ನ್ಯಾಯಾಧೀಶರಿಂದ ವಿವಿಧ ಅಂಗನವಾಡಿ ಕೇಂದ್ರಗಳಿಗೆ ಭೇಟಿ

KannadaprabhaNewsNetwork |  
Published : Feb 16, 2024, 01:48 AM IST
15ಸಿಎಚ್‌ಎನ್‌63ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ಎಂ. ಶ್ರೀಧರ ಅವರು ಚಾಮರಾಜನಗರ ತಾಲೂಕಿನ ಕೋಡಿಮೋಳೆ ಮತ್ತು ಬಸವನಪುರ ಗ್ರಾಮಗಳಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಇತ್ತೀಚೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.  | Kannada Prabha

ಸಾರಾಂಶ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಶ್ರೀಧರ ತಾಲೂಕಿನ ಕೋಡಿಮೋಳೆ ಮತ್ತು ಬಸವನಪುರ ಗ್ರಾಮಗಳಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಇತ್ತೀಚೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಎಂ. ಶ್ರೀಧರ ತಾಲೂಕಿನ ಕೋಡಿಮೋಳೆ ಮತ್ತು ಬಸವನಪುರ ಗ್ರಾಮಗಳಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಇತ್ತೀಚೆಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು.

ಕೋಡಿಮೋಳೆ ಗ್ರಾಮದಲ್ಲಿರುವ 1ರಿಂದ 3ನೇ ಕೇಂದ್ರದ ಅಂಗನವಾಡಿಗಳಿಗೆ ಭೇಟಿ ನೀಡಿದ ನ್ಯಾಯಾಧೀಶರು ಅಂಗನವಾಡಿ ಕಟ್ಟಡ ವ್ಯವಸ್ಥೆ, ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ ಹಾಗೂ ಸ್ವಚ್ಚತೆ ಬಗ್ಗೆ ಪರಿಶೀಲನೆ ನಡೆಸಿದರು. ಚಂದಕವಾಡಿ ಹೋಬಳಿಯ ಬಸವನಪುರ ಗ್ರಾಮದಲ್ಲಿರುವ 1 ಮತ್ತು 2ರ ಅಂಗನವಾಡಿಗಳಿಗೆ ಭೇಟಿ ನೀಡಿ ಸರ್ಕಾರದಿಂದ ಮಕ್ಕಳಿಗೆ ನೀಡುವ ಪೌಷ್ಠಿಕ ಆಹಾರ ಹಾಗೂ ಸಿಬ್ಬಂದಿಗಳ ಕರ್ತವ್ಯದ ಬಗ್ಗೆ ಪರಿಶೀಲಿಸಿದರು.ಕೋಡಿಮೋಳೆ ಗ್ರಾಮದ ಅಂಗನವಾಡಿ ಮುಂಭಾಗದ ಚರಂಡಿಗಳಲ್ಲಿ ಸ್ಲ್ಯಾಬ್ ವ್ಯವಸ್ಥೆ ಇಲ್ಲದಿರುವುದು, ಇದರಿಂದ ಮಕ್ಕಳು ಸುಗಮವಾಗಿ ದಾಟಲು ಗೇಟಿಗೆ ಸಂಪೂರ್ಣ ಚಪ್ಪಡಿ ಹಾಕದೇ ಇರುವುದರಿಂದ ಹಾಗೂ ಚರಂಡಿ ನೀರು ಶೇಖರಣೆ ಆಗುವುದರಿಂದ ದುರ್ವಾಸನೆ ಉಂಟಾಗಿ ಮಕ್ಕಳ ಆರೋಗ್ಯಕ್ಕೆ ತೊಂದರೆ ಉಂಟಾಗದಂತೆ ಕ್ರಮ ತೆಗೆದುಕೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.ಅಂಗನವಾಡಿ ಕೇಂದ್ರಗಳಿಗೆ ವಿದ್ಯುತ್ ಸಂಪರ್ಕದ ಕೊರತೆ, ಮೇಲ್ಛಾವಣಿ ಶಿಥಿಲಾವಸ್ಥೆಯನ್ನು ಸಮಸ್ಯೆಗಳನ್ನು ಅದಷ್ಟು ಬೇಗನೆ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಸವನಪುರ ಗ್ರಾಮದ ಅಂಗನವಾಡಿ-2ರ ಹತ್ತಿರ ಇರುವ ಕೆರೆಗೆ ಸುತ್ತ ಬೇಲಿ ಇಲ್ಲದಿರುವುದನ್ನು ವೀಕ್ಷಿಸಿದ ನ್ಯಾಯಾಧೀಶರು ಕೆರೆಯ ಸುತ್ತ ಬೇಲಿ ಹಾಕಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖಾಧಿಕಾರಿಗಳಿಗೆ ಸೂಚಿಸಿದರು. ಬಸವನಪುರ ಗ್ರಾಮದ ಅಂಗನವಾಡಿ ಕೇಂದ್ರದ ಆರ್.ಸಿ.ಸಿ. ಮೇಲ್ಛಾವಣಿಯು ದಿನದಿಂದ ದಿನಕ್ಕೆ ಕ್ಷೀಣಿಸುತ್ತಿದ್ದು, ಕುಸಿದು ಬೀಳುವ ಸಂಭವ ಇರುವುದರಿಂದ ಶೀಘ್ರ ಕ್ರಮಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ಪತ್ರ ವ್ಯವಹಾರ ನಡೆಸುವಂತೆ ತಿಳಿಸಿದರು. ವಿದ್ಯುತ್ ಬಿಲ್ ಕಟ್ಟದೇ ಮಕ್ಕಳು ಬಿಸಿಲಿನ ತಾಪದಿಂದ ಉಸಿರುಕಟ್ಟುವ ಪರಿಸ್ಥಿತಿ ಕಂಡು ಬಂದಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಅಧಿಕಾರಿಗಳು ಕೂಡಲೇ ಬಾಕಿ ವಿದ್ಯುತ್ ಬಿಲ್ ಪಾವತಿಸಿ, ಮಕ್ಕಳಿಗೆ ವಿದ್ಯುತ್ ಹಾಗೂ ಫ್ಯಾನ್ ಸೌಕರ್ಯ ನೀಡುವಂತೆ ನ್ಯಾಯಾಧೀಶರು ಸೂಚಿಸಿದರು. ಅಂಗನವಾಡಿ ಕೇಂದ್ರಗಳಿಗೆ ಹೆಚ್ಚು ಬೆಳಕು ಬರುವಂತಹ ವಿದ್ಯುತ್ ಬಲ್ಬನ್ನು ಅಳವಡಿಸಬೇಕು. ಅಲ್ಲದೆ ಕಾನೂನು ನೆರವಿನ ಅಗತ್ಯವಿದ್ದಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರವನ್ನು ಸಂಪರ್ಕಿಸುವಂತೆ ಅಂಗನವಾಡಿಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರಿಗೆ ತಿಳಿಸಿದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