ಕನ್ನಡಪ್ರಭ ವಾರ್ತೆ ಶಿವಮೊಗ್ಗ
ನಗರದಲ್ಲಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ಸರ್ ಎಂ.ವಿಶ್ವೇಶ್ವರಯ್ಯ ಜನ್ಮದಿನಾಚರಣೆ ಪ್ರಯುಕ್ತ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ವಿಶ್ವೇಶ್ವರಯ್ಯ ನೇತೃತ್ವದಲ್ಲಿ ಮಹತ್ತರ ಯೋಜನೆಗಳು ಜಾರಿಗೊಂಡಿದ್ದವು. ವಿಶ್ವೇಶ್ವರಯ್ಯ ಅವರು ಪಾಲಿಸುತ್ತಿದ್ದ ಸಮಯ ಪಾಲನೆ ಹಾಗೂ ಅವರ ಸರಳ ಜೀವನಶೈಲಿ ಎಲ್ಲರಿಗೂ ಸ್ಫೂರ್ತಿ ಎಂದು ತಿಳಿಸಿದರು.
ವಿಶ್ವೇಶ್ವರಯ್ಯ ಅವರ ಕ್ರೀಯಾಶೀಲ ಕಲ್ಪನೆಗಳು ಹಾಗೂ ಸಾಧನೆಗಳು ನಾಡಿನ ಅಭಿವೃದ್ಧಿಯಲ್ಲಿ ಮಹತ್ತರ ಪಾತ್ರ ವಹಿಸಿತು. ಶೈಕ್ಷಣಿಕ ಹಾಗೂ ಕೈಗಾರಿಕೆಗಳ ಅಭಿವೃದ್ಧಿಗೆ ಅವಿರತವಾಗಿ ಶ್ರಮಿಸಿದರು. ಅವರ ಪ್ರಯತ್ನದಿಂದ ಹೊಸ ಹೊಸ ಕೈಗಾರಿಕೆಗಳು ಆರಂಭಗೊಂಡವು ಎಂದರು.ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಕಾರ್ಯದರ್ಶಿ ವಸಂತ ಹೋಬಳಿದಾರ್ ಮಾತನಾಡಿ, ಸರ್ ಎಂ.ವಿಶ್ವೇಶ್ವರಯ್ಯ ಅವರ ಜೀವನಶೈಲಿ ಪ್ರತಿಯೊಬ್ಬರಿಗೂ ಸ್ಫೂರ್ತಿ. ಅದು ಯಾವುದೇ ವೃತ್ತಿ ಇರಲಿ, ನೀವು ಮಾಡುವ ಕೆಲಸಗಳನ್ನು ಶ್ರೇಷ್ಠ ಮಟ್ಟದಲ್ಲಿ ನಿರ್ವಹಿಸಬೇಕು ಎಂದಿದ್ದರು. ಅವರ ದೂರದೃಷ್ಟಿ, ಸಮಾಜ ಉಪಯುಕ್ತ ಯೋಜನೆಗಳನ್ನು ಇಂದಿಗೂ ಕಾಣಬಹುದಾಗಿದೆ. ಅವರು ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ಅಧ್ಯಯನ ಮಾಡಬೇಕು. ಅವರ ಪ್ರಾಮಾಣಿಕ, ನಿಸ್ವಾರ್ಥ ಸೇವೆ ನಮಗೆ ದಾರಿದೀಪವಾಗಲಿದೆ ಎಂದು ಹೇಳಿದರು.
ಭದ್ರಾವತಿ: ಶ್ರೇಷ್ಠ ರಾಜನೀತಿಜ್ಞ, ಭಾರತರತ್ನ ಸರ್.ಎಂ.ವಿಶ್ವೇಶ್ವರಯ್ಯರವರ ಜನ್ಮದಿನ ಭಾನುವಾರ ನಗರದ ವಿವಿಧೆಡೆ ಆಚರಿಸಲಾಯಿತು.
ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಮಹಾಪ್ರಬಂಧಕ ಎಲ್. ಪ್ರವೀಣ್ ಕುಮಾರ್ ‘ಸ್ವಚ್ಛಭಾರತ ಅಭಿಯಾನ-೨೦೨೪ರ ಅಂಗವಾಗಿ ಸ್ವಚ್ಛತಾ ಪ್ರತಿಜ್ಞೆ’ ಬೋಧಿಸಿದರು.ಕಾರ್ಮಿಕರ ಸಂಘದ ಅಧ್ಯಕ್ಷ ಜೆ. ಜಗದೀಶ್, ಅಧಿಕಾರಿಗಳ ಸಂಘದ ಅಧ್ಯಕ್ಷರು ಪಾರ್ಥಸಾರಥಿ ಮಿಶ್ರಾ, ವಿವಿಧ ಇಲಾಖೆಗಳ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕಾರ್ಮಿಕರು, ಭದ್ರತಾ ಸಿಬ್ಬಂದಿಗಳು ಭಾಗವಹಿಸಿದ್ದರು.ಗುತ್ತಿಗೆ ಕಾರ್ಮಿಕರಿಂದ ಮಾರ್ಲಾಪಣೆ:ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆ ಗುತ್ತಿಗೆ ಕಾರ್ಮಿಕರು ಸಹ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ವಂದನೆಗಳನ್ನು ಸಲ್ಲಿಸಿದರು.ಕಳೆದ ಸುಮಾರು ೨೦ ತಿಂಗಳಿನಿಂದ ಕಾರ್ಖಾನೆ ಮುಂಭಾಗದಲ್ಲಿ ಕಾರ್ಖಾನೆ ಉಳಿವಿಗಾಗಿ ಹಾಗೂ ಗುತ್ತಿಗೆ ಕಾರ್ಮಿಕರಿಗೆ ತಿಂಗಳ ಪೂರ್ತಿ ಉದ್ಯೋಗ ಕಲ್ಪಿಸಿಕೊಡುವಂತೆ ಮತ್ತು ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದೆ. ಈ ನಡುವೆ ಅನ್ನದಾತ ವಿಶ್ವೇಶ್ವರಾಯ ಅವರನ್ನು ಸ್ಮರಿಸಿ ಭವಿಷ್ಯದಲ್ಲಿ ಕಾರ್ಖಾನೆ ಮತ್ತಷ್ಟು ಕೊಡುಗೆ ನೀಡುವಂತಾಗಲಿ ಎಂದು ಪ್ರಾರ್ಥಿಸಿದರು.ಗುತ್ತಿಗೆ ಕಾರ್ಮಿಕರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ :ಸಿದ್ಧಾರೂಢನಗರದ ಡಾ. ಪುನೀತ್ ರಾಜ್‌ಕುಮಾರ್ ಅಭಿಮಾನಿಗಳ ಸಂಘದ ವತಿಯಿಂದ ಭಾರತರತ್ನ ಸರ್.ಎಂ ವಿಶ್ವೇಶ್ವರಾಯರವರ ಜನ್ಮದಿನಾಚರಣೆ ಹಾಗೂ ಅಂತಾ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಿಸಲಾಯಿತು.ವಿಶ್ವೇಶ್ವರಾಯರವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಲ್ಲಿಸುವ ಮೂಲಕ ನಿವೃತ್ತ ಕಾರ್ಮಿಕರಾದ ಎಚ್.ಪಿ ಶಿವಪ್ಪ, ಆರ್. ಗೋವಿಂದಪ್ಪ ಮತ್ತು ರುದ್ರಪ್ಪರವರನ್ನು ಸನ್ಮಾನಿಸಿ ಗೌರವಿಸಲಾಯಿತು.