ಅ.ದೇವೇಗೌಡರ ಪರ ಮತಯಾಚನೆ

KannadaprabhaNewsNetwork |  
Published : May 31, 2024, 02:15 AM IST
ಕೆ ಕೆ ಪಿ ಸುದ್ದಿ 01:ನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಮೈತ್ರಿಕೂಟದ ಅಭ್ಯರ್ಥಿ ಅ.ದೇವೇಗೌಡರ ಪರ ಮತಯಾಚನೆ ಸಭೆ. | Kannada Prabha

ಸಾರಾಂಶ

ಕನಕಪುರ: ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಅ.ದೇವೇಗೌಡರನ್ನು ಬಹುಮತದಿಂದ ಆರಿಸಿ ಕಳಿಸಬೇಕು ಎಂದು ತಾಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಬಿ.ನಾಗರಾಜು ಮನವಿ ಮಾಡಿದರು.

ಕನಕಪುರ: ವಿಧಾನ ಪರಿಷತ್ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿ ಅ.ದೇವೇಗೌಡರನ್ನು ಬಹುಮತದಿಂದ ಆರಿಸಿ ಕಳಿಸಬೇಕು ಎಂದು ತಾಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಬಿ.ನಾಗರಾಜು ಮನವಿ ಮಾಡಿದರು. ನಗರದಲ್ಲಿ ಎನ್‌ಡಿಎ ಮೈತ್ರಿಕೂಟದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮೈತ್ರಿಕೂಟದ ಅಭ್ಯರ್ಥಿ ಅ.ದೇವೇಗೌಡರು ವಿಧಾನ ಪರಿಷತ್ ಸದಸ್ಯರಾಗಿ ಪದವೀಧರರ ಸಮಸ್ಯೆಗಳಿಗೆ ಸದಾಕಾಲ ಸ್ಪಂದಿಸುತ್ತಿದ್ದು, ವಿಧಾನ ಪರಿಷತ್ತಿನಲ್ಲಿ ಪದವೀಧರರ ಜ್ವಲಂತ ಸಮಸ್ಯೆಗಳಿಗೆ ಸದಾ ಹೋರಾಡುತ್ತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಅವರನ್ನು ಅಧಿಕ ಮತಗಳಿಂದ ಆರಿಸಿ ಕಳಿಸುವಂತೆ ಮನವಿ ಮಾಡಿದರು.

ರಾಜ್ಯ ಜೆಡಿಎಸ್ ಯುವ ಉಪಾಧ್ಯಕ್ಷ ಚಿನ್ನಸ್ವಾಮಿ ಮಾತನಾಡಿ, ಎನ್‌ಡಿಎ ಮೈತ್ರಿ ಅಭ್ಯರ್ಥಿ ಅ.ದೇವೇಗೌಡ ಪದವೀಧರರ ಸಮಸ್ಯೆಗಳನ್ನು ಹಾಗೂ ಅವರ ನಾಡಿಮಿಡಿತವನ್ನು ಹತ್ತಿರದಿಂದ ಅರಿತಿದ್ದು ಅವರ ಯಾವುದೇ ಸಮಸ್ಯೆಗಳಿರಲಿ ಸರ್ಕಾರದ ಗಮನಕ್ಕೆ ತಂದು ಅದಕ್ಕೆ ಪರಿಹಾರ ದೊರಕಿಸಿಕೊಟ್ಟಿದ್ದಾರೆ. ಈ ಚುನಾವಣೆಯಲ್ಲಿ ತಾಲೂಕಿನ ಪದವೀಧರ ಮತದಾರರು ಬಹುಮತದಿಂದ ಆರಿಸಬೇಕೆಂದರು.

ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಕೆ.ಪಿ.ಕುಮಾರ್, ಮೈತ್ರಿಕೂಟದ ಮುಖಂಡರಾದ ಕಬ್ಬಾಳೇಗೌಡ, ಜೆಡಿಎಸ್ ಹಿರಿಯ ಮುಖಂಡ ಸಿದ್ದಮರಿಗೌಡ, ಕೊತ್ತನೂರು ನಾರಾಯಣ, ನಲ್ಲಹಳ್ಳಿ ಶಿವಕುಮಾರ್, ಕೃಷ್ಣಪ್ಪ, ಮಂಜು ಕುಮಾರ್, ನಗರಸಭಾ ಸದಸ್ಯ ಚಂದ್ರು, ಮಾಜಿ ಸದಸ್ಯ ಪುಟ್ಟರಾಜು, ಬಿಜೆಪಿ ನಗರಾಧ್ಯಕ್ಷೆ ಪವಿತ್ರ, ಜೆಡಿಎಸ್ ಮಹಿಳಾ ಘಟಕದ ಅಧ್ಯಕ್ಷೆ ಶೋಭಾ, ಗ್ರಾಪಂ ಸದಸ್ಯ ರವಿಕುಮಾರ್, ತಾಪಂ ಮಾಜಿ ಸದಸ್ಯ ಧನಂಜಯ, ಅನುಕುಮಾರ್, ರಾಮನಗರ ಯೋಜನಾ ಪ್ರಾಧಿಕಾರದ ಮಾಜಿ ಅಧ್ಯಕ್ಷ ಮುರಳೀಧರ್ ಹಾಜರಿದ್ದರು.ಕೆ ಕೆ ಪಿ ಸುದ್ದಿ 01:

ಚನ್ನಪಟ್ಟಣದಲ್ಲಿ ಮೈತ್ರಿಕೂಟದ ಅಭ್ಯರ್ಥಿ ಅ.ದೇವೇಗೌಡರ ಪರ ಮತಯಾಚಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಲ್ಲಮಾವಟಿ ಭಗವತಿ ದೇವಸ್ಥಾನದಲ್ಲಿ ಶಡಾಧರ ಪೂಜಾ ಸಂಪನ್ನ
ಕಡಿಮೆ ಬೆಳೆ ವಿಮಾ ಮೊತ್ತ ಸರಿಪಡಿಸಿ ಮರು ಪಾವತಿಗೆ ಆಗ್ರಹ