ತಾಲೂಕು ಮಟ್ಟದ ವಾಲಿಬಾಲ್: ಸಂಪಾಜೆ ಶಾಲೆ ತಂಡ ಪ್ರಥಮ

KannadaprabhaNewsNetwork |  
Published : Sep 16, 2026, 02:45 AM IST
 ತಾಲೂಕು ಮಟ್ಟದಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟವನ್ನು ಹೊದವಾಡ ಗ್ರಾಮದ ಆರ್‌ಎಂಎಸ್‌ಎ ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿಆಯೋಜಿಸಲಾಯಿತು . | Kannada Prabha

ಸಾರಾಂಶ

ಹೊದವಾಡ ಗ್ರಾಮದ ಆರ್‌ಎಂಎಸ್‌ಎ ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ ಆಯೋಜಿಸಲಾಯಿತು.

ನಾಪೋಕ್ಲು: ಹೊದವಾಡ ಗ್ರಾಮದ ಆರ್‌ಎಂಎಸ್‌ಎ ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ತಾಲೂಕು ಮಟ್ಟದ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ವಾಲಿಬಾಲ್ ಪಂದ್ಯಾಟ ಆಯೋಜಿಸಲಾಯಿತು.

14 ವರ್ಷ ವಯೋಮಿತಿಯ ಒಳಗಿನ ಬಾಲಕಿಯರ ವಿಭಾಗದಲ್ಲಿ ಸಂಪಾಜೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದರು. ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನಗಳಿಸಿದರು.

ಬಾಲಕರ ವಿಭಾಗದಲ್ಲಿ ಭಾಗಮಂಡಲದ ಅಟಲ್ ಬಿಹಾರಿ ವಾಜಪೇಯಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದರು. ಪಿಎಂಶ್ರೀ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದರು. 17 ವರ್ಷ ವಯೋಮಿತಿಯ ಒಳಗಿನ ಬಾಲಕಿಯರ ವಿಭಾಗದಲ್ಲಿ ಮೂರ್ನಾಡು ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದರು.

ಸಂಪಾಜೆ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದರು. ಬಾಲಕರ ವಿಭಾಗದಲ್ಲಿ ಶ್ರೀ ರಾಮ ಟ್ರಸ್ಟ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿದರು. ಸಿದ್ದಾಪುರ ಪ್ರೌಢಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ ಗಳಿಸಿದರು.

ಮುಖ್ಯ ಅತಿಥಿಗಳಾಗಿ ಹೊದವಾಡ ಜಮಾಯತ್ ಅಧ್ಯಕ್ಷ ಅಹಮದ್ ಪಿ.ಯು, ಪ್ರಧಾನ ಕಾರ್ಯದರ್ಶಿ ಅಶ್ರಫ್, ಮಡಿಕೇರಿ ತಾಲೂಕು ಕಾಂಗ್ರೆಸ್ ಅಧ್ಯಕ್ಷ ಹಂಸ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕ ಪರಿವೀಕ್ಷಕ ಬಾಲಚಂದ್ರ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಕುಶಾಲಪ್ಪ, ಎಸ್ ಡಿ ಎಂ ಸಿ ಅಧ್ಯಕ್ಷರು ಸದಸ್ಯರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಭೀಕರ ಅಗ್ನಿ ದುರಂತ: ಒಂದೇ ಕುಟುಂಬದ ನಾಲ್ವರು ಸಜೀವ ದಹನ
ಬರಘೋಷಣೆಗೆ ಆಗ್ರಹಿಸಿ ೨೧ರಂದು ತಾಳಿಕೋಟೆ ಬಂದ್‌