ಹಲಗಾಪುರದಲ್ಲಿ ವಾಂತಿಭೇದಿ: ಹಲವರು ಅಸ್ವಸ್ಥ

KannadaprabhaNewsNetwork |  
Published : May 07, 2024, 01:07 AM IST
6ಸಿಎಚ್‌ಎನ್‌57 ಹನೂರು ತಾಲೂಕಿನ ಹಲಗಾಪುರ ಗ್ರಾಮದಲ್ಲಿ ವಾಂತಿಭೇದಿ ಕಾಣಿಸಿಕೊಂಡು  ಬಂಡಳ್ಳಿ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವುದು. | Kannada Prabha

ಸಾರಾಂಶ

ತಾಲೂಕಿನ ಹಲಗಾಪುರ ಗ್ರಾಮದಲ್ಲಿ ವಾಂತಿಭೇದಿ ಕಾಣಿಸಿಕೊಂಡು ಹಲವಾರು ಅಸ್ವಸ್ಥರಾಗಿ ಬಂಡಳ್ಳಿ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ಘಟನೆ ನಡೆದಿದೆ.

ಕನ್ನಡಪ್ರಭ ವಾರ್ತೆ ಹನೂರು

ತಾಲೂಕಿನ ಹಲಗಾಪುರ ಗ್ರಾಮದಲ್ಲಿ ವಾಂತಿಭೇದಿ ಕಾಣಿಸಿಕೊಂಡು ಹಲವಾರು ಅಸ್ವಸ್ಥರಾಗಿ ಬಂಡಳ್ಳಿ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲಾಗಿರುವ ಘಟನೆ ನಡೆದಿದೆ. ಹಲಗಾಪುರ ಗ್ರಾಮದ ಶಿವಣ್ಣ( 60), ರತ್ನಮ್ಮ (5೦), ಶಿವಮಾದಮ್ಮ(65) ಗುರುಸ್ವಾಮಿ, (55) ಸಾಕಮ್ಮ (54 ) ಎಂಬುವವರು ವಾಂತಿ ಬೇದಿಯಿಂದ ಅಸ್ವಸ್ಥರಾಗಿ ಬಂಡಳ್ಳಿ ಗ್ರಾಮದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದು, ಈ ಪೈಕಿ ಇನ್ನೂ ಹಲವರು ಹನೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಸೋಮವಾರದಂದು ಹಲಗಾಪುರದಲ್ಲಿ ನಡೆದ ಗೃಹಪ್ರವೇಶವೊಂದಕ್ಕೆ ಭಾಗವಹಿಸಿದಂತಹ ಸಂದರ್ಭದಲ್ಲಿ ಘಟನೆ ನಡೆದಿರುವುದು ತಿಳಿದುಬಂದಿದ್ದು, ಮೇಲ್ನೋಟಕ್ಕೆ ಕಲುಷಿತ ಕುಡಿಯುವ ನೀರು ಸೇವನೆಯೇ ಘಟನೆಗೆ ಕಾರಣ ಎನ್ನಲಾಗುತ್ತಿದ್ದು, ಕೂಡಲೇ ಗ್ರಾಮಕ್ಕೆ ಸರಬರಾಜಾಗುವ ಕುಡಿಯುವ ನೀರನ್ನುಗ್ರಾಪಂ ನವರು ಪರೀಕ್ಷೆ ಮಾಡುವಂತೆ ಸ್ಥಳೀಯರು ಒತ್ತಾಯಿಸಿದ್ದಾರೆ.

ಆರೋಗ್ಯ ಸಿಬ್ಬಂದಿ ದೌಡ್:

ಹಲಗಪುರ ಗ್ರಾಮದಲ್ಲಿ ನಡೆದಿರುವ ವಾಂತಿಭೇದಿ ಘಟನೆಯಿಂದ ತಾಲೂಕು ವೈದ್ಯಾಧಿಕಾರಿ ಡಾಕ್ಟರ್ ಪ್ರಕಾಶ್ ಸೂಚನೆಯ ಮೇರೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ವರ್ಗದವರು ಹಲಗಾಪುರ ಗ್ರಾಮಕ್ಕೆ ತೆರಳಿ ವಾಂತಿಭೇದಿ ಆಗಿರುವ ಘಟನೆಯ ಬಗ್ಗೆ ಮುಂಜಾಗ್ರತ ಕ್ರಮ ವಹಿಸಿ ಗ್ರಾಮದಲ್ಲಿರುವ ವಾಂತಿಭೇದಿಗೆ ಒಳಗಾಗಿರುವವರಿಗೆ ಪ್ರಥಮ ಚಿಕಿತ್ಸೆ ನೀಡುವ ಜೊತೆಗೆ ಬೇಸಿಗೆಕಾಲ ಆಗಿರುವುದರಿಂದ ಶುದ್ಧ ಕುಡಿಯುವ ನೀರಿನ ಬಳಕೆ ಮಾಡಬೇಕು ನಿಮ್ಮ ಸುತ್ತಮುತ್ತಲಿನಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ಇಂತಹ ಘಟನೆಗಳಿಗೆ ಅವಕಾಶ ನೀಡದಂತೆ ಗ್ರಾಮದಲ್ಲಿ ಆರೋಗ್ಯ ಸಿಬ್ಬಂದಿಗಳು ಅರಿವು ಮೂಡಿಸಿದರು ಬಂಡಳ್ಳಿ ಆಸ್ಪತ್ರೆಯಲ್ಲಿ ದಾಖಲಾದವರಿಗೆ ಪ್ರಥಮ ಚಿಕಿತ್ಸೆ ನೀಡಲಾಗಿದೆ ಜೊತೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಸಹ ವಹಿಸಿದ್ದಾರೆ.

ಹಲಗಾಪುರ ಗ್ರಾಮಕ್ಕೆ ಆರೋಗ್ಯ ಇಲಾಖೆ ಸಿಬ್ಬಂದಿ ತೆರಳಿ ಅಗತ್ಯ ಕ್ರಮ ವಹಿಸಿದ್ದಾರೆ. ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದಿದ್ದವರನ್ನು ಸಹ ಪ್ರಥಮ ಚಿಕಿತ್ಸೆ ನೀಡಿ ಕಳಿಸಿಕೊಡಲಾಗಿದೆ ಗ್ರಾಮದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗಿದೆ.ಪ್ರಕಾಶ್, ತಾಲೂಕು ವೈದ್ಯಾಧಿಕಾರಿಗಳು

PREV

Recommended Stories

ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಧರ್ಮಸ್ಥಳ ಗ್ರಾಮ ಕೇಸಿಂದ ಹಿಂದೆ ಸರಿದ ನ್ಯಾಯಾಧೀಶ