ಮತದಾರ, ಮತದಾನ ವ್ಯವಸ್ಥೆ ಮಹತ್ವ ಅರಿಯಿರಿ

KannadaprabhaNewsNetwork | Published : Jan 29, 2025 1:35 AM

ಸಾರಾಂಶ

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮತದಾರ, ಮತದಾನ ಎರಡು ಬಹು ಪ್ರಮುಖ ಪಾತ್ರವಹಿಸುತ್ತವೆ ಎಂದು ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ದೇವದಾಸ್ ಹೇಳಿದ್ದಾರೆ.

- ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮದಲ್ಲಿ ಸಿವಿಲ್ ಜಡ್ಜ್‌ ಎಚ್.ದೇವದಾಸ್- - - ಕನ್ನಡಪ್ರಭ ವಾರ್ತೆ ಹೊನ್ನಾಳಿ

ಪ್ರಜಾತಂತ್ರ ವ್ಯವಸ್ಥೆಯಲ್ಲಿ ಮತದಾರ, ಮತದಾನ ಎರಡು ಬಹು ಪ್ರಮುಖ ಪಾತ್ರವಹಿಸುತ್ತವೆ ಎಂದು ಪಟ್ಟಣದ ಜೆಎಂಎಫ್‌ಸಿ ನ್ಯಾಯಾಲಯ ಪ್ರಧಾನ ಸಿವಿಲ್ ನ್ಯಾಯಾಧೀಶ ಎಚ್.ದೇವದಾಸ್ ಹೇಳಿದರು.

ತಾಲೂಕಿನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಶನಿವಾರ ತಾಲೂಕು ಆಡಳಿತ, ತಾಲೂಕು ವಕೀಲರ ಸಂಘ, ಕಾನೂನು ಸೇವಾ ಸಮಿತಿ ಹಾಗೂ ಚುನಾವಣಾ ಸಾಕ್ಷರತಾ ಸಮಿತಿ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಮತದಾರರ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಇದೇ ಸಂದರ್ಭದಲ್ಲಿ ಕಾಲೇಜಿಗೆ ಸಮಯಕ್ಕೆ ಸರಿಯಾಗಿ ತಲುಪಲು ಪೂರಕವಾಗಿ ಬಸ್‌ಗಳ ಸಂಚಾರ ವ್ಯವಸ್ಥೆ ಇಲ್ಲ ಎಂದು ವಿದ್ಯಾರ್ಥಿಗಳು ನ್ಯಾಯಾಧೀಶರ ಗಮನಕ್ಕೆ ತಂದರು. ಆಗ ಅವರು ಎಲ್ಲ ವಿದ್ಯಾರ್ಥಿಗಳು ಕಡ್ಡಾಯವಾಗಿ ಬಸ್‌ನಲ್ಲಿಯೇ ಕಾಲೇಜಿಗೆ ಬಂದು ಹೋಗುವುದು ಮಾಡುತ್ತೇವೆ ಎಂದು ಹೇಳಿದರೆ ಮಾತ್ರ ಸಂಬಂಧಿಸಿದ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಹೇಳಿ ಬಸ್ ಸಂಪರ್ಕ ಕಲ್ಪಿಸುವ ವ್ಯವಸ್ಥೆ ಮಾಡುತ್ತೇನೆ ಎಂದರು.

ಹೆಚ್ಚುವರಿ ಸಿವಿಲ್ ನ್ಯಾಯಾಧೀಶ ಪುಣ್ಯಕೋಟಿ ಮಾತನಾಡಿ, ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಕಾಲೇಜುಗಳಲ್ಲಿಯೇ ಮಾಡುವ ಉದ್ದೇಶ ಇಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಇರುತ್ತಾರೆ, ಅವರಿಗೆ ಮತ ಮಹತ್ವ ತಿಳಿಸುವ ಉದ್ದೇಶವಾಗಿದೆ. 18 ವರ್ಷ ತುಂಬಿದ ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಬೇಕು. ಈ ಬಗ್ಗೆ ತಿಳಿವಳಿಕೆ ನೀಡುವ ಕಾರಣಕ್ಕೆ ಕಾಲೇಜುಗಳಲ್ಲಿ ಮತದಾರರ ದಿನ ಅಚರಿಸಲಾಗುತ್ತಿದೆ ಎಂದರು.

