- ಯಾದಗಿರಿ ನಗರದಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆಯಲ್ಲಿ ನ್ಯಾಯಾಧೀಶರಾದ ಮರುಳಸಿದ್ಧಾರಾಧ್ಯ ಸಲಹೆ
ಕನ್ನಡಪ್ರಭ ವಾರ್ತೆ ಯಾದಗಿರಿ
ಭಾರತದ ಪ್ರಜಾಪ್ರಭುತ್ವ ವ್ಯವಸ್ಥೆ ಬಲಗೊಳಿಸಲು ಹಾಗೂ ಯಶಸ್ವಿಗೊಳಿಸಲು ಅರ್ಹ ಮತದಾರರು ತಪ್ಪದೇ ಮತ ಚಲಾಯಿಸುವಂತೆ ಪ್ರಧಾನ ಜಿಲ್ಲಾ ಹಾಗೂ ಸತ್ರ ನ್ಯಾಯಾಧೀಶರಾದ ಮರುಳಸಿದ್ಧಾರಾಧ್ಯ ಅವರು ಹೇಳಿದರು.ಭಾರತೀಯ ಚುನಾವಣಾ ಆಯೋಗ, ಕರ್ನಾಟಕ, ಮುಖ್ಯ ಚುನಾವಣಾಧಿಕಾರಿಗಳು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಇವರ ಸಹಯೋಗದಲ್ಲಿ ಭಾನುವಾರ, ನಗರದ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮತದಾನ ಐಚ್ಛಿಕವಾಗಿದೆ. ನನ್ನ ದೇಶ, ನನ್ನ ರಾಷ್ಟ್ರ, ನನ್ನ ಮತ ಮುಖ್ಯ ಎಂದು ಭಾವಿಸಿ ಮತ ಚಲಾಯಿಸಬೇಕು. ದೇಶದಲ್ಲಿ ಈವರೆಗೆ ಹಲವು ಲೋಕಸಭಾ ಚುನಾವಣೆಗಳು ಹಾಗೂ ವಿಧಾನಸಭಾ ಚುನಾವಣೆಗಳು ನಡೆದಿವೆ. ಭಾರತದ ಯಾವುದೇ ಮೂಲೆಯಲ್ಲಿ ಅತ್ಯುತ್ತಮ ಮತದಾನ ಆದ ಕಡೆಗಳಲ್ಲಿ ಆಡಳಿತ ಅತ್ಯಂತ ಯಶಸ್ವಿಯಾಗಿದೆ. ಮತದಾನ ಸಂವಿಧಾನಿಕ ಹಾಗೂ ಮೂಲಭೂತ ಹಕ್ಕು ಆಗಿದ್ದು, ಭಾರತದ ಐಕ್ಯತೆ, ಸಮಾನತೆಯ ಪ್ರತೀಕವಾಗಿದೆ. ರಾಷ್ಟ್ರಪತಿಗಳು ಹಾಗೂ ಸಾಮಾನ್ಯ ನಾಗರಿಕನಿಗೂ ಸಮಾನ ಮತದಾನದ ಹಕ್ಕು ಇರುವುದರಿಂದ, ತಪ್ಪದೇ ಮತ ಚಲಾಯಿಸುವಂತೆ ಅವರು ಕರೆ ನೀಡಿದರು.
ಚುನಾವಣಾ ಆಯೋಗವು ಇತ್ತೀಚೆಗೆ ಭಾರತೀಯ ನಾಗರಿಕರ ಮೇಲೆ ಹೆಚ್ಚಿನ ಜವಾಬ್ದಾರಿ ನೀಡಿದೆ. ಮತದಾರರ ಪಟ್ಟಿ ಪರಿಷ್ಕರಣೆ ಅನ್ವಯ ನಲವತ್ತು ವರ್ಷದೊಳಗಿನ ಹಾಗೂ ನಲವತ್ತು ವರ್ಷ ಮೇಲ್ಪಟ್ಟವರ ಅಧಿಕೃತ ದಾಖಲಾತಿಗಳ ಸಲ್ಲಿಕೆ ಆಧಾರದ ಮೇಲೆ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಿದೆ. ನಿಗಧಿತ ಅರ್ಜಿ ನಮೂನೆಗಳ ಮೂಲಕ ಮತದಾರರ ಪಟ್ಟಿಯಲ್ಲಿ ಅರ್ಹರು ತಮ್ಮ ಹೆಸರು ನೋಂದಾಯಿಸಿಕೊಳ್ಳಬೇಕು. ನಿಗದಿತ ಆ್ಯಪ್ ಹಾಗೂ ಆನ್ಲೈನ್ ಮೂಲಕ ನೋಂದಣಿಗೆ ಅವಕಾಶವಿರುವದರಿಂದ ಸದುಪಯೋಗಪಡಿಸಿಕೊಳ್ಳಬೇಕು. ಚುನಾವಣಾ ಪ್ರಕ್ರಿಯೆಗಳಲ್ಲಿ ತಪ್ಪದೇ ಭಾಗವಹಿಸುವಂತೆ ಅವರು ಸಲಹೆ ನೀಡಿದರು.
===ಬಾಕ್ಸ್===
ಅತ್ಯುತ್ತಮ ಬೂತ್ ಮಟ್ಟದ ಬಿಎಲ್ಒ, ಬಿಎಲ್ಒ ಮೇಲ್ವಿಚಾರಕರಿಗೆ, ಅತ್ಯುತ್ತಮ ಚುನಾವಣಾ ಶಿರಸ್ತೇದಾರರು, ಡೇಟಾ ಎಂಟ್ರಿ ಆಪರೇಟರ್ಗಳು, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು. ಯುವ ಮತದಾರರಿಗೆ ಮತದಾನದ ಗುರುತಿನ ಚೀಟಿ ವಿತರಿಸಲಾಯಿತು.
-
-
25ವೈಡಿಆರ್2 : ಭಾನುವಾರ, ನಗರದ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಅತ್ಯುತ್ತಮ ಬೂತ್ ಮಟ್ಟದ ಬಿಎಲ್ಓ, ಬಿಎಲ್ಓ ಮೇಲ್ವಿಚಾರಕರಿಗೆ, ಅತ್ಯುತ್ತಮ ಚುನಾವಣಾ ಶಿರಸ್ತೇದಾರರು, ಡೇಟಾ ಎಂಟ್ರಿ ಆಪರೇಟರ್ಗಳು, ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.-
25ವೈಡಿಆರ್3 : ಭಾನುವಾರ, ನಗರದ ಪದವಿ ಮಹಾವಿದ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಯುವ ಮತದಾರರಿಗೆ ಮತದಾನದ ಗುರುತಿನ ಚೀಟಿ ವಿತರಿಸಲಾಯಿತು.