: ಶಾಸಕ ಜಿ.ಎಚ್.ಶ್ರೀನಿವಾಸ್ತ । ತರೀಕೆರೆಯಲ್ಲಿ 10ನೇ ವರ್ಷದ ಇಂಜಿನಿಯರ್ಸ್ ದಿನಾಚರಣೆ
ಸರ್.ಎಂ.ವಿಶ್ವೇಶ್ವರಯ್ಯನವರ ಕ್ರಿಯಾಶೀಲತೆ, ಬದ್ಧತೆ ಮತ್ತು ಪ್ರಾಮಾಣಿಕಯನ್ನು ಪರಿಗಣಿಸಿ ಅವರಿಗೆ ಮೈಸೂರು ರಾಜ ಸಂಸ್ಥಾನದಲ್ಲಿ ದಿವಾನರ ಹುದ್ದೆ ನೀಡಲಾಯಿತು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದರು.
ತರೀಕೆರೆ ಪಟ್ಟಣದಲ್ಲಿ ತರೀಕೆರೆ-ಅಜ್ಜಂಪುರ ತಾಲೂಕು ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಷನ್ ನಿಂದ ಆಯೋಜಿಸಿದ್ದ 10ನೇ ವರ್ಷದ ಎಂಜಿನಿಯರ್ಸ್ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.ಸರ್.ಎಂ.ವಿಶ್ವೇಶ್ವರಯ್ಯ ಅವರನ್ನು ಸ್ಮರಿಸಿಕೊಳ್ಳಬೇಕಾದ ದಿನ ಇದು. ಅವರು ನಾಡಿಗೆ ನೀಡಿದ ಕೊಡುಗೆ ಅಪಾರ. ತರೀಕೆರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸುಮಾರು ₹600 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲಾಗಿದೆ, ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಶೀಘ್ರದಲ್ಲಿ ಮುಗಿಯಲಿದೆ, ರಾಜ್ಯ ಸರಕಾರ ಕೇತ್ರದ ನೀರಾವರಿ ಯೋಜನೆಗಳಿಗೆ ಹೆಚ್ಚು ಅನುದಾನ ನೀಡಿದೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ತರೀಕೆರೆ ತಾಲೂಕು ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಟಿ.ಯು.ವಸಂತಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವೈದ್ಯ ಡಾ.ಕೆ.ವಿ.ವಸಂತ್ ಸಂಸ್ಥಾಪಕ ಅಧ್ಯಕ್ಷ ಎಚ್.ಸಿ.ಗೋಪಾಲಕೃಷ್ಣ, ಲೋಕೋಪಯೋಗಿ ಇಲಾಖೆಯ ಎಇಇ ಸೋಮಶೇಖರ್, ಪಂಚಾಯತ್ ರಾಜ್ ಎಂಜಿನಿಯರಿಂಗ್ ಉಪವಿಭಾಗದ ಎಇಇ ವಿನೋದ್‌ಕುಮಾರ್, ನಿವೃತ್ತ ಎಇಇ ಟಿ.ಎನ್.ರೇವಣ್ಣಒಡೆಯರ್, ಉಪನ್ಯಾಸಕಿ ನಾಗಶ್ರೀ ತ್ಯಾಗರಾಜ್ ಅಸೋಸಿಯೇಷನ್‌ನ ಪದಾಧಿಕಾರಿಗಳು ಹಾಗೂ ಮತ್ತಿತರರು ಹಾಜರಿದ್ದರು.
18ಕೆಟಿಆರ್.ಕೆ.4ಃ ತರೀಕೆರೆಯಲ್ಲಿ 10ನೇ ವರ್ಷದ ಎಂಜಿನಿಯರ್ಸ್ ದಿನಾಚರಣೆಯನ್ನು ಶಾಸಕ ಜಿ.ಎಚ್.ಶ್ರೀನಿವಾಸ್ ಉದ್ಘಾಟಿಸಿದರು. ತರೀಕೆರೆ ತಾಲೂಕು ಸಿವಿಲ್ ಎಂಜಿನಿಯರ್ಸ್ ಅಸೋಸಿಯೇಷನ್ ಅಧ್ಯಕ್ಷ ಟಿ.ಯು.ವಸಂತಕುಮಾರ್, ಸಂಸ್ಥಾಪಕ ಅಧ್ಯಕ್ಷ ಎಚ್.ಸಿ.ಗೋಪಾಲಕೃಷ್ಣ ಮತ್ತಿತರರು ಇದ್ದರು.