ಈ ದುರ್ಘಟನೆಗೆ ಕಾರಣವಾದವರು ಕಾನೂನಿನಬಾಹುಗಳಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡುವುದಿಲ್ಲ.
ಕನ್ನಡಪ್ರಭ ವಾರ್ತೆ ಮೈಸೂರು
ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಮತ್ತು ಕುಟುಂಬಕ್ಕೆ ನ್ಯಾಯ ದೊರಕಬೇಕು ಎಂದು ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.ಟಿ. ನರಸೀಪುರ ತಾಲೂಕಿನ ಹಳೇಕೆಂಪಯ್ಯನಹುಂಡಿ ಗ್ರಾಮದಲ್ಲಿ ಆತ್ಮಹತ್ಯೆಗೆ ಶರಣಾದ ಶಿವಣ್ಣ, ನಾಗರತ್ನ ಹಾಗೂ ರಕ್ಷಿತಾ ಅವರ ನಿವಾಸಕ್ಕೆ ಮಂಗಳವಾರ ಭೇಟಿ ನೀಡಿ, ಕುಟುಂಬಸ್ಥರ ಸಾಂತ್ವನ ಹೇಳಿದ ಅವರು, ಈ ಅಮಾನವೀಯ ಘಟನೆ ನನ್ನ ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಹಾಗೂ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿ ದೊರೆಯಲಿ ಎಂದರು.ಈ ದುರ್ಘಟನೆಗೆ ಕಾರಣವಾದವರು ಕಾನೂನಿನಬಾಹುಗಳಿಂದ ತಪ್ಪಿಸಿಕೊಳ್ಳಲು ಅವಕಾಶ ನೀಡುವುದಿಲ್ಲ. ಘಟನೆ ತಿಳಿದ ಕ್ಷಣದಿಂದಲೇ ಪೊಲೀಸ್ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಮಾಹಿತಿ ಪಡೆಯುತ್ತಿರುವ ಜೊತೆಗೆ ಪ್ರಕರಣದ ಸಂಪೂರ್ಣ ತನಿಖೆಯನ್ನು ಶೀಘ್ರಗತಿಯಲ್ಲಿ ಕೈಗೊಂಡು, ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ ಎಂದು ಅವರು ತಿಳಿಸಿದರು. ಈ ವೇಳೆ ಸಂಸದ ಸುನಿಲ್ ಬೋಸ್, ಶಾಸಕ ಸಿ. ಪುಟ್ಟರಂಗಶೆಟ್ಟಿ ಮೊದಲಾದವರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.