ವಿದ್ಯಾರ್ಥಿಗಳು ಸಸ್ಯಗಳ ಬಗ್ಗೆ ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು: ಪ್ರೊ. ಜಿ.ಆರ್. ಜನಾರ್ದನ

KannadaprabhaNewsNetwork |  
Published : Oct 03, 2026, 03:00 AM IST
ಫೋಟೋ: ೩೦ಪಿಟಿಆರ್-ವಿವೇಕಾನಂದ ವಿವೇಕಾನಂದ ಪದವಿ ಕಾಲೇಜಿನಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ಸಸ್ಯಶಾಸ್ತ್ರ ಪ್ರಾಣಿಶಾಸ್ತ್ರ ಹಾಗೂ ಐಕ್ಯೂಎಸಿ ವಿಭಾಗಗಳ ವತಿಯಿಂದ ‘ಪ್ಲಾಂಟ್ಸ್ ಫಾರ್ ಬೆಟರ್ ಲಿವಿಂಗ್: ಟುಡೆ ಆ್ಯಂಡ್ ಟುಮಾರೊ’ ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು.

ಪುತ್ತೂರು: ಇಲ್ಲಿನ ವಿವೇಕಾನಂದ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ಸಸ್ಯಶಾಸ್ತ್ರ ಪ್ರಾಣಿಶಾಸ್ತ್ರ ಹಾಗೂ ಐಕ್ಯೂಎಸಿ ವಿಭಾಗಗಳ ವತಿಯಿಂದ ‘ಪ್ಲಾಂಟ್ಸ್ ಫಾರ್ ಬೆಟರ್ ಲಿವಿಂಗ್: ಟುಡೆ ಆ್ಯಂಡ್ ಟುಮಾರೊ’ ಎಂಬ ವಿಷಯದ ಕುರಿತು ಅತಿಥಿ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ಡೀನ್, ಸಸ್ಯಶಾಸ್ತ್ರ ಅಧ್ಯಯನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ಜಿ.ಆರ್. ಜನಾರ್ದನ ಮಾತನಾಡಿ, ಪ್ರಸ್ತುತ ದಿನಗಳಲ್ಲಿ ಸಸ್ಯಶಾಸ್ತ್ರ ವಿಭಾಗಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಗಣನೀಯವಾಗಿ ಇಳಿಕೆಯಾಗುತ್ತಿದೆ. ಈ ಪರಿಸ್ಥಿತಿಯನ್ನು ಸಮತೋಲನಗೊಳಿಸಲು ವಿದ್ಯಾರ್ಥಿಗಳು ವಿಜ್ಞಾನ ವಿಷಯಗಳ ಕುರಿತು ಸಾಮಾನ್ಯ ಜ್ಞಾನದ ಜೊತೆಗೆ ಕುತೂಹಲವನ್ನೂ ಬೆಳೆಸಿಕೊಳ್ಳುವುದು ಅತ್ಯಗತ್ಯ. ನಮ್ಮ ಸುತ್ತಮುತ್ತಲೂ ಹಲವಾರು ರೀತಿಯ ಸಸ್ಯ ಪ್ರಭೇದಗಳಿವೆ. ಅವುಗಳ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಂಡು ಅದರ ಕುರಿತು ಸಂಶೋಧನೆ ನಡೆಸುವ ಮೂಲಕ ವಿದ್ಯಾರ್ಥಿಗಳು ಸಸ್ಯಗಳ ಬಗ್ಗೆ ಹೆಚ್ಚಿನ ಜ್ಞಾನವನ್ನು ಬೆಳೆಸಿಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.

ಕಾಲೇಜಿನ ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ್ ಭಟ್ ಮಾತನಾಡಿ, ಸಸ್ಯಗಳು ಮತ್ತು ಸಸ್ಯಜೀವಿಗಳ ಅಗತ್ಯತೆ ನಮ್ಮೆಲ್ಲರ ಜೀವನದಲ್ಲಿ ಅತ್ಯಂತ ಮಹತ್ವದ್ದಾಗಿದೆ. ನಮ್ಮ ದೈನಂದಿನ ಜೀವನದ ಚಟುವಟಿಕೆಗಳಲ್ಲಿ ನಾವು ಸಸ್ಯಗಳ ಪ್ರಾಮುಖ್ಯತೆಯ ಬಗ್ಗೆ ಹೊಸ ದೃಷ್ಟಿಕೋನವನ್ನು ಬೆಳೆಸಿಕೊಳ್ಳಬೇಕು. ಇಂದಿನ ವಿದ್ಯಾರ್ಥಿಗಳು ಸಸ್ಯಗಳ ಕುರಿತು ಸಾಮಾನ್ಯ ಜ್ಞಾನವನ್ನು ಪಡೆದುಕೊಳ್ಳುವುದು ಅವಶ್ಯಕ ಎಂದು ತಿಳಿಸಿದರು. ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥೆ ದಿವ್ಯಶ್ರೀ ಜಿ. ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ದಿವ್ಯ ಸ್ವಾಗತಿಸಿದರು. ಸೌಜನ್ಯ ವಂದಿಸಿದರು. ಸಿಂಚನ ಎಂ. ಗೌಡ ಕಾರ್ಯಕ್ರಮ ನಿರೂಪಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತಪಟ್ಟಿಯಿಂದ ಹೆಸರು ತೆಗೆಯಲು ಪತ್ರ ನೀಡಿಲ್ಲ
ಯುವ ಪೀಳಿಗೆ ಬಾಪೂಜಿ ತತ್ವ ಅಳವಡಿಸಿಕೊಳ್ಳಿ