ಕನ್ನಡಪ್ರಭ ವಾರ್ತೆ ಆಳಂದ
ಪಟ್ಟಣದ ಸರ್ಕಾರಿ ಡಿಗ್ರಿ ಕಾಲೇಜು, ಎಚ್‍ಕೆಇ ಪ್ರತಿಷ್ಠಿತ ಎ.ವಿ.ಪಾಟೀಲ ಪದವಿ ಮಹಾವಿದ್ಯಾಯ ಸೇರಿ ಇನ್ನಿತರ ಕಡೆ ಶುಕ್ರವಾರ ಪದವೀಧರ ಮತದಾರರ ಬಳಿ ತೆರಳಿದ ಅವರು ಸಭೆ ನಡೆಸಿ ಮತಯಾಚನೆ ನಡೆಸಿದರು.
ಈಶಾನ್ಯ ಕ್ಷೇತ್ರವು ಕಲ್ಯಾಣ ಕರ್ನಾಟಕ ಭಾಗದ 7 ಜಿಲ್ಲೆಯಲ್ಲಿ ಆರ್ಥಿಕವಾಗಿ, ಶೈಕ್ಷಣಿಕವಾಗಿ ತೀರಾ ಹಿಂದುಳಿದ ಭಾಗವಾಗಿದೆ. ಪ್ರೊ. ಡಿ.ಎಂ.ನಂಜುಂಡಪ್ಪ ವರದಿಯು ಈ ಭಾಗದ ಹಿಂದುಳಿಯುವಿಕೆಗೆ ‘ಶಿಕ್ಷಣದ ಸೌಲಭ್ಯಗಳ ಕೊರತೆಯು ಮುಖ್ಯ ಕಾರಣವಾಗಿದೆ’ ಎಂದು ಗುರುತಿಸಿದೆ ಎಂದರು.ರಾಜ್ಯದಲ್ಲಿ ಇನ್ನು 4 ವರ್ಷ ಕಾಂಗ್ರೆಸ್ ಸರ್ಕಾರದ ಆಡಳಿತ ಮುಂದುವರಿಯಲಿದೆ. ನುಡಿದಂತೆ ನಡೆದ ಈ ಸರ್ಕಾರವು ಅಧಿಕಾರಕ್ಕೆ ಬಂದು ಐದು ತಿಂಗಳುಗಳಲ್ಲಿ ಚುನಾವಣೆ ಪೂರ್ವದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸಿ ಅದರ ಲಾಭವನ್ನು ಸಮರ್ಪಕವಾಗಿ ಜನಸಾಮಾನ್ಯರಿಗೆ ತಲುಪಿಸಿದೆ. ಯುವ ಜನತೆಯ ಉಜ್ವಲ ಭವಿಷ್ಯಕ್ಕಾಗಿ ಪದವಿ ಹಾಗೂ ಡಿಪ್ಲೊಮಾ ಉತ್ತೀರ್ಣರಾದ ನಿರುದ್ಯೋಗಿ ಯುವಕರಿಗೆ ಮಾಸಿಕ ರು. 3000 ಹಾಗೂ ಡಿಪ್ಲೊಮಾ ಮುಗಿಸಿದವರಿಗೆ ರು.1500 ನಿರುದ್ಯೋಗ ಭತ್ಯೆಯನ್ನು ಯುವ ನಿಧಿ ಕಾರ್ಯಕ್ರಮದಡಿ ಅನುಷ್ಠಾನಕ್ಕೆ ತಂದಿದೆ ಎಂದರು.
ಅತಿಥಿ ಶಿಕ್ಷಕರು, ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ, ಸರ್ಕಾರದ ವಿವಿಧ ಇಲಾಖೆಯಲ್ಲಿ ಖಾಲಿಯಿರುವ ಹುದ್ದೆಗಳ ನೇಮಕಾತಿ ಮುಂತಾದ ಕ್ರಮಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಕೈಗೊಳ್ಳಲು ದಿಟ್ಟ ಹೆಜ್ಜೆ ಇಟ್ಟಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದರೆ ದೇಶಾದ್ಯಂತ 30 ಲಕ್ಷ ಸರ್ಕಾರಿ ಹುದ್ದೆಗಳನ್ನು ತುಂಬಲು ಮತ್ತು ಪ್ರತಿ ವಿದ್ಯಾವಂತ ಯುವಜನರಿಗೆ ವರ್ಷಕ್ಕೆ ಒಂದು ಲಕ್ಷ ವಿದ್ಯಾರ್ಥಿ ವೇತನವನ್ನು ನೀಡಲು ಲೋಕಸಭಾ ಚುನಾವಣಾ ಪ್ರಣಾಳಿಕೆಯಲ್ಲಿ ‘ಪಂಚ ನ್ಯಾಯ’ದಡಿ ವಚನ ನೀಡಿದೆ. ಈ ನಿಟ್ಟಿನಲ್ಲಿ ಶಿಕ್ಷಣ, ಉದ್ಯೋಗ ಅವಕಾಶಗಳು ಹಾಗೂ ಕಲ್ಯಾಣ ಕರ್ನಾಟಕ ಭಾಗದ ಪ್ರಮುಖ ಸಮಸ್ಯೆಗಳನ್ನು ಗುರುತಿಸಿ ಸರ್ಕಾರದ ಗಮನ ಸೆಳೆಯಲು ಡಾ. ಚಂದ್ರಶೇಖರ ಬಿ. 6 ವರ್ಷದ ಅನುಭವವಿದೆ. ಅವರ ಜೊತೆಗೆ ಆಡಳಿತದಲ್ಲಿ ಕಾಂಗ್ರೆಸ್ ಸರ್ಕಾರ ಇರುವುದರಿಂದ ಪರಿಣಾಮಕಾರಿ ಸ್ಪಂದಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.
ಎಚ್‍ಕೆಇ ಡಿಗ್ರಿ ಕಾಲೇಜಿನಲ್ಲೂ ಪ್ರಾಚಾರ್ಯರು, ಬೋಧಕ ಬೋಧಕೇತರ ಸಿಬ್ಬಂದಿ ಜೊತೆ ಶಾಸಕರು ಸಭೆ ನಡೆಸಿ ಮತಯಾಚನೆ ಮಾಡಿದರು.