ಶಿವಮೊಗ್ಗ: ಶಿವಮೊಗ್ಗಕ್ಕೆ ಆಗಮಿಸಿದ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರನ್ನು ಶಾಸಕ ಎಸ್.ಎನ್.ಚನ್ನಬಸಪ್ಪ ನೇತೃತ್ವದ ನಿಯೋಗ ಶುಕ್ರವಾರ ಭೇಟಿಯಾಗಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವ ಕುರಿತು ಚರ್ಚೆ ನಡೆಸಿದರು.

ಶಿವಮೊಗ್ಗ ಮಹಾನಗರ ಪಾಲಿಕೆಯ ಸದಸ್ಯರ ಆಡಳಿತಾವಧಿ ಪೂರ್ಣಗೊಂಡ ಸುಮಾರು ಒಂದೂವರೆ ವರ್ಷ ಆಗಿದೆ. ಚುನಾಯಿತ ಪ್ರತಿನಿಧಿಗಳಿಲ್ಲದೆ ಮಹಾನಗರ ಪಾಲಿಕೆಯಲ್ಲಿ ನಾಗರಿಕರ ಕುಂದುಕೊರತೆಗಳಿಗೆ ಪರಿಹಾರ ದೊರಕುತ್ತಿಲ್ಲ. ಜೊತೆಗೆ ಅಭಿವೃದ್ಧಿ ಕಾರ್ಯಗಳಿಗೂ ಹಿನ್ನಡೆ ಉಂಟಾಗಿದೆ. ಇದನ್ನು ಪರಿಗಣಿಸಿ ಶೀಘ್ರದಲ್ಲಿ ಚುನಾವಣೆ ನಡೆಸಬೇಕು ಎಂದು ಮನವಿ ಮಾಡಿದರು.
ಮಹಾನಗರ ಪಾಲಿಕೆಗೆ ಜನಪ್ರತಿನಿಧಿಯ ಅವಶ್ಯಕತೆ ಇದ್ದು, ಪಾಲಿಕೆ ಚುನಾವಣೆ ಪ್ರಕ್ರಿಯೆ ತ್ವರಿತಗೊಳಿಸಿ, ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷ ಜಗದೀಶ್, ನಗರಾಧ್ಯಕ್ಷ ಮೋಹನ್ ರೆಡ್ಡಿ, ಸುರೇಖಾ ಮುರಳಿಧರ್ ಮತ್ತಿತರರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.