ಉಪವಿಭಾಗಾಧಿಕಾರಿ ಅಭಿಷೇಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಚುನಾವಣೆ ನೀತಿ ಸಂಹಿತೆ, ಮತದಾರರ ಪಟ್ಟಿ ತಯಾರಿಕೆ ವಿಷಯಗಳ ಕುರಿತು ಮಾಹಿತಿ ನೀಡಿದರು. ತಹಸೀಲ್ದಾರ್ ಪಟ್ಟರಾಜ ಗೌಡ ಅವರು ಮತದಾನದ ಬಗ್ಗೆ ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಿದರು. ವಕೀಲರಾದ ಕರುಣಾಕರ ಎಚ್. ಅವರು ಮತದಾರರ ಹಕ್ಕು ಮತ್ತು ಕರ್ತವ್ಯ ಕುರಿತು ಉಪನ್ಯಾಸ ನೀಡಿದರು.

ಪ್ರಾಂಶುಪಾಲ ಟಾಕಪ್ಪ ಚೌವ್ಙಾಣ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ತಾಲೂಕು ವಕೀಲರ ಸಂಘದ ಅಧ್ಯಕ್ಷ ಕೆ.ಪಿ.ಜಯಪ್ಪ ಸಂವಿಧಾನ, ಚುನಾವಣೆಗಳ ಕುರಿತು ಮಾತನಾಡಿದರು. ಸರ್ಕಾರಿ ಸಹಾಯಕ ಅಭಿಯೋಜಕ ಭರತ್ ಭೀಮಯ್ಯ, ಸಿಪಿಐ. ಅನಿಲ್ ಕುಮಾರ್, ತಾಪಂ ಇಒ ಎಂ.ಆರ್.ಪ್ರಕಾಶ್, ಬಿಆರ್‌ಸಿ ತಿಪ್ಪೇಶಪ್ಪ, ವಕೀಲರಾದ ಚಂದ್ರಪ್ಪ ಮಡಿವಾಳ್, ಬಿ.ಎಂ. ಪುರುಷೋತ್ತಮ್, ಕಾಲೇಜಿನ ಉಪನ್ಯಾಸಕ ವರ್ಗ, ವಿದ್ಯಾರ್ಥಿಗಳು ಇದ್ದರು.

ಉಪನ್ಯಾಸಕ ಡಾ. ಓಂಕಾರ ನಾಯ್ಕ ನಿರೂಪಿಸಿದರು. ಮಾಲತಿ ಜಿ.ಆರ್. ಸ್ವಾಗತಿಸಿದರು. ದೊಡ್ಡಸ್ವಾಮಿ ವಂದಿಸಿದರು.

- - -

ಕೋಟ್‌ ಭಾರತ ಸಂವಿಧಾನ ಈ ದೇಶದ ಪ್ರಜೆಗಳಿಗೆ ಮತದಾನ ಎನ್ನುವ ಗುರುತರ ಜವಾಬ್ದಾರಿಯುತ ಹಕ್ಕನ್ನು ದಯಪಾಲಿಸಿದೆ. ಈ ಹಕ್ಕನ್ನು ಉಪಯೋಗಿಸಿ, ಯಾವುದೇ ರೀತಿಯ ಪ್ರಲೋಭನೆಗಳಿಗೆ ಒಳಗಾಗದೇ ಮತದಾರರು ಉತ್ತಮ ಜನನಾಯಕರನ್ನು ಆಯ್ಕೆ ಮಾಡಿಕೊಳ್ಳಬೇಕು. ಆಗ ದೇಶದ ಆಡಳಿತ ಕೂಡ ಉತ್ತಮ ಹಾಗೂ ಜನಪರವಾಗಿ ಇರುತ್ತದೆ

- ಎಚ್‌.ದೇವದಾಸ್‌, ಜಡ್ಜ್‌

- - - -25ಎಚ್.ಎಲ್.ಐ1.ಜೆಪಿಜಿ:

ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ನ್ಯಾಯಾಧೀಶ ಎಚ್.ದೇವದಾಸ್ ಉದ್ಘಾಟಿಸಿದರು. ಹೆಚ್ಚುವರಿ ನ್ಯಾಯಾಧೀಶ ಪುಣ್ಯಕೋಟಿ, ಎಸಿ ಅಭಿಷೇಕ್, ತಹಸೀಲ್ದಾರ್ ಪಟ್ಟರಾಜಗೌಡ ಇತರರು ಇದ್ದರು.

Share this article