ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠತೆಗೆ ಮತದಾರರಿಗೆ ಜಾಗೃತಿ ಅಗತ್ಯ

KannadaprabhaNewsNetwork |  
Published : Dec 22, 2023, 01:30 AM IST
21ಕೆಪಿಎಲ್2:ಕೊಪ್ಪಳದ ನಗರದ ಜಿಲ್ಲಾ ಪಂಚಾಯತನಲ್ಲಿ ಸ್ವೀಪ್ ಚಟುವಟಿಕೆಗಳಡಿ ಇವಿಎಂ, ವಿವಿಪ್ಯಾಟ್ ಕುರಿತು ಸಾರ್ವಜನಿಕರಿಗೆ ಜಾಗೃತಿಗಾಗಿ ಸ್ಥಾಪಿಸಿದ ಮಾಹಿತಿ ಕೇಂದ್ರಕ್ಕೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿಎಸ್ ವಸ್ರ್ತದ ಭೇಟಿ ನೀಡಿ, ಸ್ವೀಪ್ಇ,ಎಲ್‌ಸಿ, ಎನ್‌ವಿಡಿ-2023 ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿದರು. | Kannada Prabha

ಸಾರಾಂಶ

ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾಕ್ಷರತಾ ಮತದಾರರ ಸಂಘಗಳ ಮಹತ್ವಗಳ ಕುರಿತು ಜಾಗೃತಿ ಮೂಡಿಸುವುದು, ಯುವಜನತೆಗೆ ಚುನಾವಣಾ ಗುರುತಿನ ಚೀಟಿಯ ಮಹತ್ವ, ವಿಎಚ್‌ಎ ಆ್ಯಪ್ ಬಳಕೆ, ಮತದಾನದ ಪ್ರತಿಜ್ಞಾವಿಧಿ ಸ್ವೀಕಾರ, ದೇಶದಲ್ಲಿ ಜರುಗುವ ಯಾವುದೇ ಚುನಾವಣೆಗಳಲ್ಲಿ ಮತದಾರರು ತಮ್ಮ ಹಕ್ಕನ್ನು ತಪ್ಪದೇ ಚಲಾಯಿಸುವಂತೆ ಅರಿವು ಕಾರ್ಯಕ್ರಮಗಳನ್ನು ಹೆಚ್ಚು ಹಮ್ಮಿಕೊಂಡಷ್ಟು ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತ ಬಲಿಷ್ಠಗೊಳ್ಳುತ್ತದೆ.

ಕೊಪ್ಪಳ: ಶೈಕ್ಷಣಿಕ ಸಂಸ್ಥೆಗಳಲ್ಲಿ ಮತದಾರರ ಸಾಕ್ಷರತಾ ಸಂಘಗಳು ಸಕ್ರಿಯವಾಗಿ ಮತದಾರರಿಗೆ ಜಾಗೃತಿ ಮೂಡಿಸಿದಾಗ ಪ್ರಜಾಪ್ರಭುತ್ವ ವ್ಯವಸ್ಥೆ ಬಲಿಷ್ಠವಾಗುತ್ತದೆ ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್. ವಸ್ತ್ರದ ಹೇಳಿದರು.

ನಗರದ ಜಿಪಂನಲ್ಲಿ ಸ್ವೀಪ್ ಚಟುವಟಿಕೆಗಳಡಿ ಇವಿಎಂ, ವಿವಿಪ್ಯಾಟ್ ಕುರಿತು ಸಾರ್ವಜನಿಕರಿಗೆ ಜಾಗೃತಿಗಾಗಿ ಸ್ಥಾಪಿಸಿದ ಮಾಹಿತಿ ಕೇಂದ್ರಕ್ಕೆ ಭೇಟಿ ನೀಡಿ, ಸ್ವೀಪ್ಇಎಲ್‌ಸಿ, ಎನ್‌ವಿಡಿ-2023 ಕಾರ್ಯಕ್ರಮಗಳ ಕುರಿತು ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.

