ಕನ್ನಡಪ್ರಭ ವಾರ್ತೆ ಸುರಪುರ
ನಗರದ ಗರುಡಾದ್ರಿ ಕಲಾಮಂದಿರದಲ್ಲಿ ಸೋಮವಾರ ಭಾರತ ಚುನಾವಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ, ತಾಲೂಕು ಸ್ವೀಪ್ ಸಮಿತಿ, ನಗರಸಭೆ ಸಹಯೋಗದಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
1950ಗೆ ಕಾಲ್ ಮಾಡಿ ಮತದಾರ ಗುರುತಿನ ಚೀಟಿ, ಹೆಸರಿನ ಕುರಿತು ಪರಿಶೀಲಿಸಬಹುದು. ಚುನಾವಣೆ ಘೋಷಿಸಿದ ದಿನದಿಂದಲೇ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ. ಎಲ್ಲಿಯಾದರೂ ಮತದಾರರನ್ನು ಸೆಳೆಯುವ, ಆಮಿಷ ಒಡ್ಡುವ, ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದರೆ ಕೂಡಲೇ ಅಧಿಕಾರಿಗಳಿಗೆ ಮಾಹಿತಿ ನಿಡಬೇಕು ಎಂದರು.ಮತದಾರರ ಪಟ್ಟಿಯಲ್ಲಿರುವ ಪ್ರತಿಯೊಬ್ಬರು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಹಬ್ಬಗಳಿದ್ದಂತೆ. ಎಲ್ಲ ಮತದಾರರು ಖುಷಿಯಿಂದ ಮತದಾನ ಮಾಡುವುದು ನಮ್ಮೆಲ್ಲರ ಜವಾಬ್ದಾರಿ. ಕಳೆದ ಲೋಕಸಭಾ ಚುನಾವಣೆಯಲ್ಲಿ ಶೇ.70 ಮತ ದಾಖಲಾಗಿದೆ. ಇದು ಪ್ರಜಾಪ್ರಭುತ್ವದ ಸೋಲು ಎಂಬುದಾಗುತ್ತದೆ. ಆದ್ದರಿಂದ ಪ್ರಜಾಪ್ರಭುತ್ವ ಗೆಲ್ಲಿಸಲು ಪ್ರತಿಯೊಬ್ಬರೂ ಮತದಾನದಲ್ಲಿ ಪಾಲ್ಗೊಂಡು ಶೇ.100ರಷ್ಟು ಸಾಧನೆ ಮಾಡಬೇಕು ಎಂದು ಹೇಳಿದರು.
ತಾಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ತಾಲೂಕು ಸ್ವೀಪ್ ಸಮಿತಿ ಅಧ್ಯಕ್ಷ ಬಸವರಾಜ ಸಜ್ಜನ್ ಮಾತನಾಡಿ, ಚುನಾವಣೆಯಲ್ಲಿ ಪ್ರತಿಯೊಬ್ಬರ ಮತವೂ ಅಮೂಲ್ಯ. ಎಲ್ಲರೂ ಚುನಾವಣಾ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ತಮ್ಮ ಕುಟುಂಬಸ್ಥರು, ಗೆಳೆಯರು, ಸಂಬಂಧಿಕರು, ನೆರೆ-ಹೊರೆಯವರಿಗೂ ತಿಳಿಸಿ ಮತದಾನ ಮಾಡುವಂತೆ ಪ್ರೇರೇಪಿಸಬೇಕು. ಯಾವುದೇ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಬೇಕು ಎಂಬುದಾಗಿ ಮತದಾನದ ಮಹತ್ವ ಸಾರಿದರು.
ಕಾರ್ಯಕ್ರಮಕ್ಕೂ ಮುನ್ನ ರಂಗೋಲಿ ಸ್ಪರ್ಧೆ, ಗೋಣಿಚೀಲ ಹಾಗೂ ಚಮಚದಲ್ಲಿ ನಿಂಬು ಇಟ್ಟು ಕೊಂಡು ನಡೆಯುವ ಸ್ಪರ್ಧೆ ಜರುಗಿತು. ವಿವಿಧ ಸ್ಪರ್ಧಾ ವಿಜೇತರಾದವರಿಗೆ ಪ್ರಶಸ್ತಿ ವಿತರಿಸಲಾಯಿತು.