ಕನ್ನಡಪ್ರಭ ವಾರ್ತೆ ಬೆಳಗಾವಿ
ಅನುಭವ ಇರುವ ವ್ಯಕ್ತಿ ಲೋಕಸಭೆಗೆ ಆಯ್ಕೆಯಾದರೆ ನಮ್ಮ ಕೆಲಸಗಳು ಆಗಲಿದೆ. ಜಗದೀಶ್ ಶೆಟ್ಟರ್ ಅವರು ಲೋಕಸಭೆಗೆ ಆಯ್ಕೆಯಾದ ಬಳಿಕ ವಿವಿಧ ಕೈಗಾರಿಗಳು ಬೆಳಗಾವಿಗೆ ಬರುವ ಮೂಲಕ ಉದ್ಯೋಗ ಸೃಷ್ಟಿ ಆಗಲಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿದರು.ಬೆಳಗಾವಿ ದಕ್ಷಿಣ ಮತಕ್ಷೇತ್ರ ವ್ಯಾಪ್ತಿಯಲ್ಲಿರುವ ವಿವಿಧ ಕೈಗಾರಿಕಾ ಪ್ರದೇಶದ ಮಾಲೀಕರು ಹಾಗೂ ಕಾರ್ಮಿಕರೊಂದಿಗೆ ಗುರುವಾರ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಕೈಗೊಂಡ ಪ್ರಚಾರದಲ್ಲಿ ಸಾಥ್ ನೀಡಿ ಮಾತನಾಡಿದರು.ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಮಾತನಾಡಿ, ಬೆಳಗಾವಿಯಲ್ಲಿ ನಾನು ನರೇಂದ್ರ ಮೋದಿಯವರ ಪ್ರತಿನಿಧಿಯಾಗಿ ಸ್ಪರ್ಧೆ ಮಾಡುತ್ತಿದ್ದೇನೆ. 4 ಬಾರಿ ಸುರೇಶ್ ಅಂಗಡಿ ಅವರಿಗೆ ಆಶೀರ್ವಾದ ಮಾಡಿ, ಲೋಕಸಭಾ ಸದಸ್ಯರಾಗಿ ಗೆಲ್ಲಿಸಿದ್ದೀರಿ. ನರೇಂದ್ರ ಮೋದಿಯವರ ಕ್ಯಾಬಿನೆಟ್‌ನಲ್ಲಿ ದಿ.ಸುರೇಶ್ ಅಂಗಡಿಯವರು ರೈಲ್ವೆ ಸಚಿವರಾಗಿ ಕೆಲಸ ಮಾಡಿ ಬೆಳಗಾವಿ ರೈಲ್ವೆ ನಿಲ್ದಾಣ ಹಾಗೂ ವಿವಿಧ ರೈಲ್ವೆಗಳನ್ನು ಅಭಿವೃದ್ಧಿ ಮಾಡಿದ್ದಾರೆ. ಮಂಗಲ ಅಂಗಡಿಯವರು ಕೂಡಾ ಬೆಳಗಾವಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿ ಮಾಡಲು ಪ್ರಯತ್ನ ಮಾಡಿದ್ದಾರೆ ಎಂದರು.
ಬೆಳಗಾವಿ ವಿಮಾನ ನಿಲ್ದಾಣ ಬಹಳಷ್ಟು ಅಭಿವೃದ್ಧಿ ಆಗಿದೆ. ಬರುವ ದಿನಗಳಲ್ಲಿ 2ನೇಯ ಟರ್ಮಿನಲ್ ಕಾಮಗಾರಿ ಪೂರ್ಣ. ಆದರೆ, ಇನ್ನು 14 ರಿಂದ16 ನಗರಗಳಲ್ಲಿ ವಿಮಾನ ಸೇವೆ ಆರಂಭ ಆಗಲಿದೆ. ಕೆಲವು ದಿನಗಳಲ್ಲಿ ಬೆಳಗಾವಿ ವಿಮಾನ ನಿಲ್ದಾಣ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಆಗಲಿದೆ ಎಂದು ತಿಳಿಸಿದರು.ಶೆಟ್ಟರ್ ಅವರು ಸಾಕಷ್ಟು ಅನುಭವ ಇರುವ ರಾಜಕಾರಣಿ. ಸಿಎಂ ಆಗಿ, ವಿವಿಧ ಇಲಾಖೆಯ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಕೆಲಸ ಮಾಡಿದ್ದು, ಅನುಭವವಿರುವ ವ್ಯಕ್ತಿಗೆ ನಿಮ್ಮ ಮತ ನೀಡಬೇಕು. ಜಗದೀಶ ಶೆಟ್ಟರ್ ಅವರಿಗೆ ಮತ ನೀಡುವ ಮೂಲಕ ಮತ್ತೊಮ್ಮೆ ಮೋದಿ ಅವರನ್ನು ಪ್ರಧಾನಿ ಮಾಡಬೇಕು.-ಅಭಯ ಪಾಟೀಲ,
ಶಾಸಕ.