ಕನ್ನಡಪ್ರಭ ವಾರ್ತೆ ಹಾಸನ
ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಸಮಾರಂಭದ ಸಾನ್ನಿಧ್ಯ ವಹಿಸಿದ್ದರು.
ಅನ್ನ, ಅಕ್ಷರ ಮತ್ತು ಉದ್ಯೋಗ ಅವಕಾಶ ಕಲ್ಪಿಸುವ ಸಂಕಲ್ಪದೊಂದಿಗೆ ಒಕ್ಕಲಿಗ ಯುವ ಬ್ರಿಗೇಡ್ ಮಾಡುತ್ತಿರುವ ಸೇವೆ ಸಮಾಜಕ್ಕೆ ಮಾದರಿ ಯಾಗಿದೆ ಎಂದರು.ಕಾರ್ಯಕ್ರಮ ಉದ್ಘಾಟಿಸಿದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಾಲಿ ಶಾಸಕ ಡಾ. ಸಿ.ಎನ್. ಅಶ್ವತ್ಥ್ ನಾರಾಯಣ್, ಬಡವರ , ರೈತರ ಮಕ್ಕಳ ಬದುಕು ಕಟ್ಟುವ ಕಾರ್ಯದಲ್ಲಿ ಸದಾ ನಿರತರಾಗಿರುವ ಒಕ್ಕಲಿಗ ಯುವ ಬ್ರಿಗೇಡಿನ ಸಂಸ್ಥಾಪಕ ನಂಜೇಗೌಡ ಅವರ ಜನಪರ ಕಾರ್ಯ ನಿಜಕ್ಕೂ ಶ್ಲಾಘನೀಯ ಎಂದರು.
ಸಮಾರಂಭದಲ್ಲಿ ಐಆರ್ ಎಸ್ ಅಧಿಕಾರಿ ವರುಣ್ ರಂಗಸ್ವಾಮಿ, ಐಎಫ್ ಎಸ್ ಅಧಿಕಾರಿ ಯೋಗೀಶ್ ಮತ್ತು ಯುಪಿಎಸ್ ಸಿ ಸಾಧಕರನ್ನು ಸನ್ಮಾನಿಸಲಾಯಿತು.ಕಾರ್ಯಕ್ರಮದಲ್ಲಿ ಆದಿಚುಂಚನಗಿರಿ ಮಹಾಸಂಸ್ಥಾನ ಹಾಸನ ಮಠದ ಶ್ರೀ ಶಂಭುನಾಥ ಸ್ವಾಮೀಜಿ, ಹಾಸನ ನಗರಸಭೆ ಅಧ್ಯಕ್ಷ ಎಂ. ಚಂದ್ರೇಗೌಡ, ಹಿರಿಯ ಐಎಎಸ್ ಅಧಿಕಾರಿ ಪ್ರದೀಪ್ ಪ್ರಭಾಕರ್, ಐಆರ್ ಎಸ್ ಅಧಿಕಾರಿ ಶ್ರೇಯಸ್, ವಾಣಿಜ್ಯ ತೆರಿಗೆ ಅಧಿಕಾರಿ ಬಿ.ಕೆ. ರುದ್ರಪ್ಪ ಮತ್ತಿತರ ಗಣ್ಯರು ಉಪಸ್ಥಿತರಿದ್ದರು.