ಕನ್ನಡಪ್ರಭ ವಾರ್ತೆ ಮಳವಳ್ಳಿ
ಪಟ್ಟಣದ ತಾಪಂ ಸಭಾಂಗಣದಲ್ಲಿ ಭಾನುವಾರ ಆಯೋಜಿಸಿದ ರಾಷ್ಟ್ರೀಯ ಯುವ ಹಾಗೂ ರಾಷ್ಟ್ರೀಯ ಮತದಾರರ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ಮತ ಚಲಾಯಿಸುವುದು ಪ್ರತಿಯೊಬ್ಬರಿಗೂ ನೀಡಿರುವ ಸಂವಿಧಾನದ ಹಕ್ಕು. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಮತದಾನದ ಮೂಲಕ ನಾಯಕನನ್ನು ಆಯ್ಕೆ ಮಾಡಬೇಕು ಎಂದರು.
ರಾಷ್ಟ್ರದ ಅಭಿವೃದ್ಧಿಗೆ ಉತ್ತಮರನ್ನು ಆಯ್ಕೆ ಮಾಡಬೇಕೆಂಬ ಆಶಯದೊಂದಿಗೆ ಮತದಾನದ ಪ್ರಕ್ರಿಯೆ ನಡೆಸಲಾಗುತ್ತಿದೆ. ಪ್ರಜೆಗಳಾದ ಯುವ ಸಮೂಹ ಮತದಾನದಲ್ಲಿ ಕಡ್ಡಾಯವಾಗಿ ಭಾಗವಹಿಸಿ ಮೂಲಕ ಸುಭದ್ರ ಹಾಗೂ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.ತಹಸೀಲ್ದಾರ್ ಎಸ್.ವಿ.ಲೋಕೇಶ್ ಮಾತನಾಡಿ, ನನ್ನ ಭಾರತ ನನ್ನ ಮತ ಎಂಬ ಧ್ಯೇಯವಾಕ್ಯದೊಂದಿಗೆ ರಾಷ್ಟ್ರೀಯ ಮತದಾರರ ಆಚರಿಸಲಾಗುತ್ತಿದೆ. 18 ವರ್ಷ ತುಂಬಿದ ವಯಸ್ಕರು ಮತದಾನ ಚೀಟಿ ಪಡೆಯಲು ನೋಂದಣಿ ಮಾಡಿಸಿಕೊಂಡು ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂದರು.
ಕಾರ್ಯಕ್ರಮದಲ್ಲಿ ಡಿವೈಎಸ್ಪಿ ಎಸ್.ಬಿ.ಯಶವಂತ ಕುಮಾರ್, ತಾಪಂ ಇಒ ಎಚ್.ಜಿ.ಶ್ರೀನಿವಾಸ್, ಪುರಸಭೆ ಮುಖ್ಯಾಧಿಕಾರಿ ಎಂ.ಸಿ.ನಾಗರತ್ನ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಂಜಮಣಿ, ಕ್ಷೇತ್ರ ಸಮನ್ವಯಾಧಿಕಾರಿ ಎಂ.ಕೆ.ಶ್ರೀನಿವಾಸ್, ಹೆಚ್ಚುವರಿ ಸರ್ಕಾರಿ ವಕೀಲ ಶ್ರೀಕಂಠಸ್ವಾಮಿ ಸೇರಿದಂತೆ ಇತರರು ಇದ್ದರು.ಮತದಾರ ದಿನ: ಮಹಿಳೆಯರಿಗೆ ಪ್ರತಿಜ್ಞಾ ವಿಧಿ ಬೋಧನೆಮಂಡ್ಯ: ಮಂಡ್ಯ ವೈದ್ಯಕೀಯ ವಿಷನಗಳ ಸಂಸ್ಥೆಯ ಸ್ತ್ರೀರೋಗ- ಪ್ರಸೂತಿ ವಿಭಾಗದ ಮಮತೆಯ ಮಡಿಲು ಅಂಗಳದಲ್ಲಿ ಪರಿಸರ ರೂರಲ್ ಡೆವಲಪ್ ಮೆಂಟ್ ಸೊಸೈಟಿಯಿಂದ 16ನೇ ರಾಷ್ಟ್ರೀಯ ಮತದಾರ ದಿನದ ನಿಮಿತ್ತ ಮಹಿಳೆಯರಿಗೆ ಪ್ರತಿಜ್ಞಾ ವಿಧಿ ಬೋಧಿಸಲಾಯಿತು.
ಸಮಾಜ ಸುಧಾರಣೆಗೆ-ಪ್ರಜಾಪ್ರಭುತ್ವದ ಉಳಿವಿಗೆ ಮಹಿಳೆಯರ ಕಡ್ಡಾಯವಾಗಿ ಮತದಾನ ಮಾಡಬೇಕು. ಮಹಿಳೆಯರಿಂದಲೇ ಪರಿವರ್ತನ ಸಾಧ್ಯವಿದೆ ಎಂದು ಪರಿಸರ ಸಂಸ್ಥೆ ಅಧ್ಯಕ್ಷ ಮಂಗಲ ಎಂ.ಯೋಗೇಶ್ ತಿಳಿಸಿದರು. ನೂರಾರು ಮಹಿಳೆಯರಿಗೆ ಮತದಾರರ ಪ್ರತಿಜ್ಞಾ ವಿಧಿನ್ನು ಬೋಧಿಸಲಾಯಿತು. ಈ ವೇಳೆ ಪರಿಸರ ಸಂಸ್ಥೆ ಸಂಚಾಲಕ ಯೋಗೇಶ್ ಬೊಪ್ಪ ಸಮುದ್ರ, ಶ್ರೀಕಾಂತ್ ಉಪಸ್ಥಿರಿದರು.