ಅಭಿವೃದ್ಧಿಗಾಗಿ ಕಾಂಗ್ರೆಸ್‌ಗೆ ಮತ ನೀಡಿ: ರಾಧಾಕೃಷ್ಣ ದೊಡ್ಡಮನಿ

KannadaprabhaNewsNetwork |  
Published : Apr 08, 2024, 01:01 AM IST
ಗುರುಮಠಕಲ್ ಮತಕ್ಷೇತ್ರದ ಹೊನಗೇರಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮಾತನಾಡಿದರು. | Kannada Prabha

ಸಾರಾಂಶ

ದೇಶದ ಅಭಿವೃದ್ಧಿಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಬೇಕೆಂದು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮನವಿ ಮಾಡಿದರು.

ಕನ್ನಡಪ್ರಭ ವಾರ್ತೆ ಯಾದಗಿರಿ

ಅಭಿವೃದ್ಧಿಗಾಗಿ ಕಾಂಗ್ರೆಸ್‌ ಪಕ್ಷಕ್ಕೆ ಮತ ನೀಡಿ ಗೆಲ್ಲಿಸಬೇಕೆಂದು ಕಲಬುರಗಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಮನವಿ ಮಾಡಿದರು.

ಭಾನುವಾರ ಗುರುಮಠಕಲ್ ಮತಕ್ಷೇತ್ರದ ಹೊನಗೇರಾ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕದ ಹೆಬ್ಬಾಗಿಲು ಎಂದು ಕರೆಯುವ ಕಲಬುರಗಿ ಲೋಕಸಭಾ ಕ್ಷೇತ್ರ ದೇಶದ ಗಮನ ಸೆಳೆಯುತ್ತದೆ, ಇದು ಶರಣರ-ಸೂಫಿ ಸಂತರ ನಾಡು, ಬಿಜೆಪಿ ಪಕ್ಷದವರು ಸಮಾಜದಲ್ಲಿ ವಿಷ ಬೀಜ ಬಿತ್ತುವ ಮೂಲಕ ಜಾತಿ-ಜಾತಿಗಳ ಮಧ್ಯೆ ವೈರತ್ವ ಮೂಡಿಸಿ, ಸಾಮರಸ್ಯ ಹಾಳು ಮಾಡಿದ್ದಾರೆ, ಕಳೆದ 5 ವರ್ಷಗಳಲ್ಲಿ ಸಂಸದರು ಈ ಭಾಗಕ್ಕೆ ಅವರು ನೀಡಿರುವ ಕೊಡುಗೆ ಏನು ಎಂದು ಮತದಾರರು ಪ್ರಶ್ನೀಸಿ, ಚಿಂತನೆ ಮಾಡಿ, ಮತ ಚಲಾಯಿಸಬೇಕೆಂದು ಹೇಳಿದರು.

ಮಾಜಿ ಸಚಿವ ಬಾಬುರಾವ ಚಿಂಚನಸೂರ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ನನಗೆ ಹಾಗೂ ನನ್ನ ಸಮುದಾಯಕ್ಕೆ ನಿಮ್ಮ ಸಮಾಜವನ್ನು ಎಸ್.ಟಿ ವರ್ಗಕ್ಕೆ ಸೇರಿಸುತ್ತೇವೆ ಎಂದು ಭರವಸೆ ನೀಡಿ, ಡಾ. ಜಾಧವ್ ಸಂಸದರಾಗಿ ಆಯ್ಕೆಯಾದ ನಂತರ ಎಲ್ಲರೂ ನಮಗೆ ಮೋಸ ಮಾಡಿದ್ದಾರೆ, ಅವರಿಗೆ ಈ ಚುನಾವಣೆಯಲ್ಲಿ ನಾವೆಲ್ಲರೂ ತಕ್ಕ ಪಾಠ ಕಲಿಸಬೇಕಾಗಿದೆ, ಖರ್ಗೆ ಕುಟುಂಬದಿಂದ ಮಾತ್ರ ಗುರುಮಠಕಲ್ ಕ್ಷೇತ್ರದ ಜನರಿಗೆ ನ್ಯಾಯ ಸಿಗುತ್ತದೆ, ಕಾಂಗ್ರೆಸ್ ಭದ್ರ ಕೋಟೆಯಾಗಿರುವ ಕಲಬುರಗಿ ಕ್ಷೇತ್ರವನ್ನು ಮರು ವಶಪಡಿಸಿಕೊಳ್ಳೋಣ ಎಂದು ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮಾನಸಿಕ ಖಿನ್ನತೆ ಸ್ವಯಂ ಮೌಲ್ಯಮಾಪನಕ್ಕೆ ನಿಮ್ಹಾನ್ಸ್‌ ಆ್ಯಪ್‌
ಒಂದೇ ದಿನ ಜಡ್ಜ್‌ ಮುಂದೆ 60 ಪರೋಲ್‌ ಅರ್ಜಿ!