ಶಿರೂರು ಪರ್ಯಾಯ ಸಮಿತಿಯಿಂದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ

KannadaprabhaNewsNetwork |  
Published : Oct 15, 2025, 02:08 AM IST
14ಹೆಗ್ಗಡೆಉಡುಪಿ ಶಿರೂರು ಪರ್ಯಾಯ ಸಮಿತಿ ಹೆ್ೆಗ್ಗಡೆ ಅವರನ್ನು ಭೇಟಿ ಮಾಡಿತು | Kannada Prabha

ಸಾರಾಂಶ

ಉಡುಪಿ ಶ್ರೀ ಕೃಷ್ಣಮಠದ ಭಾವಿ ಪರ್ಯಾಯ ಶಿರೂರು ಮಠದ ಪರ್ಯಾಯೋತ್ಸವದ ಸ್ವಾಗತ ಸಮಿತಿ ಪದಾಧಿಕಾರಿಗಳು ಮಂಗಳವಾರ ಸಮಿತಿ ಗೌರವಾಧ್ಯಕ್ಷ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿದರು.

ಉಡುಪಿ: ಉಡುಪಿ ಶ್ರೀ ಕೃಷ್ಣಮಠದ ಭಾವಿ ಪರ್ಯಾಯ ಶಿರೂರು ಮಠದ ಪರ್ಯಾಯೋತ್ಸವದ ಸ್ವಾಗತ ಸಮಿತಿ ಪದಾಧಿಕಾರಿಗಳು ಮಂಗಳವಾರ ಸಮಿತಿ ಗೌರವಾಧ್ಯಕ್ಷ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಪರ್ಯಾಯ ಮಹೋತ್ಸವದ ಪೂರ್ವಭಾವಿಯಾಗಿ ಈವರೆಗೆ ನಡೆದ ಸಿದ್ಧತೆ ಹಾಗು ಮುಂದಿನ ಕಾರ್ಯ ಯೋಜನೆಯ ಬಗ್ಗೆ ಸಮಾಲೋಚನೆ ನಡೆಸಿದರು. ಪರ್ಯಾಯ ಸ್ವಾಗತ ಸಮಿತಿ ಆಧ್ಯಕ್ಷ ಶಾಸಕ ಯಶ್ ಪಾಲ್ ಸುವರ್ಣ ಮಾತನಾಡಿ, ಜನವರಿಯಲ್ಲಿ ಪರ್ಯಾಯ ಪೀಠೋರೋಣ ಮಾಡಲಿರುವ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಮಹೋತ್ಸವವನ್ನು ಶ್ರೀಕೃಷ್ಣ ದೇವರ ಭಕ್ತರ ಸಹಕಾರದೊಂದಿಗೆ ಅತ್ಯಂತ ವೈಭವದಿಂದ ನಾಡ ಹಬ್ಬದಂತೆ ಆಯೋಜಿಸುವ ಸಂಕಲ್ಪ ಮಾಡಿದ್ದು, ಗೌರವ ಅಧ್ಯಕ್ಷರಾಗಿ ಪರ್ಯಾಯ ಮಹೋತ್ಸವದ ಯಶಸ್ಸಿಗೆ ಸಲಹೆ ಸೂಚನೆ ಸಹಕಾರ ಮಾರ್ಗದರ್ಶನ ನೀಡುವಂತೆ ಮನವಿ ಮಾಡಿದರು.ಇದಕ್ಕೆ ಪೂರಕವಾಗಿ ಮಾತನಾಡಿದ ಹೆಗ್ಗಡೆ ಸಂಪೂರ್ಣ ಸಹಕಾರದ ಭರವಸೆ ನೀಡಿದರು. ನ. 7ರಂದು ವೀರೇಂದ್ರ ಹೆಗ್ಗಡೆ ಅವರ ನೇತೃತ್ವದಲ್ಲಿ ಸ್ವಾಗತ ಸಮಿತಿ ಸಭೆ ನಡೆಸುವುದೆಂದು ನಿರ್ಧರಿಸಲಾಯಿತು. ನಂತರ ಡಿ. ಹರ್ಷೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಾಯಿತು.ಈ ಸಂದರ್ಭ ಪರ್ಯಾಯ ಶ್ರೀ ಶಿರೂರು ಮಠದ ದಿವಾನ ಉದಯ ಕುಮಾರ್ ಸರಳತ್ತಾಯ, ಸ್ವಾಗತ ಸಮಿತಿ ಪ್ರಧಾನ ಕಾರ್ಯದರ್ಶಿ ಮಟ್ಟಾರು ರತ್ನಾಕರ ಹೆಗ್ಡೆ, ಸಮಿತಿಯ ಕಾರ್ಯಾಧ್ಯಕ್ಷ ಕಟೀಲು ಗೋಪಾಲಕೃಷ್ಣ ಅಸ್ರಣ್ಣ, ಕೋಶಾಧಿಕಾರಿ ಜಯಪ್ರಕಾಶ್ ಕೆದ್ಲಾಯ, ಸಂಚಾಲಕರಾದ ಶ್ರೀ ವಿಷ್ಣುಮೂರ್ತಿ ಆಚಾರ್ಯ ಮತ್ತು ಶ್ರೀಧರ ಭಟ್ ಉಚ್ಚಿಲ ಮತ್ತು ಸಮಿತಿ ಕಾರ್ಯದರ್ಶಿ ಮೋಹನ್ ಭಟ್ ಪ್ರಚಾರ ಸಮಿತಿಯ ನಂದನ್ ಜೈನ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಸ್ಟೆಲ್ ಮಕ್ಕಳಿಗೆ ಹೊಸ ಜಾತಿ ಪ್ರಮಾಣಪತ್ರ ಶಾಕ್‌
₹400 ಕೋಟಿ ಇದ್ದ 2 ಕಂಟೇನರ್‌ ಲಾರಿಗಳೇ ಬೆಳಗಾವೀಲಿ ನಾಪತ್ತೆ!