ಒಕ್ಕಲಿಗರು, ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳು: ಡಿಸಿಎಂ ಡಿ.ಕೆ.ಶಿವಕುಮಾರ್

KannadaprabhaNewsNetwork |  
Published : Jul 06, 2025, 11:48 PM IST
ಕೆ ಕೆ ಪಿ ಸುದ್ದಿ 02:ಡಿ ಸಿ ಎಂ ಡಿಕೆಶಿ ಮಾಧ್ಯಮ ಪ್ರತಿಕ್ರಿಯೆ | Kannada Prabha

ಸಾರಾಂಶ

ರಾಷ್ಟ್ರ ರಾಜಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಳುಹಿಸಲು ಅವರಿಗೆ ಪಕ್ಷದ ಓಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಉತ್ತರಿಸಿ ಪಕ್ಷದಲ್ಲಿ ಅಲ್ಪಸಂಖ್ಯಾತ, ಪರಿಶಿಷ್ಟ ಸೇರಿದಂತೆ ಇದೇ ರೀತಿ ಅನೇಕ ಘಟಕಗಳಿವೆ. ಅಲ್ಪಸಂಖ್ಯಾತರಲ್ಲಿ ಜೈನ, ಸಿಖ್ ಧರ್ಮದವರೂ ಸೇರುತ್ತಾರೆ. ಇದನ್ನೆಲ್ಲಾ ಟೀಕೆ ಮಾಡಲಿಲ್ಲ ಎಂದರೆ ಬಿಜೆಪಿಯವರಿಗೆ ಸಮಾಧಾನವಾಗಬೇಕಲ್ಲ‌.

ಕನಕಪುರ: ದೇಶದಲ್ಲಿ ಓಬಿಸಿಗಳ ಸಂಖ್ಯೆ ವ್ಯಾಪಕವಾಗಿದೆ. ಒಕ್ಕಲಿಗರು ಹಾಗೂ ಲಿಂಗಾಯತರು ರಾಷ್ಟ್ರಮಟ್ಟದಲ್ಲಿ ಓಬಿಸಿಗಳೇ ಆಗಿದ್ದು ಸಮಾಜದಲ್ಲಿ ಹಿಂದುಳಿದ ವರ್ಗಗಳ ಜನರನ್ನು ಮುನ್ನೆಲೆಗೆ ತರಬೇಕು ಎಂದು ಓಬಿಸಿ ಸಲಹಾ ಸಮಿತಿ ಸಭೆ ನಡೆಸಲಾಗುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ರಾಜಕಾರಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಳುಹಿಸಲು ಅವರಿಗೆ ಪಕ್ಷದ ಓಬಿಸಿ ಸಲಹಾ ಮಂಡಳಿ ಜವಾಬ್ದಾರಿ ನೀಡಿದ್ದಾರೆ ಎನ್ನುವ ಬಿಜೆಪಿ ಟೀಕೆಯ ಬಗ್ಗೆ ಉತ್ತರಿಸಿ ಪಕ್ಷದಲ್ಲಿ ಅಲ್ಪಸಂಖ್ಯಾತ, ಪರಿಶಿಷ್ಟ ಸೇರಿದಂತೆ ಇದೇ ರೀತಿ ಅನೇಕ ಘಟಕಗಳಿವೆ. ಅಲ್ಪಸಂಖ್ಯಾತರಲ್ಲಿ ಜೈನ, ಸಿಖ್ ಧರ್ಮದವರೂ ಸೇರುತ್ತಾರೆ. ಇದನ್ನೆಲ್ಲಾ ಟೀಕೆ ಮಾಡಲಿಲ್ಲ ಎಂದರೆ ಬಿಜೆಪಿಯವರಿಗೆ ಸಮಾಧಾನವಾಗಬೇಕಲ್ಲ‌. ಟೀಕೆಗಳು ಸಾಯುತ್ತವೆ. ಕೆಲಸಗಳು ಉಳಿಯುತ್ತವೆ ಎಂದರು.

ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿರುವ ಕಾರಣಕ್ಕೆ ಪಕ್ಷದ ಓಬಿಸಿ ಸಲಹಾ ಮಂಡಳಿಯ ಸಭೆ ಕೆಪಿಸಿಸಿ ಕಚೇರಿಯಲ್ಲಿಯೇ ನಡೆಯಲಿ ಎಂದು ಸಲಹೆ ನೀಡಿದ್ದೆ, ಅದರಂತೆ ಇಲ್ಲಿ ಸಭೆ ಏರ್ಪಡಿಸಲಾಗಿದೆ. ರಾಷ್ಟ್ರಮಟ್ಟದ‌ ಸುಮಾರು 40ಕ್ಕೂ ಹೆಚ್ಚು ನಾಯಕರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ " ಎಂದು ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ
ಕಟ್ಟುನಿಟ್ಟು ಮಾಡಿದರೂ ನಿಲ್ಲದ ಪರಪ್ಪನ ಅಗ್ರಹಾರ ಪವಾಡ