ದೇಶದ ಏಳ್ಗೆಗಾಗಿ ಮತದಾನ ಮಾಡಿ

KannadaprabhaNewsNetwork |  
Published : Apr 19, 2024, 01:00 AM IST
ಕ್ಯಾಂಡಲ್ ಮಾರ್ಚ್ ಜಾಥಾ ಮೂಲಕ ಮತದಾನದ ಜಾಗೃತಿ. | Kannada Prabha

ಸಾರಾಂಶ

ಮತದಾನ ಮಾಡಿ ದೇಶದ ಏಳಿಗೆಗೆ ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಮತದಾನ ಮಾಡಿ ದೇಶದ ಏಳಿಗೆಗೆ ಸಹಕರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು. ಅವರು ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ ವಿಜಯಪುರ, ಮಹಾನಗರ ಪಾಲಿಕೆ ವಿಜಯಪುರ ಹಾಗೂ ಇವರ ಸಹಯೋಗದಲ್ಲಿ ಲೋಕಸಭಾ ಚುನಾವಣೆ 2024ರ ಹಿನ್ನೆಲೆಯಲ್ಲಿ ಮತದಾನ ಜಾಗೃತಿ ಮೂಡಿಸಲು ಹಮ್ಮಿಕೊಂಡ ಕ್ಯಾಂಡಲ್ ಮಾರ್ಚ್ ಜಾಥಾ ಕಾರ್ಯಕ್ರಮ ಚಾಲನೆ ನೀಡಿ ಮಾತನಾಡಿದ ಅವರು, ಎಲ್ಲರೂ ತಪ್ಪದೇ ಮತದಾನ ಮಾಡುವುದರ ಜೊತೆಗೆ ನೆರೆಹೊರೆಯವರನ್ನು ಮತದಾನ ಮಾಡುವಂತೆ ಜಾಗೃತಿ ಮೂಡಿಸಬೇಕು. ಪ್ರಜ್ಞಾವಂತ ನಾಗರಿಕರಾಗಿ ದೇಶದ ಏಳಿಗೆಗೆ ಮತದಾನ ಮಾಡುವುದನ್ನು ಮರೆಯಬಾರದು ಎಂದು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷರು ಮತ್ತು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹಾಗೂ ಸಹಾಯಕ ಚುನಾವಣಾ ಅಧಿಕಾರಿ ವಿಜಯಪುರ ನಗರ ಲೋಕಸಭಾ ಮತಕ್ಷೇತ್ರ ಹಾಗೂ ಮಹಾನಗರ ಪಾಲಿಕೆ ಆಯುಕ್ತ ಅಶಾದ ಉರ್ ರೆಹಮಾನ್ ಶರೀಫ್ ಮಾತನಾಡಿದರು.

ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ನಗರದ ಹೃದಯ ಭಾಗವಾಗಿರುವ ಗಾಂಧಿ ವೃತ್ತದವರೆಗೆ ಮತದಾನ ಜಾಗೃತಿಗಾಗಿ ಮೆಣದ ಬತ್ತಿ ಬೆಳಗುವ ದೀಪ (ಕ್ಯಾಂಡಲ್ ಮಾರ್ಚ್) ಜಾಥಾ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಮಹಾನಗರ ಪಾಲಿಕೆ ಉಪ ಆಯುಕ್ತ ಮಹಾವೀರ ಬೋರಣ್ಣವರ ಮತದಾರರಿಗೆ ಪ್ರತಿಜ್ಞಾವಿಧಿಯನ್ನು ಭೋಧಿಸಿದರು. ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಸಿ. ಆರ್ ಮುಂಡರಗಿ, ಯೋಜನಾ ಅಂದಾಜು ಮತ್ತು ಮೌಲ್ಯಮಾಪನಾಧಿಕಾರಿ ಎ. ಬಿ ಅಲ್ಲಾಪೂರ, ವಿಜಯಪುರ ತಾ.ಪಂ. ಇಒ ಕೆ. ಹೊಂಗಯ್ಯ, ತಾಲೂಕ ವೈದ್ಯಾಧಿಕಾರಿ ಹಿಟ್ನಳ್ಳಿ, ಸಿಡಿಪಿಓ ಬಸವರಾಜ ಜಿಗಳೂರ, ಜಿಲ್ಲಾ ಘಟಕದ ನೋಡಲ್ ಅಧಿಕಾರಿ ಪ್ರಕಾಶ ರಾಠೋಡ, ಜಿಲ್ಲಾ ಸ್ವೀಪ್ ಸಮಿತಿಯ ರಾಯಭಾರಿಗಳಾದ ಸಾಕ್ಷಿ ಹಿರೇಮಠ, ರಾಜೇಶ ಪವಾರ, ಸಹನಾ ಕುಡಿಗನೂರ, ಮಹಾನಗರ ಪಾಲಿಕೆಯ ಸಂಘಟನಾಧಿಕಾರಿ ಸಾವಿತ್ರಿ ತಿಪ್ಪನ್ನವರ, ಸಿಆರ್‌ಪಿಗಳಾದ ಪ್ರಗತಿ ಕುಲಕರ್ಣಿ, ಪ್ರಿಯಾಂಕ ಪಾಟೀಲ್, ಶ್ವೇತಾ ತೆಲ್ಸಂಗ, ಮಮತಾ ಹಾಗೂ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಯವರು, ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಸ್ವ ಸಹಾಯ ಸಂಘಗಳ ಮಹಿಳೆಯರು, ಆಶಾ ಕಾರ್ಯಕರ್ತೆಯರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