ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಮಲ್ಲಿಕಾರ್ಜುನ್ ಚಾರಿಟೇಬಲ್ ಟ್ರಸ್ಟ್ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದ ಜಯಂತಿ, ಕನ್ನಡಕಗಳ ವಿತರಣೆ, ಶೇ.100 ಫಲಿತಾಂಶ ಸಾಧನೆ ಮಾಡಿದ ಗವಿಮಠದ ಮೊರಾರ್ಜಿ ವಸತಿ ಶಾಲೆ ಪ್ರಾಂಶುಪಾಲರಿಗೆ ಸನ್ಮಾನ ಹಾಗೂ ಮಾಧ್ಯಮ ಅಕಾಡಮಿ ಪ್ರಶಸ್ತಿ ಪಡೆದ ಪತ್ರಕರ್ತ ಕೆ.ಆರ್.ನೀಲಕಂಠ ಅವರಿಗೆ ಅಭಿನಂದನೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸ್ವಾಮಿ ವಿವೇಕಾನಂದ ಕೇವಲ ಒಬ್ಬ ವೀರ ಸನ್ಯಾಸಿಯಲ್ಲ. ಸಮಸ್ತ ಭಾರತೀಯರ ಚೈತನ್ಯ. ಸ್ವಾಮಿ ವಿವೇಕಾನಂದರು ದೇಶದ ಯುವಕರಿಗೆ ಹಲವು ಆದರ್ಶಗಳನ್ನು ಬಿಟ್ಟು ಹೋಗಿದ್ದಾರೆ. ಅವುಗಳನ್ನು ಅನುಸರಿಸುವ ಮೂಲಕ ಉತ್ತಮ ಸಂಸ್ಕಾರ ಹಾಗೂ ರಾಷ್ಟ್ರ ಭಕ್ತಿಯನ್ನು ಬೆಳೆಸಿಕೊಳ್ಳಬೇಕು ಎಂದರು.ವಿವೇಕಾನಂದರು ತೋರಿಸಿದ ದಾರಿಯಲ್ಲಿ ಸಾಗುವ ಮೂಲಕ ಯುವಶಕ್ತಿ ರಾಷ್ಟ್ರದ ಶಕ್ತಿಯಾಗಬೇಕು. ಅವರ ಅಶಯಗಳನ್ನು ಮೈಗೂಡಿಸಿಕೊಂಡು ಸಂಸ್ಥೆ ಕೆಲಸ ಮಾಡುತ್ತಿದೆ ಎಂದು ಶ್ಲಾಘಿಸಿದರು.
ತಾಲೂಕಿನ ಗವೀಮಠದ ಮೊರಾರ್ಜಿ ವಸತಿ ಶಾಲೆ ಕಳೆದ ಕೆಲವು ವರ್ಷಗಳಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ನೀಡುವ ಮೂಲಕ ಇತರ ಶಿಕ್ಷಣ ಸಂಸ್ಥೆಗಳಿಗೆ ಮಾದರಿಯಾಗಿದೆ. ಶಾಲೆ ಪ್ರಾಂಶುಪಾಲ ಪ್ರಸನ್ನಕುಮಾರ್ ಅವರನ್ನು ಅಭಿನಂದಿಸಿದರು.ಕಾರ್ಯಕ್ರಮದಲ್ಲಿ ನಿವೃತ್ತ ಪ್ರಾಂಶುಪಾಲ ಕೆ.ಕಾಳೇಗೌಡ ಅಧ್ಯಕ್ಷತೆ ವಹಿಸಿದ್ದರು. ಯೋಜನೆ ಜಿಲ್ಲಾ ನಿರ್ದೇಶಕ ಡಾ.ಎ.ಯೋಗೇಶ್, ತಾಲೂಕು ವೀರಶೈವ ಮಹಾಸಭಾದ ಘಟಕದ ಅಧ್ಯಕ್ಷ ಸುಜೆಂದ್ರಕುಮಾರ್, ಜನ ಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಕೆ.ಎಸ್.ರಾಜೇಶ್, ಉಪಾಧ್ಯಕ್ಷೆ ನಳಿನಿ, ತಾಲೂಕು ಕ.ಸಾ.ಪ ಅಧ್ಯಕ್ಷ ಹೆಚ್.ಆರ್.ಪೂರ್ಣಚಂದ್ರ ತೇಜಸ್ವಿ, ಮಾಜಿ ಅಧ್ಯಕ್ಷ ಎಂ.ಕೆ.ಹರಿಚರಣತಿಲಕ್, ಬಳ್ಳೇಕೆರೆ ಮಂಜುನಾಥ್, ಮೊರಾರ್ಜಿ ವಸತಿ ಶಾಲೆ ಪ್ರಾಂಶುಪಾಲ ಪ್ರಸನ್ನ ಕುಮಾರ್, ಕೆ.ಆರ್.ನೀಲಕಂಠ, ಮೊಟ್ಟೆಮಂಜು, ಸಂಸ್ಥೆ ತಾಲೂಕು ಯೋಜನಾಧಿಕಾರಿಗಳಾದ ತಿಲಕ್ ರಾಜ್, ಪ್ರಸಾದ್, ಮೇಲ್ವಿಚಾರಕಿ ಗುಣಶ್ರೀ ಸೇರಿದಂತೆ ಹಲವರಿದ್ದರು.