ಕನ್ನಡಪ್ರಭ ವಾರ್ತೆ ಹೊಳಲ್ಕೆರೆ
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕನ್ನಡ ಸಾಹಿತ್ಯ ಪರಿಷತ್ ಆಯೋಜಿಸಿದ್ದ ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮದಿನದ ಪ್ರಯುಕ್ತ ಎಂಜಿನಿಯರ್ಸ್ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದರು.
ಮೈಸೂರು ಸಾಬೂನು ಕಾರ್ಖಾನೆಯ ಸ್ಥಾಪನೆ, ಮೈಸೂರು ಬ್ಯಾಂಕ್ ಸ್ಥಾಪನೆ, ಮೈಸೂರು ವಿಶ್ವವಿದ್ಯಾಲಯದ ಸ್ಥಾಪನೆ, ಮೈಸೂರು ಮತ್ತು ಬೆಂಗಳೂರಿನಲ್ಲಿ ಸಾರ್ವಜನಿಕ ಗ್ರಂಥಾಲಯಗಳ ಸ್ಥಾಪನೆ, ಮೈಸೂರು ಚೇಂಬರ್ ಆಫ್ ಕಾಮರ್ಸ್ ಸ್ಥಾಪನೆ, ಕನ್ನಡ ಸಾಹಿತ್ಯ ಪರಿಷತ್ ಸ್ಥಾಪನೆ, ಶ್ರೀ ಜಯ ಚಾಮರಾಜೇಂದ್ರ ವೃತ್ತಿ ಶಿಕ್ಷಣ ತರಬೇತಿ ಸಂಸ್ಥೆಯ ಸ್ಥಾಪನೆ ಹೀಗೆ ಹತ್ತು ಹಲವು ಕಾರ್ಯಕ್ರಮಗಳು ಜನ ಸಾಮಾನ್ಯರ ಮನಸ್ಸಿನಲ್ಲಿ ಶ್ರೀಯುತರ ಮನೆ ಮಾತಾಗಿ ಇಂದು ಉಳಿದಿವೆ ಎಂದು ತಿಳಿಸಿದರು.ಕನ್ನಡ ಬೆಂಬಲಿಗರಾಗಿ ವಿಚಾರ ಸಂಕಿರಣಗಳನ್ನು ಕನ್ನಡದಲ್ಲಿ ಸ್ಥಾಪಿಸಿ ನಡೆಸಬೇಕೆಂದು ಬಯಸಿದ್ದರು, ಭಾರತ ರತ್ನ ಪ್ರಶಸ್ತಿ ಪಡೆದ ಮೊದಲ ಕನ್ನಡಿಗ ಇವರ ಸೇವೆ ಅನನ್ಯ ಎಂದು ನುಡಿದರು.
ಪ್ರಾಸ್ತಾವಿಕವಾಗಿ ಆಶಯ ನುಡಿಗನ್ನಾಡಿದ ಶ್ರೀ ಸಿದ್ದವನಹಳ್ಳಿ ವೀರೇಶ್ ಕುಮಾರ್, ಯಾವುದೇ ಕೆಲಸ ಕೀಳಲ್ಲ. ನಿನ್ನ ಕೆಲಸ ಈ ರಸ್ತೆಯ ಭಾಗವನ್ನು ಗುಡಿಸುವುದಾಗಿದ್ದರೆ ಜಗತ್ತಿನ ಅತ್ಯಂತ ಸ್ವಚ್ಛ ರಸ್ತೆ ಆಗುವಂತೆ ಗುಡಿಸು. ಅದೃಷ್ಟ ಎನ್ನುವುದು ದೇವರ ಕೈಯಲ್ಲಿ ನಿಕ್ಷೀಯವಾಗಿರುವ ಸಾಧನವಲ್ಲ. ನಮ್ಮ ವಿಧಿ ಮನುಷ್ಯನ ಕೈಯಲ್ಲಿರುವ ಸಾಧನ ಎಂದು ಹೇಳುತ್ತಿದ್ದವರು ಸರ್ ಎಂ. ವಿಶ್ವೇಶ್ವರಯ್ಯನವರು ಎಂದು ನುಡಿದರು. ಸಮಾರಂಭದ ಅಧ್ಯಕ್ಷತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಕೊಟ್ರಪ್ಪ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಕನ್ನಡ ಭಾಷಾ ವಿಭಾಗದ ಸಹಪ್ರಾಧ್ಯಪಕರಾದ ಟಿ.ಮಂಜುನಾಥ್, ಅರ್ಥಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕರಾದ ಪ್ರವೀಣ್, ಆರೋಗ್ಯ ಇಲಾಖೆಯ ಅಧ್ಯಕ್ಷರಾದ ರಂಗನಾಥ್ ಎಂ.ಕೆ.ಪ್ರಥಮ ದರ್ಜೆ ಗುತ್ತಿಗೆದಾರರಾದ ಎಸ್.ಮಾರುತೇಶ್, ಗೌರವ ಕಾರ್ಯದರ್ಶಿಯಾದ ಬಿ.ಜಿ.ಹಳ್ಳಿ ವೆಂಕಟೇಶ್, ಸಿಬ್ಬಂದಿ ನಾರಪ್ಪ, ರಂಗಸ್ವಾಮಿ, ತೃತೀಯ ಬಿಎ ವಿದ್ಯಾರ್ಥಿ ಅವಿನಾಶ್, ಕನ್ನಡ ವಿಭಾಗದ ವಿದ್ಯಾರ್ಥಿಗಳು, ವಿದ್ಯಾರ್ಥಿನಿಯರು ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.