ಶೈಕ್ಷಣಿಕ ಸಂಸ್ಥೆಗಳ ವಿದ್ಯಾರ್ಥಿಗಳಿಗೆ ಸ್ವೀಪ್ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಸಾಕ್ಷರತಾ ಮತದಾರರ ಸಂಘಗಳ ಮಹತ್ವಗಳ ಕುರಿತು ಜಾಗೃತಿ ಮೂಡಿಸುವುದು, ಯುವಜನತೆಗೆ ಚುನಾವಣಾ ಗುರುತಿನ ಚೀಟಿಯ ಮಹತ್ವ, ವಿಎಚ್‌ಎ ಆ್ಯಪ್ ಬಳಕೆ, ಮತದಾನದ ಪ್ರತಿಜ್ಞಾವಿಧಿ ಸ್ವೀಕಾರ, ದೇಶದಲ್ಲಿ ಜರುಗುವ ಯಾವುದೇ ಚುನಾವಣೆಗಳಲ್ಲಿ ಮತದಾರರು ತಮ್ಮ ಹಕ್ಕನ್ನು ತಪ್ಪದೇ ಚಲಾಯಿಸುವಂತೆ ಅರಿವು ಕಾರ್ಯಕ್ರಮಗಳನ್ನು ಹೆಚ್ಚು ಹಮ್ಮಿಕೊಂಡಷ್ಟು ಅತಿ ದೊಡ್ಡ ಪ್ರಜಾಪ್ರಭುತ್ವ ದೇಶವಾದ ಭಾರತ ಬಲಿಷ್ಠಗೊಳ್ಳುತ್ತದೆ ಎಂದರು.

ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳು, ಅಲೆಮಾರಿ ಜನಾಂಗ, ಎಸ್.ಸಿ, ಎಸ್.ಟಿ., ತೃತೀಯ ಲಿಂಗಿ, ಮಹಿಳೆಯರಿಗೆ, ವಿಕಲಚೇತನರಿಗೆ, ಹಿರಿಯ ನಾಗರಿಕರಿಗೆ ಮುಕ್ತ ನ್ಯಾಯಯುತ ಚುನಾವಣೆಗಾಗಿ ನೀತಿ ಸಂಹಿತೆ, ಮಾದರಿ ಮತದಾನ, ಚುನಾವಣಾ ಪ್ರಕ್ರಿಯೆಯಲ್ಲಿ ತಂತ್ರಜ್ಞಾನ ಬಳಸಿಕೊಂಡು, ಎಲ್ಲ ಮತದಾರರು ಚುನಾವಣಾ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಜಿಪಂ ಸಿಇಒ ರಾಹುಲ್ ರತ್ನಂ ಪಾಂಡೆ, ಅಪರ ಜಿಲ್ಲಾಧಿಕಾರಿ ಸಾವಿತ್ರಿ ಬಿ.ಕಡಿ, ಸಹಾಯಕ ಆಯುಕ್ತ ಮಹೇಶ ಮಾಲಗಿತ್ತಿ, ಅಂದಾಜು ಮತ್ತು ಮೌಲ್ಯ ಮಾಪನಾಧಿಕಾರಿ ಕುಮುಲಯ್ಯ, ತಹಶೀಲ್ದಾರ ವಿಠ್ಠಲ್ ಚೌಗಲಾ, ತಾಪಂ ಇಒ ದುಂಡಪ್ಪ ತುರಾದಿ, ಬಾಬುಸಾಬ್ ಲೈನದಾರ, ಜಿಲ್ಲಾ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಶೈಕ್ಷಣಿಕ ಸಂಸ್ಥೆಗಳ ಇಎಲ್‌ಸಿ ಸಂಯೋಜಕರು ಇದ್ದರು.

ಈ ಮೊದಲು ಸ್ವೀಪ್ ನೋಡಲ್ ಅಧಿಕಾರಿಗಳು ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದ ಮತಗಟ್ಟೆ ಸಂಖ್ಯೆ 33ರಲ್ಲಿ ನಮೂನೆ-7 ಅರ್ಜಿ ಕುರಿತು ವಿಚಾರಣೆ ಮಾಡಿ, ನಮೂನೆ-7ರಲ್ಲಿ ಅರ್ಜಿ ಸಲ್ಲಿಸಿದ ಮತದಾರರ ಮನೆಗೆ ಭೇಟಿ ನಮೂನೆಗಳ ಕುರಿತು ಪರಿಶೀಲನೆ ನಡೆಸಿದರು.

PREV

Recommended Stories

ತುಮಕೂರಲ್ಲಿ 20 ನವಿಲುಗಳ ಸಾವು
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