ಕನ್ನಡಪ್ರಭ ವಾರ್ತೆ ಮಳವಳ್ಳಿ
ದೇಶ, ಸಂವಿಧಾನ ಉಳಿಸಲು ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು) ಅವರನ್ನು ಬೆಂಬಲಿಸುವ ಮೂಲಕ ಕಾಂಗ್ರೆಸ್ ಕೈ ಬಲಪಡಿಸಬೇಕು ಎಂದು ಮಾಜಿ ಸಚಿವೆ ಬಿ.ಟಿ.ಲಲಿತಾ ನಾಯಕ್ ಕರೆ ನೀಡಿದರು.ತಾಲೂಕಿನ ವಿವಿಧ ಗ್ರಾಮಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ (ಸ್ಟಾರ್ ಚಂದ್ರು), ಶಾಸಕ ಪಿ.ಎಂ.ನರೇಂದ್ರಸ್ವಾಮಿ ಜೊತೆಗೂಡಿ ಪ್ರಚಾರ ನಡೆಸಿ ಮಾತನಾಡಿದರು.
ಮಂಡ್ಯ ಜಿಲ್ಲೆಯನ್ನು ಅಭಿವೃದ್ಧಿ ಪಡಿಸುವ ಆಕಾಂಕ್ಷೆಯೊಂದಿಗೆ ರಾಜಕೀಯಕ್ಕೆ ಬಂದಿದ್ದೇನೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚಿನ ಮತ ನೀಡಿ ಗೆಲ್ಲಿಸುವ ಮೂಲಕ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಜೊತೆ ಅಭಿವೃದ್ಧಿಗೆ ಕೈಜೋಡಿಸಲು ಸಹಕಾರ ನೀಡಬೇಕು ಅಭ್ಯರ್ಥಿ ಸ್ಟಾರ್ ಚಂದ್ರು ಕೋರಿದರು.ತಾಲೂಕಿನ ತಳಗವಾದಿಯಲ್ಲಿ ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಟಿ.ಎಲ್.ಕೃಷ್ಣೇಗೌಡ ಮಾತನಾಡಿ, ಕಳೆದ ಹತ್ತು ವರ್ಷಗಳಿಂದ ದೇಶದಲ್ಲಿ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು ಸುಳ್ಳು ಭರವಸೆ ನೀಡಿ ಜನರ ವಂಚಿಸುತ್ತಿದ್ದಾರೆ ಎಂದು ಆರೋಪಿಸಿದರು.
ವಿಧಾನ ಪರಿಷತ್ ಮಾಜಿ ಸದಸ್ಯ ಮರಿತಿಬ್ಬೇಗೌಡ, ಶಾಸಕ ಪಿ.ಎಂ.ನರೇಂದ್ರಸ್ವಾಮಿ ಮಾತನಾಡಿ, ಮೈಸೂರಿಗೆ ಬಂದ ಪ್ರಧಾನಿ ನರೇಂದ್ರ ಮೋದಿ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಅವರನ್ನು ಟೀಕೆ ಮಾಡಿದ್ದಾರೆಯೇ ಹೊರತು ಕರ್ನಾಟಕಕ್ಕೆ ನೀಡಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಿಲ್ಲ ಎಂದು ಛೇಡಿಸಿದರು.ಎಪಿಎಂಸಿ ಮಾಜಿ ಸದಸ್ಯ ದಿಲೀಪ್ ಕುಮಾರ್(ವಿಶ್ವ) ಮಾತನಾಡಿದರು. ಇದೇ ವೇಳೆ ಗ್ರಾಮದ ಮುಖಂಡ ಚೌಡಯ್ಯ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡರು.ಎಸ್ಸಿ, ಎಸ್ಟಿ ಸಮುದಾಯ ಕಾಂಗ್ರೆಸ್ ಬೆಂಬಲಿಸಬೇಕು: ಕೆಪಿಸಿಸಿ ಸದಸ್ಯ ಚಿದಂಬರಂ ಮೂರ್ತಿಮದ್ದೂರು:ಸಂವಿಧಾನದ ರಕ್ಷಣೆ, ಪ್ರಜಾಪ್ರಭುತ್ವದ ಉಳಿವಿಗಾಗಿ ಈ ಬಾರಿ ಎಸ್ಸಿ,ಎಸ್ಟಿ ಸಮುದಾಯದ ಮತದಾರರು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು ಎಂದು ಕೆಪಿಸಿಸಿ ಸದಸ್ಯ ಕಾಡುಕೊತ್ತನಹಳ್ಳಿ ಚಿದಂಬರಂ ಮೂರ್ತಿ ಕರೆ ನೀಡಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿ, ಸಂವಿಧಾನದ ಉಳಿವು, ಪ್ರಜಾಪ್ರಭುತ್ವದ ರಕ್ಷಣೆ ಕಾಂಗ್ರೆಸ್ ಪಕ್ಷದ ಅವಶ್ಯಕತೆ ಇದೆ. 5 ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮೂಲಕ ಬಡವರ ಬದುಕಿಗೆ ನೆರವಾಗಿದೆ ಎಂದರು.ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಬಗ್ಗೆ ಅಪಾರ ಗೌರವ ಹೊಂದಿರುವ ಕಾಂಗ್ರೆಸ್ ಪಕ್ಷಕ್ಕೆ ಎಸ್ಸಿ ಎಸ್ಟಿ ಜನಾಂಗದವರು ಮತ ನೀಡಿ ಅಭ್ಯರ್ಥಿ ವೆಂಕಟರಮಣಗೌಡ ಸ್ಟಾರ್ ಚಂದ್ರುರನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದರು.ಕೋಮುವಾದಿ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷ ಸೇರಿಕೊಂಡಿದೆ. ಬಿಜೆಪಿಯವರು ಗೆದ್ದ ನಂತರ ಸಂವಿಧಾನವನ್ನು ಬದಲಾವಣೆ ಮಾಡುವ ಕಾರ್ಯಕ್ಕೆ ಕೈ ಹಾಕುತ್ತಾರೆ. ಆದ್ದರಿಂದ ಹಿಂದುಳಿದ ಮತ್ತು ದಲಿತರು ಎತ್ತೆಚ್ಚಿಕೊಳ್ಳದಿದ್ದರೆ ಮುನ್ನೊಂದು ದಿನ ಅಪಾಯ ಖಂಡಿತ ಎಂದು ಎಚ್ಚರಿಸಿದರು.ಈ ವೇಳೆ ಎಸ್ಸಿ,ಎಸ್ಟಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದೊರೆಸ್ವಾಮಿ, ಪುರಸಭೆ ಮಾಜಿ ಸದಸ್ಯ ಮರಿದೇವರು, ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ನಾಗಭೂಷಣ್, ಗ್ಯಾರೆಂಟಿ ಯೋಜನೆಗಳ ಜಿಲ್ಲಾ ಉಪಾಧ್ಯಕ್ಷ ರಾಜೇಂದ್ರ ಮುಖಂಡರಾದ ಶಿವಲಿಂಗಯ್ಯ, ಅಣ್ಣೂರು ಮಹಾದೇವಯ್ಯ, ಆಲೂರು ಕುಮಾರ್, ಕಾರ್ಕಳ್ಳಿ ಬಸವರಾಜು, ಪ್ರಸನ್ನ, ಸುಮಾವತಿ ಸೇರಿದಂತೆ ಇತರರು ಇದ್ಧರು.