ಕನಕಪುರ: ನಗರದ ಹಲಸಿನಮರದೊಡ್ಡಿ ವ್ಯಾಪ್ತಿಯ ವಾರ್ಡ್ ನಂ 15ರ ನಗರಸಭಾ ಸದಸ್ಯೆ ಸರಳಾ ಶ್ರೀನಿವಾಸ್ ನೇತೃತ್ವದಲ್ಲಿ ಸಂಸದ ಡಿ.ಕೆ.ಸುರೇಶ್ ಪರ ಪಕ್ಷದ ಕಾರ್ಯಕರ್ತರು ಮತಯಾಚಿಸಿದರು.
ಕಾಂಗ್ರೆಸ್ ಮುಖಂಡ ಶ್ರೀನಿವಾಸ್ ಮಾತನಾಡಿ, ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮತ್ತೊಮ್ಮೆ ಡಿ.ಕೆ.ಸುರೇಶ್ ಅವರು ಸಂಸದರಾಗಿ ಆಯ್ಕಯಾಗಬೇಕು. ಆ ನಿಟ್ಟಿನಲ್ಲಿ ಈ ಭಾಗದ ಮುಖಂಡರು ಪ್ರತಿ ಮನೆ ಮನೆ ಗಳಿಗೆ ತೆರಳಿ ಮತಯಾಚನೆ ಮಾಡಿ ಡಿ.ಕೆ. ಸುರೇಶ್ ಅವರು ಅತಿ ಹೆಚ್ಚು ಮತಗಳ ಅಂತರದಿಂದ ಆಯ್ಕೆ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಅದನ್ನು ಅರಿತು ಕೆಲಸ ಮಾಡೋಣ ಎಂದರು.
ಸಂಸದ ಡಿ.ಕೆ.ಸುರೇಶ್ ಅವರು ಕಳೆದ 10 ವರ್ಷದ ಅವಧಿಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ. ಸ್ಥಳೀಯವಾಗಿ ಜನರಿಗೆ ತಮ್ಮ ಸಮಸ್ಯೆಗಳನ್ನ ಬಗೆ ಹರಿಸಿಕೊಳ್ಳಲು ಸಿಗುವ ಏಕೈಕ ಅಭ್ಯರ್ಥಿ ಎಂದರೆ ಅದು ಡಿ.ಕೆ.ಸುರೇಶ್ ಅವರು ಮಾತ್ರ ಈ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರೇ ಅತಿ ಹೆಚ್ಚು ಮತಗಳಿಂದ ಆಯ್ಕೆಯಾಗುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು.ಯುವ ಕಾಂಗ್ರೆಸ್ ಹರೀಶ್, ಮಂಜುನಾಥ್, ನಂದೀಶ್ ಮಹದೇವ್, ರಮೇಶ್, ಶ್ವೇತಾ, ಕಾರ್ಯಕರ್ತರು ಉಪಸ್ಥಿತರಿದ್ದರು. ಕೆ ಕೆ ಪಿ ಸುದ್ದಿ 02:ಕನಕಪುರದಲ್ಲಿ ಸಂಸದ ಡಿ.ಕೆ.ಸುರೇಶ್ ಪರ ನಗರಸಭಾ ಸದಸ್ಯೆ ಸರಳಾ ಶ್ರೀನಿವಾಸ್ ನೇತೃತ್ವದಲ್ಲಿ ಮನೆ ಮನೆಗೆ ತೆರಳಿ ಮತಯಾಚಿಸಿದರು.