ಕನ್ನಡ ಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಮತದಾನ ಎಲ್ಲರ ಹಕ್ಕು
ಮತದಾನ ಮಾಡುವುದು ನಮ್ಮ ನಿಮ್ಮೆಲ್ಲರ ಹಕ್ಕು. ಯಾರೂ ಸಹ ಮತದಾನದಿಂದ ವಂಚಿತರಾಗಬಾರದು. ತಪ್ಪದೆ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು.ಹದಿನೆಂಟು ವರ್ಷ ಮೇಲ್ಪಟ್ಟ ಎಲ್ಲ ವರ್ಗದವರು ಕಡ್ಡಾಯವಾಗಿ ತಮ್ಮ ಮತದಾನದ ಹಕ್ಕನ್ನು ಚಲಾಯಿಸಬೇಕು. ಆ ದಿಸೆಯಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವಲ್ಲಿ ಇಂದು ಚಿಕ್ಕಬಳ್ಳಾಪುರ ನಗರದ ಮುಖ್ಯ ರಸ್ತೆಗಳಲ್ಲಿ ಚಿಕ್ಕಬಳ್ಳಾಪುರ ತಾಲ್ಲೂಕು ಸ್ವೀಪ್ ಸಮಿತಿಯು ವಿಶೇಷ ಚೇತನರ ಬೈಕ್ ರ್‍ಯಾಲಿ ಹಾಗೂ ಜಾಥಾದ ಮೂಲಕ ಅರಿವು ಮೂಡಿಸುತ್ತಿರುವುದು ಶ್ಲಾಘನೀಯವಾದುದು ಎಂದು ತಿಳಿಸಿದರು.ಅಭ್ಯರ್ಥಿಗಳ ಹಾಗೂ ರಾಜಕೀಯ ಪಕ್ಷಗಳ ಆಮಿಷಕ್ಕೆ ಒಳಗಾಗದೆ, ನಿರ್ಭೀತಿಯಿಂದ ಮತದಾನ ಮಾಡುವ ಮನೋಬಲವನ್ನು ಮತದಾರರು ಬೆಳೆಸಿಕೊಳ್ಳಬೇಕು. ಮತದಾನ ನಮ್ಮ ಧ್ವನಿ, ನಮ್ಮ ಮತ, ನಮ್ಮ ಕರ್ತವ್ಯ ಎಂಬುದನ್ನು ಅರಿತುಕೊಂಡು ಹಕ್ಕನ್ನು ಚಲಾಯಿಸಿದಾಗ ಶಾಂತಿಯುತ ಚುನಾವಣೆ ಸಾಧ್ಯ ಎಂದು ಹೇಳಿದರು.ಈ ಸಂದರ್ಭದಲ್ಲಿ ಜಿಪಂ ಸಿಇಒ ಪ್ರಕಾಶ್.ಜಿ.ಟಿ.ನಿಟ್ಟಾಲಿ, ಎಸಿ ಡಿ.ಎಚ್.ಅಶ್ವಿನ್, ತಹಸಿಲ್ದಾರ್ ಅನಿಲ್, ಪೌರಾಯುಕ್ತ ಎ.ಎಸ್.ಮಂಜುನಾಥ್, ತಾಲ್ಲೂಕು ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿ ಎಲ್.ಸಂದೀಪ್, ವಿಶೇಷ ಚೇತನರು, ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಸಿಬ್ಬಂದಿ, ನಗರಸಭೆ ಸಿಬ್ಬಂದಿ, ತ್ತಿತರರು ಇದ್ದರು.