ಸಂಘದ ಅಧ್ಯಕ್ಷ ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಳೆದ ೩ ವರ್ಷಗಳಿಂದ ಸಂಘದ ವತಿಯಿಂದ ರಾಷ್ಟ್ರೀಯ ಹಬ್ಬಗಳನ್ನು ಆಚರಿಸಿಕೊಂಡು ಬರಲಾಗುತ್ತಿದೆ. ಅಲ್ಲದೆ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸಿ ಗೌರವಿಸಲಾಗುತ್ತಿದೆ. ಸರ್.ಎಂ ವಿಶ್ವೇಶ್ವರಾಯರವರು ಕ್ಷೇತ್ರದ ಅನ್ನದಾತರಾಗಿದ್ದು, ಲಕ್ಷಾಂತರ ಜನರಿಗೆ ಆಶ್ರಯದಾತರಾಗಿದ್ದಾರೆ. ಅವರ ಜನ್ಮದಿನ ಆಚರಣೆ ಮಾಡುತ್ತಿರುವುದು ಹೆಮ್ಮೆಯ ವಿಚಾರವಾಗಿದೆ ಎಂದರು.ಪ್ರಮುಖರಾದ ಶಾಂತಕುಮಾರ್, ನಾಗರಾಜ್, ವೀರಭದ್ರಪ್ಪ, ನಾರಾಯಣರೆಡ್ಡಿ, ಶಿವಲಿಂಗಯ್ಯ, ಕುಮಾರಸ್ವಾಮಿ, ನಾಗರತ್ನ, ಸೌಮ್ಯ, ಅಶೋಕ್, ಲಕ್ಷ್ಮೀಕಾಂತ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು. ಪೂರ್ಣಿಮಾ ಸ್ವಾಗಸಿದರು. ಸರ್.ಎಂ.ವಿ ಜನ್ಮದಿನ ಮಾಜಿ ಸೈನಿಕರಿಂದ ಸ್ವಚ್ಛತೆಭದ್ರಾವತಿ: ತಾಲೂಕು ಮಾಜಿ ಸೈನಿಕರ ಸಂಘದ ವತಿಯಿಂದ ಸೆ.೧೫ರ ಭಾನುವಾರ ಭಾರತರತ್ನ, ಶ್ರೇಷ್ಠ ತಂತ್ರಜ್ಞಾನಿ, ಕ್ಷೇತ್ರದ ಅನ್ನದಾತ ಸರ್.ಎಂ.ವಿಶ್ವೇಶ್ವರಯ್ಯ ಜನ್ಮದಿನಾಚರಣೆ ಹಿನ್ನೆಲೆಯಲ್ಲಿ ಶನಿವಾರ ಬೆಳಿಗ್ಗೆ ನಗರದ ಬಿ.ಎಚ್. ರಸ್ತೆ ರೈಲ್ವೆ ನಿಲ್ದಾಣ ಮುಂಭಾಗದಲ್ಲಿರುವ ಸರ್.ಎಂ.ವಿ ಉದ್ಯಾನವನದಲ್ಲಿ ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಯಿತು.ಸಂಘದ ವತಿಯಿಂದ ಪ್ರತಿ ವರ್ಷ ಸರ್.ಎಂ. ವಿಶ್ವೇಶ್ವರಯ್ಯ ಜನ್ಮದಿನ ಆಚರಿಸಿಕೊಂಡು ಬರಲಾಗುತ್ತಿದ್ದು, ಈ ಬಾರಿ ಸಹ ಸೆ.೧೫ರಂದು ರೈಲ್ವೆ ನಿಲ್ದಾಣ ಮುಂಭಾಗದಲ್ಲಿರುವ ಉದ್ಯಾನವನದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಘದ ಅಧ್ಯಕ್ಷರು, ಪದಾಧಿಕಾರಿಗಳ ನೇತೃತ್ವದಲ್ಲಿ ಮಾಜಿ ಸೈನಿಕರು ಶ್ರಮದಾನದ ಮೂಲಕ ಸ್ವಚ್ಛತಾ ಕಾರ್ಯಕೈಗೊಂಡರು.
ಬೆಳಿಗ್ಗೆ ೯.೩೦ಕ್ಕೆ ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷ ಸಿದ್ದಲಿಂಗಯ್ಯ ಅಧ್ಯಕ್ಷತೆ ವಹಿಸಲಿದ್ದು, ವಿಐಎಸ್‌ಎಲ್ ಕಾರ್ಖಾನೆ ಕಾರ್ಮಿಕರಾದ ಎಚ್.ಪಿ. ಶಿವಪ್ಪ, ಆರ್. ಗೋವಿಂದಪ್ಪ ಮತ್ತು ರುದ್ರಪ್ಪರವರಿಗೆ ಅಭಿನಂದನೆ ನಡೆಯಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.