ಕನ್ನಡಪ್ರಭ ವಾರ್ತೆ ಬಾಗಲಕೋಟೆ
ತೋವಿವಿಯ ಸಭಾಭವನದಲ್ಲಿ ಶನಿವಾರ ಭಾರತ ಚುನಾವಣೆ ಆಯೋಗ, ಜಿಲ್ಲಾಡಳಿತ, ಜಿಪಂ, ಜಿಲ್ಲಾ ನ್ಯಾಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚೆಗೆ ಯುವ ಮತದಾರರು ಮತದಾನ ಮಾಡಲು ಹಿಂದೇಟು ಹಾಕುತ್ತಿದ್ದಾರೆ. ಆದರೆ, ನಮ್ಮನ್ನಾಳುವ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದ್ದು, ಮತದಾನ ಹಕ್ಕು ಚಲಾಯಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ ಪ್ರತಿಜ್ಞಾವಿಧಿ ಭೋದಿಸಿ ಮಾತನಾಡಿದ ಅವರು, ಮತದಾನದ ಪಾವಿತ್ರ್ಯತೆಯನ್ನು ಅರಿಯಲು ಮತದಾನ ದಿನ ಆಚರಿಸಲಾಗುತ್ತಿದೆ. ಮೂಲ ಹಕ್ಕುಗಳಲ್ಲಿ ಮತದಾನ ಮಾಡುವುದು ಕೂಡ ಪ್ರತಿಯೊಬ್ಬರ ಹಕ್ಕಾಗಿದೆ. ಇತ್ತೀಚಿನ ಚುನಾವಣೆಗಳಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚು ಮತದಾನವಾಗುತ್ತಿದೆ. ಆದರೆ ನಗರ ಪ್ರದೇಶಗಳಲ್ಲಿ ಮತದಾನ ಕುಂಠಿತಗೊಳ್ಳುತ್ತಿದೆ. ಮತದಾನದ ಬಗ್ಗೆ ಹೆಚ್ಚಿನ ಜಾಗೃತಿ ಮೂಡಬೇಕಿದೆ. ಪ್ರಜ್ಞಾವಂತ ನಾಗರಿಕರು ದೇಶದ ಭವಿಷ್ಯಕ್ಕಾಗಿ ಪ್ರಜಾಪ್ರಭುತ್ವದಲ್ಲಿ ತಮಗೆ ನೀಡಿರುವ ಮತದಾನ ಹಕ್ಕನ್ನು ಚಲಾಯಿಸಲು ಮುಂದಾಗಬೇಕಿದೆ ಎಂದು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಸಂಗಪ್ಪ ಮಾತನಾಡಿ, ಪ್ರತಿಯೊಬ್ಬ ನಾಗರಿಕ ಮತದಾರರು ಹಕ್ಕು ಪಡೆದಿದ್ದು, ಪ್ರತಿಯೊಂದು ಚುನಾವಣೆಯಲ್ಲಿ ಯಾವುದೇ ಆಮಿಷಕ್ಕೆ ಒಳಗಾಗದೆ ಮತದಾನ ಹಕ್ಕನ್ನು ಚಲಾಯಿಸುವಂತಾಗಬೇಕು. ಎಲ್ಲರೂ ಮತದಾನ ಮಾಡದೆ ಇದ್ದರೆ ಉತ್ತಮ ನಾಯಕನನ್ನು ಆಯ್ಕೆ ಮಾಡಲು ಸಾಧ್ಯವಾಗುವುದಿಲ್ಲ. ಪ್ರಜಾಪ್ರಭುತ್ವ ಬಲಿಷ್ಠವಾಗಬೇಕಾದರೆ, ಪ್ರತಿಯೊಬ್ಬರು ತಮಗೆ ದೊರೆತಿರುವ ಮತದಾನ ಹಕ್ಕನ್ನು ಚಲಾಯಿಸಬೇಕೆಂದು ಕರೆ ನೀಡಿದರು. ರಾಷ್ಟ್ರೀಯ ಮತದಾನ ದಿನಾಚರಣೆ ನಿಮಿತ್ತ ಪ್ರೌಢ, ಪದವಿ ಪೂರ್ವ ಹಾಗೂ ಪದವಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಪ್ರಮಾಣ ಪತ್ರ ವಿತರಣೆ, ಚುನಾವಣೆಗೆ ಸಂಬಂಧಿಸಿದ ಜಿಲ್ಲಾ ಮತ್ತು ತಾಲೂಕು ಮಟ್ಟದ ಉತ್ತಮ ತರಬೇತುದಾರರಿಗೆ ಪ್ರಮಾಣ ಪತ್ರ ನೀಡಲಾಯಿತು. ಸಾಂಕೇತಿಕವಾಗಿ ಯುವ ಮತದಾರರಿಗೆ ಮತದಾರರ ಗುರುತಿನ ಚೀಟಿ ವಿತರಣೆ ಮಾಡಲಾಯಿತು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಚಂದ್ರಶೇಖರ ದಿಡ್ಡಿ, ತೋವಿವಿಯ ತೋಟಗಾರಿಕೆ ವಿವಿಯ ಕುಲಪತಿ ಡಾ.ವಿಷ್ಣುವಧನ, ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ, ಉಪವಿಭಾಗಾಧಿಕಾರಿ ಸಂತೋಷ ಜಗಲಾಸರ, ತಹಶೀಲ್ದಾರ ವಾಸುದೇವಸ್ವಾಮಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
ಕಾರ್ಯಕ್ರಮ ಪೂರ್ವದಲ್ಲಿ ಜಿಲ್ಲಾಡಳಿತ, ಜಿಪಂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಯೋಗದಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ನಿಮಿತ್ತ ಪಿಟ್ ಇಂಡಿಯಾ ಸೈಕ್ಲಿಂಗ್ ಅಡಿಯಲ್ಲಿ ಹಮ್ಮಿಕೊಂಡ ಸಂಡೇ ಆನ್ ಸೈಕಲ್ ಅಭಿಯಾನಕ್ಕೆ ಜಿಪಂ ಸಿತೊ ಶಶಿಧರ ಕುರೇರ ಚಾಲನೆ ನೀಡಿ ಅಭಿಯಾನದಲ್ಲಿ ಪಾಲ್ಗೊಂಡರು. ಜಿಲ್ಲಾಡಳಿತದಿಂದ ಪ್ರಾರಂಭವಾದ ಅಭಿಯಾನ ನಗರದ ನಾನಾ ಕಡೆ ಸಂಚರಿಸಿ ಜಿಲ್ಲಾ ಕ್ರೀಡಾಂಗಣಕ್ಕೆ ಮುಕ್ತಾಯಗೊಂಡಿತು. ಅಭಿಯಾನದಲ್ಲಿ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಗುರುಪಾದ ಡೂಗನವರ, ಸೈಕ್ಲಿಂಗ್ ತರಬೇತುಗಾರ್ತಿ ಅನಿತಾ ನಿಂಬರಗಿ ಪಾಲ್ಗೊಂಡಿದ್ದರು.