ಕನ್ನಡಪ್ರಭ ವಾರ್ತೆ ಮದ್ದೂರು
ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕದಲೂರು ಗ್ರಾಮದ ಶಾಸಕ ಕೆ.ಎಂ.ಉದಯ್ ನಿವಾಸದಲ್ಲಿ ಸ್ಟಾಪ್ ವೋಟ್ ಚೂರಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿ, ಮತಪೆಟ್ಟಿಗೆಯಲ್ಲಿ ನಿಜವಾದ ಮತದಾರರ ಹೆಸರನ್ನು ತೆಗೆದು ಹಾಕುವ ಮೂಲಕ ನಕಲಿ ಹೆಸರನ್ನು ಸೇರಿಸಲು ಹುನ್ನಾರ ನಡೆಯುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಮತಗಳ್ಳತನದ ವಿರುದ್ಧ ಕಾಂಗ್ರೆಸ್ ಈಗಾಗಲೇ ಹೋರಾಟ ಆರಂಭಿಸಿದೆ. ಪ್ರತಿ ಬೂತ್ ಮಟ್ಟದಲ್ಲಿ ಪಕ್ಷದ ಕಾರ್ಯಕರ್ತರು ತೀವ್ರ ಕಟ್ಟೆಚರ ವಹಿಸಬೇಕು. ಜೊತೆಗೆ ಅಭಿಯಾನದ ಜನರಲ್ಲಿ ಮತದಾನದ ಹಕ್ಕಿನ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ನೀಡಿದರು.ಬೂತ್ ಮಟ್ಟದಲ್ಲಿ ಪ್ರತಿಯೊಬ್ಬ ಮತದಾರರು ಯಾವುದೇ ರೀತಿಯ ಅಕ್ರಮಗಳು ಕಂಡು ಬಂದರೆ ಚುನಾವಣಾ ಆಯೋಗ ಮತ್ತು ಪಕ್ಷದ ಮುಖಂಡರಿಗೆ ಮಾಹಿತಿ ನೀಡಬೇಕು ಎಂದರು.
ಮದ್ದೂರು:
ವಿಧಾನ ಸಭಾ ಕ್ಷೇತ್ರದಲ್ಲಿ ಕಾರ್ಮಿಕ ಭವನ ನಿರ್ಮಾಣ ಮತ್ತು ವಸತಿ ಶಾಲೆ ನಿರ್ಮಾಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು.ಶಾಸಕರಿಂದ ಮನವಿ ಸ್ವೀಕರಿಸಿ ಕಾರ್ಮಿಕ ಭವನ ನಿರ್ಮಾಣ, ಹಾಲಿಇರುವ ಇಎಸ್ಐ ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವುದು ಹಾಗೂ ಕಾರ್ಮಿಕ ಮಕ್ಕಳಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲ ವಾಗುವಂತೆ ವಸತಿ ಶಾಲೆ ಮಂಜೂರು ಮಾಡುವಂತೆ ಮನವಿ ಸಲ್ಲಿಸಿದರು.
ಶಾಸಕ ಉದಯ್ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವ ಲಾಡ್ ಎಲ್ಲಾ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸಲು ಯಾವುದೇ ಸರ್ಕಾರ ಅಥವಾ ಸಚಿವರಿಂದ ಸಾಧ್ಯವಿಲ್ಲ. ವಸತಿ ಶಾಲೆ ತೆರೆಯಲು ಅಗತ್ಯ ನಿವೇಶನವನ್ನು ಗೊತ್ತುಪಡಿಸಿದರೆ ಅನುದಾನ ಬಿಡುಗಡೆ ಮಾಡಲು ಕ್ರಮ ಕೈಗೊಳ್ಳುವುದಾಗಿ ಸಚಿವರು ಆಶ್ವಾಸನೆ ನೀಡಿದರು.