ಕನ್ನಡಪ್ರಭ ವಾರ್ತೆ ಸವದತ್ತಿ
ಸ್ಥಳೀಯ ಮಾಮನಿ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ ಸಂಘಟನೆಯ ಆಶ್ರಯದಲ್ಲಿ ಹಮ್ಮಿಕೊಂಡ ಸ್ವಾಮಿ ವಿವೇಕಾನಂದರವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭಾರತದ ಭವ್ಯ ಪರಂಪರೆಯ ಕೀರ್ತಿಯನ್ನು ಹೆಚ್ಚಿಸುವಲ್ಲಿ ಸ್ವಾಮಿ ವಿವೇಕಾನಂದರು ಮಾಡಿದಂತ ಸಾಧನೆಗಳು ಇಂದಿನ ಯುವ ಪೀಳಿಗೆಗೆ ಮಾರ್ಗದರ್ಶನವಾಗಿದೆ ಎಂದರು. ರಾಜಕಾರಣದಲ್ಲಿ ಸಾಕಷ್ಟು ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಅದು ರಾಜಕೀಯ ಕ್ಷೇತ್ರವಲ್ಲದೆ ಪ್ರತಿಭಾವಂತರ ಮೇಲೂ ಸಾಗುತ್ತಿರುವುದರಿಂದ ಅದನ್ನು ಖಂಡಿಸುವಂತ ಶಕ್ತಿಗಳು ಸಮಾಜದಲ್ಲಿ ನಿರ್ಮಾಣವಾಗಬೇಕಿದೆ. ನೇಮಕಾತಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸಾಕಷ್ಟು ಅನ್ಯಾಯವಾಗುತ್ತಿದ್ದು, ಎಬಿವಿಪಿ ಸಂಘಟನೆಯವರು ಅದನ್ನು ಖಂಡಿಸಿ ನ್ಯಾಯ ಒದಗಿಸುವಂತ ಕಾರ್ಯ ಮಾಡಬೇಕು ಎಂದು ಸಲಹೆ ನೀಡಿದರು.
ಎಬಿವಿಪಿ ಪ್ರಾಂತ ಕಾರ್ಯ ಸಮಿತಿ ಸದಸ್ಯ ಅಪ್ಪಣ್ಣ ಹಡಪದ ಮಾತನಾಡಿ, ಅಂದು ಸ್ವಾಮಿ ವಿವೇಕಾನಂದರು ಹೇಳಿದಂತ ವಿಚಾರಧಾರೆಗಳು ಇಂದು ನೆರವೇರುವ ನಿಟ್ಟಿನಲ್ಲಿ ಸಾಗುತ್ತಿದ್ದು, ಬರುವಂತ ದಿನಗಳಲ್ಲಿ ಭಾರತವು ವಿಶ್ವಗುರುವಾಗಿ ಹೊರಹೊಮ್ಮುವದರಲ್ಲಿ ಸಂದೇಹವಿಲ್ಲ ಎಂದರು.ಅಮೃತ ಮಹೋತ್ಸವದ ಉತ್ಸಾಹದಲ್ಲಿರುವ ಎಬಿವಿಪಿಯ ಸಂಘಟನೆಯಲ್ಲಿ ಇಂದು 64 ಲಕ್ಷ ಕಾರ್ಯಕರ್ತರಿದ್ದು, ವಿದ್ಯಾರ್ಥಿಗಳ ಭವಿಷ್ಯಕ್ಕಾಗಿ ಸಂಘಟನೆಯು ನಿರಂತರ ಶ್ರಮಿಸುತ್ತಿದೆ. ಎಬಿವಿಪಿಯ ಸಾಕಷ್ಟು ಕಾರ್ಯಕರ್ತರು ಭಾರತವು ವಿಶ್ವ ಗುರುವಾಗಿ ಹೊರಹೊಮ್ಮಲು ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.