ಟರ್ಕಿ ದೇಶದ ಏಜ್ ವಿಶ್ವವಿದ್ಯಾಲಯದ ರಂಗಕಲೆಗಳ ತಜ್ಞ ಡಾ. ಗುರ್ಬಜ್ ಅಕ್ತಾಸ್ ಅವರು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ ಹಾಗೂ ಯಕ್ಷಗಾನ ಕೇಂದ್ರಕ್ಕೆ ಭೇಟಿ ನೀಡಿದರು.
ಕನ್ನಡಪ್ರಭ ವಾರ್ತೆ ಉಡುಪಿ
ಟರ್ಕಿ ದೇಶದ ಏಜ್ ವಿಶ್ವವಿದ್ಯಾಲಯದ ರಂಗಕಲೆಗಳ ತಜ್ಞ ಡಾ. ಗುರ್ಬಜ್ ಅಕ್ತಾಸ್ ಅವರು ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ ಹಾಗೂ ಯಕ್ಷಗಾನ ಕೇಂದ್ರಕ್ಕೆ ಭೇಟಿ ನೀಡಿದರು.
ಇಲ್ಲಿಯ ಗ್ರಂಥಾಲಯ, ಪ್ರಾಚ್ಯವಸ್ತು ಸಂಗ್ರಹಾಲಯ, ದಾಖಲೀಕರಣ ವೀಕ್ಷಿಸಿದ ಅವರು ಕೇಂದ್ರದ ಬಗೆಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸಾಯನ್ಸ್ ನ ನಿರ್ದೇಶಕ ಪ್ರೊ. ವರದೇಶ್ ಹಿರೇಗಂಗೆ ಅವರೊಂದಿಗಿದ್ದರು. ಕೇಂದ್ರದ ಆಡಳಿತಾಧಿಕಾರಿ ಡಾಬಿ. ಜಗದೀಶ್ ಶೆಟ್ಟಿ ಕೇಂದ್ರಗಳ ಬಗ್ಗೆ ಮಾಹಿತಿ ನೀಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.