ಮತದಾನ ಮಾಡಿ, ಸುಭದ್ರ ರಾಷ್ಟ್ರ ನಿರ್ಮಾಣಕ್ಕೆ ಕೈ ಜೋಡಿಸಿ

KannadaprabhaNewsNetwork |  
Published : Apr 01, 2024, 12:46 AM IST
ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ರೋಟರಿ ಕ್ಲಬ್ ವತಿಯಿಂದ ಸ್ವಚ್ಛ ಭಾರತ, ಮಿತ ನೀರು ಬಳಕೆ ಹಾಗೂ ಮತದಾರ ಪ್ರತಿಜ್ಞಾವಿಧಿ ಸ್ವೀಕರಿಸಲಾಯಿತು. | Kannada Prabha

ಸಾರಾಂಶ

ವಿಜಯಪುರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ಕೈ ಜೋಡಿಸಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಕರೆ ನೀಡಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ಕಡ್ಡಾಯವಾಗಿ ಮತ ಚಲಾಯಿಸುವ ಮೂಲಕ ಸುಭದ್ರ ರಾಷ್ಟ್ರ ನಿರ್ಮಾಣದಲ್ಲಿ ಕೈ ಜೋಡಿಸಬೇಕು ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಕರೆ ನೀಡಿದರು.

ನಗರದ ಜಿಲ್ಲಾಸ್ಪತ್ರೆಯಲ್ಲಿ ರೋಟರಿ ಕ್ಲಬ್ ವತಿಯಿಂದ ಸ್ವಚ್ಛ ಭಾರತ, ಮಿತ ನೀರು ಬಳಕೆ ಹಾಗೂ ಮತದಾರ ಪ್ರತಿಜ್ಞಾವಿಧಿ ಸ್ವಿಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮನುಷ್ಯನ ಉತ್ತಮ ಆರೋಗ್ಯ ಕಾಪಾಡುವಲ್ಲಿ ಸ್ವಚ್ಛತೆ ಅತೀ ಮುಖ್ಯವಾಗಿರುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಸ್ವಚ್ಛತೆಗೆ ಆದ್ಯತೆ ನೀಡಬೇಕು. ಅದರಂತೆ ಜಗತ್ತಿನ ಅತ್ಯಅಮೂಲ್ಯವಾದ ವಸ್ತು ನೀರು. ಇದರ ಸದುಪಯೋಗವಾಗಬೇಕು. ನೀರು ಎಲ್ಲೆಂದರಲ್ಲಿ ಚೆಲ್ಲದೇ ಅವಶ್ಯಕತೆಯನುಸಾರವಾಗಿ ಮಿತವಾಗಿ ನೀರನ್ನು ಬಳಸಬೇಕು ಎಂದರು.

ರೋಟರಿ ಕ್ಲಬ್ ಅಧ್ಯಕ್ಷ ಮಲ್ಲ್ಲಿರ್ಕಾಜುನ ಕಲಾದಗಿ ಮಾತನಾಡಿ, ರೋಟರಿ ಕ್ಲಬ್ ಸಾಮಾಜಿಕ ಕ್ಷೇತ್ರಗಳಲ್ಲಿ ನೀಡುತ್ತಿರುವ ಸೇವೆಗಳ ಕುರಿತು ವಿವರಿಸಿ, ಇನ್ನು ಮುಂದೆ ಪ್ರತಿ ತಿಂಗಳು ಜಿಲ್ಲಾಸ್ಪತ್ರೆಯ ಸಹಯೋಗದಲ್ಲಿ ಆವರಣ ಸ್ವಚ್ಛಗೊಳಿಸುವುದು ಸೇರಿದಂತೆ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಮತದಾನ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಚಾರ್ಡರ್ ಅಧ್ಯಕ್ಷರಾದ ಡಿ.ಎಸ್. ಪಾಟೀಲ, ಡಾ. ಚಂದು ರಾಠೋಡ, ಡಾ. ಅಶೋಕ ವಾಲಿ, ಗುರುಶಾಂತ ನಿಡೋಣಿ, ದಿಲೀಪ ಪೋಜಾರಿ, ಶ್ರೀಕಾಂತ ಶಿರಡೋಣ, ದಿಲೀಪ ತಾಳಿಕೋಟಿ, ವಿಠ್ಠಲ ತೇಲಿ, ಉದಯ ಯಾಳವಾರ, ಪ್ರಸಾದ ನಾಯ್ಡು, ಶೈಲೇಶ ಸಾವಳಗಿ, ಬಸವರಾಜ ಸೊನ್ನದ, ರವಿ ಅಂಗಡಿ, ರಾಜು ಬಿಜ್ಜರಗಿ, ರಾಜ ಶಾಹಾ, ಡಾ. ಹಂಪ್ಪನಗೌಡ ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!