ಕನ್ನಡಪ್ರಭ ವಾರ್ತೆ ಚಿಕ್ಕೋಡಿ
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚಿಕ್ಕೋಡಿ ವಿಧಾನಸಭಾ ಕ್ಷೇತ್ರದ ಖಡಕಲಾಟ ಗ್ರಾಮದಲ್ಲಿ ಜಿಪಂ ವ್ಯಾಪ್ತಿಯ ಲೋಕಸಭೆ ಸಂಸದ ಅಣ್ಣಾಸಾಹೇಬ ಜೊಲ್ಲೆ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಳೆದ 10 ವರ್ಷಗಳಲ್ಲಿ ಮೋದಿಯವರು ಹಲವಾರು ಯೋಜನೆಗಳು ಜಾರಿಗೆ ತಂದಿದ್ದಾರೆ. ಅವುಗಳನ್ನು ಮನೆ ಮನೆಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು. ವಿಕಸಿತ ಭಾರತ ಸಂಕಲ್ಪಕ್ಕಾಗಿ ಮತ್ತೊಮ್ಮೆ ಮೋದಿ ಅವರ ಕೈ ಬಲಪಡಿಸಲು ಚಿಕ್ಕೋಡಿಯಿಂದ ಅಣ್ಣಾಸಾಹೇಬ ಜೊಲ್ಲೆ ಅವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ಬಿಜೆಪಿ ಅಭ್ಯರ್ಥಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮಾತನಾಡಿ, ನರೇಂದ್ರ ಮೋದಿ ಅವರು ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದು, ಭಾರತದ ಅಭ್ಯುದಯಕ್ಕೆ ಅಪಾರ ಕೊಡುಗೆ ನೀಡುತ್ತಿದ್ದಾರೆ. ಪ್ರಧಾನಮಂತ್ರಿಯನ್ನಾಗಿಸಲು ಹಾಗೂ ಚಿಕ್ಕೋಡಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನನ್ನನ್ನು ಬೆಂಬಲಿಸಿ, ಪ್ರಚಂಡ ಬಹುಮತಗಳಿಂದ ಗೆಲ್ಲಿಸಿ ಎಂದು ಮನವಿ ಮಾಡಿದರು.ಜಿಲ್ಲಾಧ್ಯಕ್ಷ ಸತೀಶ ಅಪ್ಪಾಜಿಗೋಳ, ವಿಶ್ವನಾಥ ಕಮತೆ, ಎನ್.ಜಿ.ಪಾಟೀಲ, ಪ್ರಲ್ಹಾದ ಪಾಟೀಲ, ಕಾಶೀನಾಥ ಕಮತೆ, ರಾವಸಾಬ್ ಝಿಪರೆ, ವಿನಾಯಕ ಪಾಟೀಲ, ಪವನ ಮಹಾಜನ, ಉಮೇಶ ಘಾಟಗೆ ಹಾಗೂ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.
--------