್ಧ ಕಠಿಣ ಕ್ರಮಕ್ಕೆ ವರದಿ ನೀಡಲಾಗುವುದು. ಹೀಗಾಗಿ ಭ್ರೂಣ ಪತ್ತೆ, ಭ್ರೂಣ ಹತ್ಯೆಯಂಥ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಎಚ್ಚರಿಕೆ ನೀಡಿದರು.

ಈ ವೇಳೆ ತಾಲೂಕು ಆಸ್ಪತ್ರೆ ವೈದ್ಯಾಧಿಕಾರಿ ಡಾ. ಸಂಜಯ್ ಹಾಗೂ ಸಿಬ್ಬಂದಿ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ಒಪ್ಪಿಗೆ ಪಡೆಯದೇ ಭೂಮಿ ಸ್ವಾಧೀನಕ್ಕೆ ಮುಂದಾಗಿದ್ದಕ್ಕೆ ವಿರೋಧ
ಮಳೆಗೂ ಮುನ್ನ ಪ್ರತಿ ಗ್ರಾಮಕ್ಕೆ ಕುಡಿವ ನೀರಿನ ವ್ಯವಸ್ಥ ಮಾಡಿ: ಶಾಸಕ ಬಿ.ವೈ.ವಿಜಯೇಂದ್ರ