ಜಿಲ್ಲೆಯ ಅಭಿವೃದ್ಧಿಗಾಗಿ ಸ್ಟಾರ್ ಚಂದ್ರುಗೆ ಮತ ನೀಡಿ: ವಿಜಯ ರಾಮೇಗೌಡ

KannadaprabhaNewsNetwork | Published : Apr 25, 2024 1:00 AM

ಸಾರಾಂಶ

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. 5 ಗ್ಯಾರಂಟಿಗಳ ಮೂಲಕ ಸಮಾಜದ ಸರ್ವಜನರಿಗೂ ಕಾರ್ಯಕ್ರಮ ಜಾರಿಗೊಳಿಸಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯ ಸರ್ಕಾರದ ಜನಪರ ಯೋಜನೆಗಳಿಗೆ ಮತ್ತಷ್ಟು ಶಕ್ತಿ ಬರಲಿದೆ. ಅಧಿಕಾರ ಪಡೆಯುವ ಏಕೈಕ ಆಸೆಯಿಂದ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಾಗಿದೆ.

ಕನ್ನಡಪ್ರರ್ವಾರ್ತೆ ವಾರ್ಕೆ.ಆರ್.ಪೇಟೆ

ಮಂಡ್ಯ ಜಿಲ್ಲೆಯ ಸಮಗ್ರ ಅಭಿವೃದ್ಧಿಗಾಗಿ ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಅವರಿಗೆ ಮತ ನೀಡುವಂತೆ ಕಾಂಗ್ರೆಸ್ ಮುಖಂಡ ವಿಜಯ ರಾಮೇಗೌಡ ಮನವಿ ಮಾಡಿದರು.

ಸ್ವ-ಗ್ರಾಮ ಬೂಕನಕೆರೆ ಗೋಗಾಲಮ್ಮನಿಗೆ ಕಾರ್ಯಕರ್ತರೊಂದಿಗೆ ಸೇರಿ ವಿಶೇಷ ಪೂಜೆ ಸಲ್ಲಿಸಿದ ನಂತರ ಬೂಕನಕೆರೆ ಹೋಬಳಿಯ ವಿವಿಧ ಗ್ರಾಮಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿ ಮಾತನಾಡಿದರು.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ. 5 ಗ್ಯಾರಂಟಿಗಳ ಮೂಲಕ ಸಮಾಜದ ಸರ್ವಜನರಿಗೂ ಕಾರ್ಯಕ್ರಮ ಜಾರಿಗೊಳಿಸಿದೆ. ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ರಾಜ್ಯ ಸರ್ಕಾರದ ಜನಪರ ಯೋಜನೆಗಳಿಗೆ ಮತ್ತಷ್ಟು ಶಕ್ತಿ ಬರಲಿದೆ ಎಂದರು.

ರೈತರ ಸಾಲಮನ್ನಾ, ಮಹಿಳೆಯರಿಗೆ ವಾರ್ಷಿಕ 1 ಲಕ್ಷ ರು. ಆರ್ಥಿಕ ನೆರವು, ಮಹಿಳೆಯರಿಗೆ ಶೇ.50 ರಷ್ಟು ಉದ್ಯೋಗ ಮೀಸಲಾತಿ ಸೇರಿದಂತೆ ಹತ್ತು ಹಲವು ಜನಪರ ಯೋಜನೆ ಜಾರಿಗೆ ತಂದು ದೇಶದ ಸಮಗ್ರ ಅಭಿವೃದ್ಧಿಗೆ ಕಾಂಗ್ರೆಸ್ ಶ್ರಮಿಸಲಿದೆ ಎಂದರು.

ಅಧಿಕಾರ ಪಡೆಯುವ ಏಕೈಕ ಆಸೆಯಿಂದ ರಾಜ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಯಾಗಿದೆ. ಪ್ರಧಾನಿ ನರೇಂದ್ರ ಮೋದಿ ಬಂಡವಾಳಶಾಹಿಗಳಿಗೆ ಶಕ್ತಿ ತುಂಬಿದೆಯೇ ಹೊರತು ಬಡವರ ಬದುಕನ್ನು ಹಸನುಗೊಳಿಸುವ ಕೆಲಸ ಮಾಡಿಲ್ಲ ಎಂದು ದೂರಿದರು.

ಸ್ಟಾರ್ ಚಂದ್ರು ಹಣವಂತರಾಗಿದ್ದರೂ ಉತ್ತಮ ಸಂಸ್ಕಾರವಂತ ನಡವಳಿಕೆ ವ್ಯಕ್ತಿ. ಕ್ಷೇತ್ರದ ಮತದಾರರು ಅವರಿಗೆ ಮತಹಾಕುವ ಕೈ ಬಲಪಡಿಸುವಂತೆ ಮನವಿ ಮಾಡಿದರು.

ಈ ವೇಳೆ ಕೃಷಿ ಪತ್ತಿನ ಸಂಘದ ನಿರ್ದೇಶಕರಾದ ಮಹೇಶ್, ಪ್ರಸಾದ್, ಮಲ್ಲಿಕಾರ್ಜುನ್, ಸುರೇಶ್, ಗ್ರಾಪಂ ಸದಸ್ಯರಾದ ಗಿರೀಶ್, ಅರುಣೇಶ್, ರವಿರಾಮೇಗೌಡ, ಲೋಹಿತ್, ತಮ್ಮಯ್ಯ, ರಾಮು, ಗಿರಿ, ಕೃಷ್ಣ, ವಿಜಯ್ ರಾಮೇಗೌಡರ ಆಪ್ತ ಸಹಾಯಕ ಬಸವರಾಜು ಸೇರಿದಂತೆ ಹಲವು ಉಪಸ್ಥಿತರಿದ್ದರು.

Share this article