ಮತಗಳ್ಳತನದಿಂದ ದೇಶದ ಪ್ರಜಾಪ್ರಭುತ್ವ ಬುಡಮೇಲು

KannadaprabhaNewsNetwork |  
Published : Oct 29, 2025, 01:30 AM IST
೨೮ ವೈಎಲ್‌ಬಿ ೦೩ಯಲಬುರ್ಗಾದ ಹಮ್ಮಿಕೊಂಡಿದ್ದ ಮತಗಳ್ಳತನ ನಿಲ್ಲಿಸಿ ಅಭಿಯಾನ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಮಯೂರ ಜಯಕುಮಾರ್ ಮಾತನಾಡಿದರು. | Kannada Prabha

ಸಾರಾಂಶ

ಲೋಪಗಳ ಬಗ್ಗೆ ಆರು ತಿಂಗಳೊಳಗೆ ದೂರು ನೀಡಬೇಕು ಎಂದು ಚುನಾವಣಾ ಆಯೋಗ ಹೇಳುತ್ತದೆ. ಆದರೆ ಸಂಗ್ರಹವಾದ ಮಾಹಿತಿ ಕೇಳಿದರೆ ಅದು ಡಿಲಿಟ್ ಆಗಿದೆ ಎಂದು ಆಯೋಗ ಹೇಳುತ್ತಿದೆ

ಯಲಬುರ್ಗಾ: ಬಿಜೆಪಿ ಮತಗಳ್ಳತನದ ಮೂಲಕ ದೇಶದ ಪ್ರಜಾಪ್ರಭುತ್ವದ ವ್ಯವಸ್ಥೆಯನ್ನೇ ಬುಡಮೇಲು ಮಾಡುತ್ತಿದೆ. ಈ ಅಕ್ರಮದ ಬಗ್ಗೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿ ಮತಗಟ್ಟೆಯಲ್ಲಿ ಜನ ಜಾಗೃತಿ ಮೂಡಿಸಬೇಕು ಎಂದು ಎಐಸಿಸಿ ರಾಷ್ಟ್ರೀಯ ಕಾರ್ಯದರ್ಶಿ ಮಯೂರ ಜಯಕುಮಾರ್ ಹೇಳಿದರು.

ಪಟ್ಟಣದ ಕನಕದಾಸ ವೃತ್ತದಿಂದ ಮತಗಳ್ಳತನ ನಿಲ್ಲಿಸಿ ಅಭಿಯಾನ ಜಾಗೃತಿ ಜಾಥಾ ಆರಂಭವಾಗಿ ಬಯಲು ರಂಗಮಂದಿರದಲ್ಲಿ ಜಮಾಗೊಂಡ ನಂತರ ಮತಗಳ್ಳತನ ನಿಲ್ಲಿಸಿ ಸಹಿ ಸಂಗ್ರಹ ಅಭಿಯಾನ ಹಾಗೂ ಜನಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರ ಚುನಾವಣಾ ಆಯೋಗ ಬಿಜೆಪಿ ಪರವಾಗಿದೆ. ಆ ಕಾರಣದಿಂದಲೇ 2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಪಡೆಯಲು ಸಾಧ್ಯವಾಗಿದೆ ಎಂದರು.

ಲೋಪಗಳ ಬಗ್ಗೆ ಆರು ತಿಂಗಳೊಳಗೆ ದೂರು ನೀಡಬೇಕು ಎಂದು ಚುನಾವಣಾ ಆಯೋಗ ಹೇಳುತ್ತದೆ. ಆದರೆ ಸಂಗ್ರಹವಾದ ಮಾಹಿತಿ ಕೇಳಿದರೆ ಅದು ಡಿಲಿಟ್ ಆಗಿದೆ ಎಂದು ಆಯೋಗ ಹೇಳುತ್ತಿದೆ ಎಂದು ಆರೋಪಿಸಿದರು.

ಬಿಹಾರ, ಹರಿಯಾಣದಲ್ಲಿ ಮತ ತೆಗೆದು ಹಾಕಲಾಗಿದೆ. ಆ ಜಾಗಕ್ಕೆ ಬಿಜೆಪಿ ಪರ ಇರುವ ಮತದಾರರನ್ನು ಸೇರಿಸಲಾಗಿದೆ. ಇದರಿಂದ ಕೆಲವು ಕಡೆ ಕಾಂಗ್ರೆಸ್ ಅಭ್ಯರ್ಥಿಗಳು ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲಬೇಕಿದ್ದರೂ ಅಲ್ಲಿ ಅಂತರ ಒಂದೂವರೆ ಲಕ್ಷಕ್ಕೆ ಇಳಿದಿದೆ. ರಾಜ್ಯ ಚುನಾವಣಾ ಆಯೋಗವೂ ಕೇಂದ್ರ ಚುನಾವಣಾ ಅಯೋಗದ ಸೂಚನೆಯಂತೆ ಕಾರ್ಯ ನಿರ್ವಹಿಸುತ್ತಿದೆ. ಇಲ್ಲಿನ ಅಧಿಕಾರಿಗಳನ್ನು ಕೇಂದ್ರ ಚುನಾವಣಾ ಆಯೋಗ ತನ್ನ ಹಿಡಿತದಲ್ಲಿಟ್ಟುಕೊಂಡಿದೆ ಎಂದು ಆರೋಪಿಸಿದರು.

ಜಿಲ್ಲಾ ಕಾಂಗ್ರೆಸ್ ಯುವ ಮುಖಂಡ ಮೈನೂದ್ದಿನ್ ಮುಲ್ಲಾ, ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಯಂಕಣ್ಣ ಯರಾಶಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆರಿಬಸಪ್ಪ ನಿಡಗುಂದಿ, ಮಹಿಳಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಸಾವಿತ್ರಿ ಗೊಲ್ಲರ ಮಾತನಾಡಿದರು.

ಈ ಸಂದರ್ಭ ಕೆಪಿಸಿಸಿ ಸದಸ್ಯೆ ಗಿರಿಜಾ ರೇವಣಪ್ಪ ಸಂಗಟಿ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಕೃಷ್ಣ ಇಟ್ಟಂಗಿ, ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಶ್ರೀನಿವಾಸ ರೆಡ್ಡಿ, ತಾಲೂಕಾಧ್ಯಕ್ಷ ಸುಧೀರ್ ಕೊರ್ಲಹಳ್ಳಿ, ಹನಮಂತಗೌಡ ಪಾಟೀಲ್, ಡಾ. ಶಿವನಗೌಡ ದಾನರಡ್ಡಿ, ಸಂಗಣ್ಣ ತೆಂಗಿನಕಾಯಿ, ಮಹಾಂತೇಶ ಗಾಣೀಗೇರ ಹಾಗೂ ಪಕ್ಷದ ಕಾರ್ಯಕರ್ತರು ಸೇರಿದಂತೆ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಉರ್ದು ಮುಸ್ಲಿಂರಿಗಷ್ಟೇ ಸೀಮಿತವಲ್ಲ ಜನಸಾಮಾನ್ಯರ ಭಾಷೆ
2 ಕೋಟಿ ವಂಚನೆ ಪ್ರಕರಣ: ಶರವಣ ಅಂದರ್