ಅಭಿವೃದ್ಧಿ ಮಾಡಿರುವವರ ಪರವಾಗಿ ಮತ ನೀಡಿ: ಎಸ್‌ಎಸ್

KannadaprabhaNewsNetwork |  
Published : Nov 24, 2024, 01:47 AM IST
ಕ್ಯಾಪ್ಷನ 22ಕೆಡಿವಿಜಿ31 ದಾವಣಗೆರೆಯ 21ನೇ ವಾರ್ಡ್ನ ಬಸಾಪುರ ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು. | Kannada Prabha

ಸಾರಾಂಶ

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 21ನೇ ವಾರ್ಡ್ ನ ಬಸಾಪುರ ಗ್ರಾಮದಲ್ಲಿ ಮಹಾನಗರ ಪಾಲಿಕೆಯ 15ನೇ ಹಣಕಾಸು ನಿಧಿಯಡಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು.

ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆಯ 21ನೇ ವಾರ್ಡ್ ನ ಬಸಾಪುರ ಗ್ರಾಮದಲ್ಲಿ ಮಹಾನಗರ ಪಾಲಿಕೆಯ 15ನೇ ಹಣಕಾಸು ನಿಧಿಯಡಿ ರಸ್ತೆ ಮತ್ತು ಚರಂಡಿ ಅಭಿವೃದ್ಧಿ ಕಾಮಗಾರಿಗೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು.ಬಳಿಕ ಗ್ರಾಮಸ್ಥರನ್ನುದ್ದೇಶಿಸಿ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಹುತೇಕ ಎಲ್ಲಾ ವಾರ್ಡ್ ಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ಮುಕ್ತಾಯಗೊಂಡಿದ್ದು, ಇನ್ನು ಕೆಲವು ಕಾಮಗಾರಿಗಳಿವೆ. ಅವುಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು.ಬಸಾಪುರ ಗ್ರಾಮದ ಬಹುತೇಕ ಎಲ್ಲಾ ರಸ್ತೆಗಳು ಅಭಿವೃದ್ಧಿ ಪಡಿಸಲಾಗಿದೆ. ಇದೀಗ ಇನ್ನಷ್ಟು ಅಭಿವೃದ್ಧಿ ಬಗ್ಗೆ ಮನವಿ ಮಾಡಿರುವ ಗ್ರಾಮಸ್ಥರು ಚುನಾವಣೆ ಬಂದ ವೇಳೆ ಜಾತಿ ಮತ ನೋಡದೇ ಅಭಿವೃದ್ಧಿ ಮಾಡಿರುವವರ ಪರವಾಗಿ ಮತ ಚಲಾಯಿಸಬೇಕೆಂದು ಕರೆ ನೀಡಿದರು.ಮಹಾನಗರ ಪಾಲಿಕೆ ಮಾಜಿ ಸದಸ್ಯ ಬಾ.ಮ.ಬಸವರಾಜಯ್ಯ ಮಾತನಾಡಿ, ಶಾಮನೂರು ಶಿವಶಂಕರಪ್ಪನವರು ಶಾಸಕರಾದ ನಂತರ ನಮ್ಮ ಗ್ರಾಮದ ಎಲ್ಲಾ ರಸ್ತೆಗಳನ್ನು ಅಭಿವೃದ್ಧಿ ಪಡಿಸಿದ್ದಾರೆ. ಜೊತೆಗೆ ಗ್ರಾಮಸ್ಥರ ಬೇಡಿಕೆಗೆ ಸದಾ ಸ್ಪಂದಿಸಿದ್ದಾರೆ ಎಂದರು.ಗ್ರಾಮದ ಮುಖಂಡ ಸುರೇಂದ್ರಪ್ಪ ಮಾತನಾಡಿ, ಗ್ರಾಮದ ಸ್ಮಶಾನ ಅಭಿವೃದ್ಧಿಗೆ ಸಹಕಾರ ನೀಡಬೇಕೆಂದು ಮನವಿ ಮಾಡಿದರು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಮಹಾಪೌರ ಕೆ.ಚಮನ್ ಸಾಬ್, 21ನೇ ವಾರ್ಡ್‌ನ ಸದಸ್ಯರಾದ ಶೀವಲೀಲಾ ಕೊಟ್ರಯ್ಯ, ಆಯುಕ್ತೆ ರೇಣುಕಾ, ಎಪಿಎಂಸಿ ಮಾಜಿ ನಿರ್ದೇಶಕ ಎಂ.ಎಸ್.ಕೊಟ್ರಯ್ಯ, ಮಹೇಶ್ವರಪ್ಪ, ನಾಗೇಂದ್ರಚಾರ್, ಚೌಡಪ್ಪ, ಲಿಂಗರಾಜ್, ಬಿ.ಟಿ.ಮರಳಸಿದ್ದಪ್ಪ, ಕೆ.ಎಂ.ಕೊಟ್ರಯ್ಯ, ರೇವಣಸಿದ್ದಪ್ಪ, ರವೀಂದ್ರ, ತಿಪ್ಪೇಶ್, ಅರುಣಕುಮಾರ್, ಎ.ಕೆ.ರಾಮಪ್ಪ ಮತ್ತಿತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಸ್ಯೆ ಬಗೆಹರಿದ್ರೆ 6 ತಿಂಗಳಲ್ಲಿ 1 ಲಕ್ಷ ನೇಮಕಾತಿ : ಸಾರಿಗೆ ಸಚಿವ
ಸರ್ಕಾರದಿಂದ ಮಹತ್ವದ ನಿರ್ಧಾರ : ವಿಪತ್ತು ವೇಳೆ ಇಡೀ ಊರಿನ ರೈತರಿಗೆ ಪರಿಹಾರ