ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಗುರುವಾರ ದಾವಣಗೆರೆ ದಕ್ಷಿಣ ಕ್ಷೇತ್ರ ಉಪಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕುರಿತಂತೆ ನಡೆದ ಅಧಿಕಾರಿಗಳ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೇ.4ರಂದು ನಡೆಯುವ ಮತ ಎಣಿಕೆ ಕಾರ್ಯವು ಸುಗಮ, ಪಾರದರ್ಶಕ, ಸುರಕ್ಷಿತವಾಗಿ ನಡೆಯಲು ಎಲ್ಲಾ ಇಲಾಖೆ ಅಧಿಕಾರಿಗಳು ಸಮನ್ವಯದಿಂದ ಕೆಲಸ ಮಾಡಬೇಕು ಎಂದರು.
ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ವಾಹನ ಮುಕ್ತ ವಲಯವಾಗಿ ಘೋಷಣೆ ಮಾಡಲಾಗಿದೆ. ಎಣಿಕೆ ಕೇಂದ್ರದ ಗೇಟ್‌ನಿಂದ 100 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಅಲ್ಲಿ ಸಿಆರ್‌ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಲೂ ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆ ಅಳವಡಿಸಲಾಗುವುದು ಎಂದು ತಿಳಿಸಿದರು.ಮುಂದಿನ ಕೆಲ ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಮತ ಎಣಿಕೆ ಕೇಂದ್ರದ ಮೇಲ್ಚಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಲೋಕೋಪಯೋಗಿ ಇಲಾಖೆ, ಬೆಸ್ಕಾಂ ಇಲಾಖೆ ಕಾರ್ಯ ಪಾಲಕ ಅಭಿಯಂತರರು ತಕ್ಷಣ ಮರು ಪರಿಶೀಲಿಸಬೇಕು. ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ, ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ಪಿಡಬ್ಲ್ಯುಡಿ, ಬೆಸ್ಕಾಂನವರು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿ, ಸುಸ್ಥಿತಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ ಎಂದರು.
ಸಿಸಿ ಕ್ಯಾಮೆರಾ ಬ್ಲೈಂಡ್ ಸ್ಪಾಟ್ ಇಲ್ಲದಂತೆ ಕವರೇಜ್ ಇರಲಿ
ಮತ ಎಣಿಕೆ ಕೇಂದ್ರದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಏಜೆಂಟರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆಯಿಂದ ಒಬ್ಬ ನುರಿತ ವೈದ್ಯರನ್ನೊಳಗೊಂಡ ವೈದ್ಯಕೀಯ ತಂಡ ನಿಯೋಜಿಸಬೇಕು ಎಂದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತ ಎಣಿಕಾ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಎಚ್.ಟಿ.ಶೇಖರ್ ಹೇಳಿದರು.