ಆಸೆ ಆಮಿಷಗಳಿಗೆ ಒಳಗಾಗದೆ ಮತದಾನ ಮಾಡಿ

KannadaprabhaNewsNetwork | Published : Apr 6, 2024 12:56 AM

ಸಾರಾಂಶ

ಚನ್ನಪಟ್ಟಣ: ಮತದಾನ ಪ್ರತಿ ಭಾರತೀಯ ಪ್ರಜೆಯ ಹಕ್ಕು, ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಭವಿಷ್ಯವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ತಪ್ಪದೆ ಮತದಾನ ಮಾಡಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ತಿಳಿಸಿದರು.

ಚನ್ನಪಟ್ಟಣ: ಮತದಾನ ಪ್ರತಿ ಭಾರತೀಯ ಪ್ರಜೆಯ ಹಕ್ಕು, ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೆ ಭವಿಷ್ಯವನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ತಪ್ಪದೆ ಮತದಾನ ಮಾಡಿ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೋಡ್ಕೆ ತಿಳಿಸಿದರು.

ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆರ ಮತದಾನ ಜಾಗೃತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸ್ವ-ಸಹಾಯ ಮಹಿಳೆಯರಿಂದ ರಂಗೋಲಿ ಸ್ಪರ್ಧೆ, ಜಾಥಾ ಹಾಗೂ ಬೀದಿ ನಾಟಕಕ್ಕೆ ಚಾಲನೆ ನೀಡಿ ಮಾತನಾಡಿದರು.

ಹಿರಿಯರಿಗೆ, ಮಹಿಳೆಯರಿಗೆ, ವಿಶೇಷ ಚೇತನರಿಗೆ ಮತಗಟ್ಟೆಗಳಲ್ಲಿ ವಿಶೇಷ ಸೌಲಭ್ಯಗಳನ್ನು ನೀಡಿದೆ. ಯಾರು ಮತದಾನದಿಂದ ದೂರ ಉಳಿಯದೆ, ನಿಮ್ಮ ಹಕ್ಕನ್ನು ಚಲಾಯಿಸುವಂತೆ ಕರೆ ನೀಡಿದರು.

ತಾಲೂಕು ಕಾರ್ಯನಿರ್ವಾಹಕ ಅಧಿಕಾರಿ ಬಿ.ಕೆ.ಮನು ಮಾತನಾಡಿ, ಚನ್ನಪಟ್ಟಣ ತಾಲೂಕಿನ ವ್ಯಾಪ್ತಿಯ ಆಸ್ಪತ್ರೆ, ಬಸ್ ನಿಲ್ದಾಣ ಸೇರಿದಂತೆ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮತ ಜಾಗೃತಿ ಕುರಿತು ಬೀದಿ ನಾಟಕ, ಸಂಗೀತ ಇತರೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಜಾಗೃತಿ ಮೂಡಿಸುತ್ತಿದ್ದೇವೆ. ಸಾರ್ವಜನಿಕರು ಯಾವುದೇ ಆಮಿಷಗಳಿಗೆ ಒಳಗಾಗದೆ ಶೇ.100ರಷ್ಟು ಮತದಾನ ಆಗಬೇಕು ಎಂಬುದಾಗಿದೆ. ಎಲ್ಲರು ತಪ್ಪದೆ ಹತ್ತಿರದ ಮತಗಟ್ಟೆಗಳಿಗೆ ಹೋಗಿ ಮತ ಚಲಾಯಿಸಿ ಎಂದರು.

ಈ ಸಂದರ್ಭದಲ್ಲಿ ತಹಸೀಲ್ದಾರ್ ನರಸಿಂಹ ಮೂರ್ತಿ, ನಗರಸಭೆ ಆಯುಕ್ತರಾದ ಪುಟ್ಟಸ್ವಾಮಿ, ತಾಪಂ ಸಹಾಯಕ ನಿರ್ದೇಶಕರಾದ ಸಿದ್ದರಾಜು, ಸಂಜೀವಿನಿ ಒಕ್ಕೂಟ ವಿಭಾಗದ ಸಿಬ್ಬದಿಗಳು, ಮಹಿಳೆಯರು, ತಾಲೂಕು ಪಂಚಾಯಿತಿ ಸಿಬ್ಬಂದಿಗಳು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ನಗರಸಭೆ ಸಿಬ್ಬಂದಿ ಹಾಜರಿದ್ದರು.5ಕೆಆರ್ ಎಂಎನ್ 4,5.ಜೆಪಿಜಿ

4.ಚನ್ನಪಟ್ಟಣ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯ ಮತದಾನ ಜಾಗೃತಿ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಸ್ವ-ಸಹಾಯ ಮಹಿಳೆಯರಿಂದ ರಂಗೋಲಿ ಸ್ಪರ್ಧೆ, ಜಾಥ ಹಾಗೂ ಬೀದಿ ನಾಟಕಕ್ಕೆ ಚಾಲನೆ ನೀಡಲಾಯಿತು.

(ಪ್ಯಾನಲ್‌ ಫೋಟೋ ಕ್ಯಾಪ್ಷನ್‌)

ಚನ್ನಪಟ್ಟಣ ತಾಲೂಕು ಸ್ವೀಪ್ ಸಮಿತಿ ವತಿಯಿಂದ ಲೋಕಸಭಾ ಚುನಾವಣೆಯ ಮತದಾನ ಜಾಗೃತಿ ಅಂಗವಾಗಿ ಬೀದಿ ನಾಟಕ ಪ್ರದರ್ಶನಗೊಂಡಿತು. ಸಿಇಒ ದಿಗ್ವಿಜಯ್ ಬೋಡ್ಕೆ, ತಹಸೀಲ್ದಾರ್ ನರಸಿಂಹ ಮೂರ್ತಿ, ನಗರಸಭೆ ಆಯುಕ್ತರಾದ ಪುಟ್ಟಸ್ವಾಮಿ, ತಾಪಂ ಸಹಾಯಕ ನಿರ್ದೇಶಕರಾದ ಸಿದ್ದರಾಜು ಇತರರಿದ್ದರು.

Share this article