ನಿಂತಿದ್ದ ಲಾರಿಗೆ ವೋಲ್ವೋ ಬಸ್ ಡಿಕ್ಕಿ: ಟೆಕ್ಕಿ ಸಾವು

KannadaprabhaNewsNetwork |  
Published : Aug 04, 2026, 01:15 AM IST
ಸಿಕೆಬಿ-6 ಅಪಘಾತದಲ್ಲಿ ನುಜ್ಜು ಗುಜ್ಜಾಗಿರುವ ಬಸ್ ಮುಂಭಾಗಸಿಕೆಬಿ-7 ಮೃತ ಕೌಸರ್ ತಾಜ್ | Kannada Prabha

ಸಾರಾಂಶ

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಮುಂಭಾಗದಲ್ಲಿ ನಿಂತಿದ್ದ ಕಂಟೈ ನರ್‌ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.

ಅಗಲಗುರ್ಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಘಟನೆ । ಹೈದರಾಬಾದ್‌ನಿಂದ ಬರುತ್ತಿದ್ದ ಬಸ್‌

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ನಿಂತಿದ್ದ ಕಂಟೈನರ್‌ ಲಾರಿಗೆ ಖಾಸಗಿ ಐಷಾರಾಮಿ ವೋಲ್ವೋ ಬಸ್ ಡಿಕ್ಕಿ ಹೊಡೆದ ಭೀಕರ ರಸ್ತೆ ಅಪಘಾತದಲ್ಲಿ ಬಸ್ ನಲ್ಲಿದ್ದ ಟೆಕ್ಕಿ ಯುವತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಅಗಲಗುರ್ಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ಸೋಮವಾರ ಮುಂಜಾನೆ ಸಂಭವಿಸಿದೆ.

ಮೃತ ಯುವತಿಯನ್ನು 28 ವರ್ಷದ ಕೌಸರ್ ತಾಜ್ ಎಂದು ಗುರ್ತಿಸಲಾಗಿದೆ.

ಹೈದರಾಬಾದ್‌ನಿಂದ ಬೆಂಗಳೂರಿನತ್ತ ಬರುತ್ತಿದ್ದ ಖಾಸಗಿ ವೋಲ್ವೋ ಬಸ್, ಸೋಮವಾರ ಮುಂಜಾನೆ ಸುಮಾರು 5.30 ರಲ್ಲಿ ಅಗಲಗುರ್ಕಿ ಸಮೀಪದ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಮುಂಭಾಗದಲ್ಲಿ ನಿಂತಿದ್ದ ಕಂಟೈ ನರ್‌ ಲಾರಿಯ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್‌ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಚಾಲಕನ ಪಕ್ಕದ ಬಸ್ ಮುಂಭಾಗದ ಬಾಗಿಲಿನ ಬಳಿ ಕೂತಿದ್ದ ಅನಂತಪುರ ಜಿಲ್ಲೆಯ ಚಿಲ್ಲಮತ್ತೂರು ಮೂಲದ ಕೌಸರ್ ತಾಜ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ತೀವ್ರತೆಗೆ ಮೃತದೇಹ ಬಸ್‌ನ ಕಬ್ಬಿಣದ ಅವಶೇಷಗಳ ನಡುವೆ ಸಿಲುಕಿಕೊಂಡಿದ್ದರಿಂದ, ಪೊಲೀಸರು ಹಾಗೂ ರಕ್ಷಣಾ ಸಿಬ್ಬಂದಿ ಕ್ರೇನ್ ಸಹಾಯದಿಂದ ಬಸ್‌ನ ಮುಂಭಾಗವನ್ನು ತೆರವುಗೊಳಿಸಿ ಮೃತದೇಹವನ್ನು ಹೊರತೆಗೆದರು.

ಬಳಿಕ ಶವವನ್ನು ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಯಿತು. ಮೃತ ಯುವತಿ ಕೌಸರ್ ತಾಜ್ ಆಂಧ್ರ ಪ್ರದೇಶದ ಗಡಿಯ ಕೊಡಿಕೊಂಡ ಚೆಕ್‌ಪೋಸ್ಟ್ ಬಳಿ ಬಸ್ ಹತ್ತಿದ್ದು, ಬೆಂಗಳೂರಿಗೆ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಬಸ್ಸಿನಲ್ಲಿ ಸುಮಾರು 40 ಮಂದಿ ಪ್ರಯಾಣಿಕರಿದ್ದು, ಉಳಿದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಪಘಾತದ ಪರಿಣಾಮ ಕೆಲಕಾಲ ರಾಷ್ಟ್ರೀಯ ಹೆದ್ದಾರಿ-44ರಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಮಾಹಿತಿ ತಿಳಿಯುತ್ತಿದ್ದಂತೆಯೇ ಚಿಕ್ಕಬಳ್ಳಾಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಸಿಕೆಬಿ-6 ಅಪಘಾತದಲ್ಲಿ ನುಜ್ಜು ಗುಜ್ಜಾಗಿರುವ ಬಸ್ ಮುಂಭಾಗ

ಸಿಕೆಬಿ-7 ಮೃತ ಕೌಸರ್ ತಾಜ್

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಚಿವಸ್ಥಾನ ಆಕಾಂಕ್ಷಿ ಬಿಆರ್‌ ಪಾಟೀಲ್‌, ಖನೀಜ್‌ ಫಾತೀಮಾಗೆ ನಿರಾಶೆ
ಪಿಂಚಣಿಗಳ ಕೊಡದ ಕಾಂಗ್ರೆಸ್‌ ಸರ್ಕಾರ: ರೇಣು