ವಿವೇಕಾನಂದರಿಗೆ ಯುವಕರ ಮೇಲೆ ಅಪಾರ ನಂಬಿಕೆ

KannadaprabhaNewsNetwork | Published : Jan 13, 2025 12:45 AM

ಸಾರಾಂಶ

ಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ತುಮಕೂರು ಜಿಲ್ಲಾ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸುವುದರ ಮೂಲಕ ಸಿಹಿ ಹಂಚಿ ಆಚರಿಸಲಾಯಿತು

ಕನ್ನಡಪ್ರಭ ವಾರ್ತೆ, ತುಮಕೂರುಅಖಿಲ ಭಾರತ ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಭಾರತ ದಲಿತ ಕ್ರಿಯಾ ಸಮಿತಿ ವತಿಯಿಂದ ತುಮಕೂರು ಜಿಲ್ಲಾ ಕಚೇರಿಯಲ್ಲಿ ಸ್ವಾಮಿ ವಿವೇಕಾನಂದರವರ ಜಯಂತಿಯನ್ನು ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸುವುದರ ಮೂಲಕ ಸಿಹಿ ಹಂಚಿ ಆಚರಿಸಲಾಯಿತುಈ ವೇಳೆ ಮಾತನಾಡಿದ ಅಖಿಲ ಭಾರತ ಅಂಬೇಡ್ಕರ್ ಪ್ರಚಾರ ಸಮಿತಿ ಜಿಲ್ಲಾಧ್ಯಕ್ಷ ಎನ್.ಕೆ.ನಿಧಿಕುಮಾರ್, ಸ್ವಾಮಿ ವಿವೇಕಾನಂದರು ಯುವಜನತೆಯ ಮೇಲೆ ಅಪಾರವಾದ ನಂಬಿಕೆ ಇಟ್ಟಿದ್ದರು. ಹಿಂದೂ ಧರ್ಮದಲ್ಲಿದ್ದುಕೊಂಡೇ, ಧರ್ಮದೊಳಗಿನ ಆಂತರಿಕ ಅಸಮಾನತೆಯ ವಿರುದ್ದ ಧ್ವನಿ ಎತ್ತಿದ್ದರು. ಜಾತಿಯತೆ, ಅಸ್ಪೃಶ್ಯತೆ ಆಚರಣೆ, ಮೂಢನಂಬಿಕೆಗಳ ವಿರುದ್ಧ ದೊಡ್ಡ ಹೋರಾಟವನ್ನೇ ನಡೆಸಿದ್ದರು ಎಂದರು.ಇಂದು ಸ್ವಾಮಿ ವಿವೇಕಾನಂದರ ಒಂದು ಮುಖವನ್ನು ಮಾತ್ರ ಜನರಿಗೆ ತೋರಿಸುತ್ತಾ, ಕುಬ್ಜರನ್ನಾಗಿಸಲಾಗುತ್ತಿದೆ. ಜಿನಿವಾದಲ್ಲಿ ನಡೆದ ವಿಶ್ವ ಧರ್ಮ ಸಮ್ಮೇಳನ ಸ್ವಾಮಿ ವಿವೇಕಾನಂದರನ್ನು ಇಡೀ ಜಗತ್ತಿಗೆ ಪರಿಚಯ ಮಾಡಿಕೊಟ್ಟಿತ್ತು ಎಂದರು.ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷ ಎಸ್.ರಾಮಚಂದ್ರರಾವ್ ಮಾತನಾಡಿ, ಭಾರತೀಯ ಯುವಜನತೆಯ ಬಗ್ಗೆ ಭಿನ್ನವಾದ ನಿಲುವನ್ನು ಹೊಂದಿದ್ದ ಸ್ವಾಮಿ ವಿವೇಕಾನಂದ ವಾಣಿ, ಏಳಿ ಯುವಜನರೆ ಎದ್ದೇಳಿ, ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ಮಾತನ್ನು ಇಂದಿನ ಯುವಸಮೂಹ ಜೀವನದಲ್ಲಿ ಅಳವಡಿಸಿಕೊಂಡರೆ, ದೇಶ ಎದುರಿಸುತ್ತಿರುವ ನಿರುದ್ಯೋಗ, ಬಡತನದಂತಹ ಜಲ್ವಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದು ಎಂದರು.ಈ ವೇಳೆ ಅಲ್ಪಸಂಖ್ಯಾತ ಘಟಕ ಜಿಲ್ಲಾಧ್ಯಕ್ಷ ಶಬ್ಬೀರ್ ಅಹ್ಮದ್, ಹಿಂದುಳಿದ ವರ್ಗದ ಜಿಲ್ಲಾ ಕಾರ್ಯಾಧ್ಯಕ್ಷ ಎನ್.ವೆಂಕಟೇಶ ಆಚಾರ್, ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಇಮ್ರಾನ್ ಅಹಮದ್, ಅಟ್ರಾ ಸಿಟಿ ಕಮಿಟಿ ಸದಸ್ಯರಾದ ಗೋವಿಂದರಾಜು ಕೆ, ದಲಿತ ಕ್ರಿಯಾ ಸಮಿತಿಯ ಜಿಲ್ಲಾ ಉಪಾಧ್ಯಕ್ಷ ಲಕ್ಷ್ಮಿ ನಾರಾಯಣ್ ಎಸ್, ಹಿಂದುಳಿದ ವರ್ಗದ ಯುವ ಘಟಕದ ಜಿಲ್ಲಾಧ್ಯಕ್ಷ ದಿವಾಕರ್, ಕಾರ್ಮಿಕ ಘಟಕದ ಜಿಲ್ಲಾ ಉಪಾಧ್ಯಕ್ಷ ಟೈಲರ್ ಜಗದೀಶ್ ಎನ್, ತಾಲೂಕು ಗೌರವ ಅಧ್ಯಕ್ಷ ಗಂಗಾಧರ್.ಜಿ.ಆರ್, ಪದಾಧಿಕಾರಿಗಳಾದ ಹನುಮನರಸಯ್ಯ, ಶ್ರೀನಿವಾಸ್‌ರಾವ್, ರಾಮಣ್ಣ, ರಮೇಶ್,ಗಗನ.ಡಿ.ಬಿ,ದರ್ಶನ್.ಬಿ.ಆರ್, ನರಸಿಂಹ ಮೂರ್ತಿ ಮುಂತಾದವರು ಉಪಸ್ಥಿತರಿದ್ದರು.

Share this article