ಮಂಗಳೂರು ವಿ.ವಿ.ಯಲ್ಲಿ ಮತದಾರರ ಜಾಗೃತಿ ಅಭಿಯಾನ

KannadaprabhaNewsNetwork |  
Published : Apr 26, 2024, 12:50 AM IST
ಮಂಗಳೂರು ವಿವಿಯಲ್ಲಿ ಮತದಾರರ ಜಾಗೃತಿ ಅಭಿಯಾನ ನಡೆಯಿತು. | Kannada Prabha

ಸಾರಾಂಶ

ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ ಅಭಿಯಾನದಲ್ಲಿ ಪಾಲ್ಗೊಂಡರು.

ಕನ್ನಡಪ್ರಭ ವಾರ್ತೆ ಮಂಗಳೂರು

ಮತದಾನ ನಮ್ಮ ದೇಶದ ದೊಡ್ಡ ಹಬ್ಬ. ಇದು ನಮ್ಮ ಕರ್ತವ್ಯವೆಂದು ಅರಿತು ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಬಲಪಡಿಸಲು, ಜಾತಿ, ಮತ, ಧರ್ಮಗಳ ಬೇಧವಿಲ್ಲದೆ ಎಲ್ಲರೂ ಮತ ಚಲಾಯಿಸಬೇಕು ಎಂದು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್. ಧರ್ಮ ಹೇಳಿದ್ದಾರೆ.

ಮಂಗಳಗಂಗೋತ್ರಿಯಲ್ಲಿರುವ ವಿಶ್ವವಿದ್ಯಾನಿಲಯದ ಮಂಗಳಾ ಸಭಾಂಗಣದ ಮುಂಭಾಗ ಹಮ್ಮಿಕೊಂಡಿದ್ದ ಮತದಾರರ ಜಾಗೃತಿ ಅಭಿಯಾನದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಾಗೃತಿ ಅಭಿಯಾನ ಉದ್ಘಾಟಿಸಿ ಮಾತನಾಡಿದ ಕುಲಸಚಿವ ಕೆ. ರಾಜು ಮೊಗವೀರ, ಭಾರತದಲ್ಲಿ ಸುಮಾರು 96.8 ಕೋಟಿ ಅರ್ಹ ಮತದಾರರಿದ್ದಾರೆ. 19.74 ಕೋಟಿ ಯುವ ಮತದಾರರಿದ್ದಾರೆ. ಆದರೆ, ಇವರಲ್ಲಿ ಕೇವಲ 60% ಅಥವಾ 70% ಜನ ಮಾತ್ರ ಮತ ಚಲಾಯಿಸುತ್ತಾರೆ. ಪ್ರಜಾಪ್ರಭುತ್ವವನ್ನು ಬಲಪಡಿಸಲು ನಾವೆಲ್ಲರೂ ಮತ ಚಲಾಯಿಸಬೇಕು ಎಂದು ಕರೆ ನೀಡಿದರು.

ಕುಲಸಚಿವ (ಪರೀಕ್ಷಾಂಗ) ಡಾ.ಎಚ್. ದೇವೆಂದ್ರಪ್ಪ, ಹಣಕಾಸು ಅಧಿಕಾರಿ ಡಾ.ವೈ. ಸಂಗಪ್ಪ, ಕಾಲೇಜು ಅಭಿವೃದ್ಧಿ ಮಂಡಳಿ ನಿರ್ದೇಶಕ ಪ್ರೊ. ಗಣೇಶ್ ಸಂಜೀವ್, ಐಕ್ಯೂಎಸಿ ನಿರ್ದೇಶಕಿ ಪ್ರೊ. ಮೊನಿಕಾ ಸದಾನಂದ, ಪುರುಷರ ವಸತಿ ಗೃಹದ ಮೇಲ್ವಿಚಾರಕ ಡಾ. ಗೋವಿಂದ ರಾಜ್ ಹಾಗೂ ಮಹಿಳಾ ವಸತಿಗೃಹದ ಮೇಲ್ವಿಚಾರಕ ಡಾ. ಚಂದ್ರ ಎಂ ಪಾಲ್ಗೊಂಡಿದ್ದರು.

ಮಂಗಳೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು, ಸಂಶೋಧನಾರ್ಥಿಗಳು, ಬೋಧಕ- ಬೋಧಕೇತರ ಸಿಬ್ಬಂದಿ ಅಭಿಯಾನದಲ್ಲಿ ಪಾಲ್ಗೊಂಡರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಸ್ತಕ್ಷೇಪ ನಿಲ್ಲಿಸಿ ಎಂದ ಸಿದ್ದು, ಡಿಕೆ ಕೇರಳ ಸಿಎಂ ತಿರುಗೇಟು
ನಾಯಕತ್ವ ಬದಲಾವಣೆ ಗೊಂದಲದ ನಡುವೆಯೇ ಕಸರತ್ತು ಸಿದ್ದರಾಮಯ್ಯ ಬಜೆಟ್‌ ತಯಾರಿ