ಕನ್ನಡಪ್ರಭ ವಾರ್ತೆ ರಾಯಚೂರು
ತಾಲೂಕಿನ ಯರಗೇರಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಆವರಣದಲ್ಲಿ ರಾಯಚೂರು ತಾಲೂಕಾಡಳಿತ, ತಾಪಂ ಹಾಗೂ ವಿವಿಧ ಇಲಾಖೆಯಗಳ ಸಹಯೋಗ ದೊಂದಿಗೆ ಹಮ್ಮಿಕೊಂಡಿದ್ದ ಪ್ರಜಾಸೇವಾ ಆಂದೋಲನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶನಿವಾರ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮಹತ್ವಾ ಕಾಂಕ್ಷೆಯ ‘ಪ್ರಜಾ ಸೇವೆ ಆಂದೋಲನ’ ಕಾರ್ಯಕ್ರಮವನ್ನು ಯರಗೇರಾ ಹೋಬಳಿ ಮಟ್ಟದಲ್ಲಿ ಆಯೋಜಿಸಲಾಗಿದ್ದು, ಸರ್ಕಾರದ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಒಂದೇ ಸೂರಿನಡಿ ಸೇರಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುತ್ತಿದ್ದಾರೆ. ಸಾರ್ವಜನಿಕರು ಸಲ್ಲಿಸುವ ಅರ್ಜಿಗಳಿಗೆ ಸ್ಥಳದಲ್ಲೇ ಇತ್ಯರ್ಥಪಡಿಸಲಾಗುತ್ತಿದೆ. ಹೆಚ್ಚುವರಿ ಪರಿಶೀಲನೆ ಅಗತ್ಯವಿರುವ ಅರ್ಜಿಗಳನ್ನು ಸಂಬಂಧಪಟ್ಟ ಕಚೇರಿಗಳಿಗೆ ರವಾನಿಸಿ, ಕೇವಲ 15 ದಿನಗಳ ಒಳಗಾಗಿ ಕಡ್ಡಾಯವಾಗಿ ಪರಿಹಾರ ಒದಗಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೋಪಾಲ ಗೆಣ್ಣೂರ ಮಾತನಾಡಿದರು. ಈ ವೇಳೆ ಯರಗೇರಾ ಗ್ರಾಮದ ಸರ್ಕಾರಿ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಯಶೋಧ ಅವರಿಂದ ಭರತ ನಾಟ್ಯ ನೃತ್ಯದ ಪ್ರದರ್ಶನ ಮಾಡಿದರು. ಇದಕ್ಕೂ ಮುಂಚೆ ಶಾಲೆ ಆವರಣದಲ್ಲಿ ವಿವಿಧ ಇಲಾಖೆಗಳಿಂದ ಹಮ್ಮಿ ಕೊಳ್ಳಲಾಗಿದ್ದ ಮಳಿಗೆಗಳಿಗೆ ಶಾಸಕರು ಚಾಲನೆ ನೀಡಿ, ಮಳಿಗೆಗಳನ್ನು ವೀಕ್ಷಣೆ ಮಾಡಿದರು.ನಂತರ ಅರಣ್ಯ ಇಲಾಖೆಯಿಂದ ಸಸಿ ನೆಡುವ ಕಾರ್ಯಕ್ರಮಕ್ಕೆ ಶಾಸಕರು ಶಾಲೆಯ ಆವರಣದಲ್ಲಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅರುಣಾಂಗ್ಷು ಗಿರಿ, ಆಮವಾ ವಿವಿ ಸಿಂಡಿಕೇಟ್ ಸದಸ್ಯ ಚನ್ನಬಸವ ನಾಯಕ, ಜಿಪಂ ಯೋಜನಾ ನಿರ್ದೇಶಕ ಶರಣಬಸವ, ತಹಸೀಲ್ದಾರ್ ಸುರೇಶ್ ವರ್ಮಾ, ತಾಪಂ ಇಒ ಚಂದ್ರಶೇಖರ ಪವರ್ ಸೇರಿ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿ - ಸಿಬ್ಬಂದಿ ವರ್ಗದವರು, ಮುಖಂಡರು, ಯರಗೇರಾ ಹಾಗೂ ಸುತ್ತಮುತ್ತಲಿನ ಹಳ್ಳಿಯ ಗ್ರಾಮಸ್ಥರು ಸೇರಿದಂತೆ ಇತರರು ಉಪಸ್ಥಿತರಿದ್ದರು.