ಕನ್ನಡಪ್ರಭ ವಾರ್ತೆ ಮುದ್ದೇಬಿಹಾಳ
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಚುನಾವಣಾ ಆಯೋಗ, ತಾಲೂಕು ಆಡಳಿತ ಮತ್ತು ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ನಡೆದ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಮತದಾನ ಕೇವಲ ಹಕ್ಕು ಮಾತ್ರವಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಕೆಲವರು ನನ್ನ ಮತದಿಂದ ಏನು ಬದಲಾವಣೆ ಆಗುತ್ತದೆ ಎಂದು ನಿರ್ಲಕ್ಷ್ಯ ತೋರಿಸುವುದು ತಪ್ಪು. ಒಂದು ಮತವೂ ಫಲಿತಾಂಶವನ್ನು ಬದಲಿಸುವ ಶಕ್ತಿ ಹೊಂದಿದೆ ಎನ್ನುವ ಸತ್ಯವನ್ನು ಪ್ರತಿಯೊಬ್ಬರು ಅರಿಯಬೇಕು. ಚುನಾವಣೆ ಸಮಯದಲ್ಲಿ ಹಣ, ಉಡುಗೊರೆ, ಮಧ್ಯದಂತಹ ಪ್ರಲೋಭೆಗಳಿಗೆ ಒಳಗಾಗದೇ, ಯಾರ ಒತ್ತಡಕ್ಕೂ ಮಣಿಯದೇ ಧೈರ್ಯದಿಂದ ಮತ ಚಲಾಯಿಸಿ ಸುಭದ್ರ ರಾಷ್ಟ್ರ ನಿರ್ಮಿಸುವಲ್ಲಿ ಶ್ರಮಿಸಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ತಹಸೀಲ್ದಾರ್ ಕೀರ್ತಿ ಚಾಲಕ ಮಾತನಾಡಿ, 18 ವರ್ಷ ತುಂಬಿದ ಪ್ರತಿಯೊಬ್ಬರೂ ತಮ್ಮ ಹೆಸರನ್ನು ಮತದಾರರ ಪಟ್ಟಿಯಲ್ಲಿ ಸೇರಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಹೆಸರು ತಿದ್ದುಪಡಿ, ಸೇರ್ಪಡೆ, ವಿಳಾಸ ಬದಲಾವಣೆ ಸೇರಿದಂತೆ ಎಲ್ಲ ಸೇವೆಗಳು ನಿಯಮಿತವಾಗಿ ಲಭ್ಯವಿದ್ದು ಯಾವುದೇ ತಪ್ಪುಗಳಿದ್ದರೆ ತಕ್ಷಣ ಸರಿಪಡಿಸಿಕೊಳ್ಳಬೇಕೆಂದರು.ಅತಿಥಿಯಾಗಿದ್ದ ತಾಪಂ ಇಒ ವೆಂಕಟೇಶ ವಂದಾಲ ಮಾತನಾಡಿ, ಪ್ರತಿಯೊಬ್ಬ ಪ್ರಜೆ ತನ್ನ ಪಾತ್ರ ಸರಿಯಾಗಿ ನಿಭಾಯಿಸಿದಲ್ಲಿ ಮಾತ್ರ ಶಕ್ತಿಶಾಲಿ ಪ್ರಜಾಪ್ರಭುತ್ವ ನಿರ್ಮಾಣ ಸಾಧ್ಯ ಎಂದರು. ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಮಾತನಾಡಿದರು. ನ್ಯಾಯವಾದಿ ಎನ್.ಬಿ.ಮುದ್ನಾಳ ಉಪನ್ಯಾಸ ನೀಡಿದರು. ಮತದಾನ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ನ್ಯಾ.ಸಂಘದ ಪ್ರಧಾನ ಕಾರ್ಯದರ್ಶಿ ಪಿ.ಬಿ.ಗೌಡರ, ದೈಹಿಕ ಶಿಕ್ಷಣಾಧಿಕಾರಿ ಎ.ಜೆ.ದಫೇದಾರ, ನ್ಯಾಯವಾದಿ ಚೇತನ ಶಿವಶಿಂಪಿ, ಉಪನ್ಯಾಸಕರಾದ ಎಸ್.ಎಲ್.ಗುರವ, ಎಸ್.ಕೆ.ಮಾಳಗೊಂಡ, ಬಿ.ಐ. ಬಡಿಗೇರ, ತಾಲೂಕು ಕಾನೂನು ಸೇವಾ ಸಮಿತಿ ಆಡಳಿತ ಸಹಾಯಕ ಅರವಿಂದ ಕುಂಬಾರ, ದಲಾಯತ್ ಮಹಾಂತೇಶ ಹಚರೆಡ್ಡಿ, ತಹಸೀಲ್ದಾರ್ ಕಚೇರಿ ಸಿಬ್ಬಂದಿ ಎಸ್.ಎಂ.ಸಜ್ಜನ, ಮಹೇಶ ಪಾಟೀಲ, ಡಿ.ಎಸ್.ತಳವಾರ, ರವಿ ಮಡಿವಾಳರ, ಕಾರ್ತಿಕ ಪತ್ತಾರ, ಅಜೀತ ಹೂಗಾರ, ಉಮರಫಾಕುಕ ವಾಲೀಕಾರ ಇತರರಿದ್ದರು. ವಿದ್ಯಾರ್ಥಿನಿ ಸಾಕ್ಷಿ ಕಂಠಿಮಠ ಪ್ರಾರ್ಥಿಸಿ, ಉಪನ್ಯಾಸಕ ಎಸ್.ಜಿ.ಲೊಟಗೇರಿ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.