ಧಾರವಾಡ:
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಮತದಾರರ ಮ್ಯಾಪಿಂಗ್ ಕಾರ್ಯವು ಶೇ. 89.94ರಷ್ಟಾಗಿದ್ದು ಪ್ರಗತಿಯಲ್ಲಿದೆ. ಮತಗಟ್ಟೆ ಮಟ್ಟದ ಏಜೆಂಟರು (ಬಿಎಲ್‌ಎ) ಮತಗಟ್ಟೆ ಮಟ್ಟದ ಅಧಿಕಾರಿಗಳಿಗೆ ಕ್ಷೇತ್ರಮಟ್ಟದಲ್ಲಿ ಸಹಕಾರ ನೀಡಬೇಕು. ಆಯೋಗದ ವೇಳಾಪಟ್ಟಿಯಂತೆ ಎಸ್‌ಐಆರ್ ಅರ್ಹತಾ ಅವಧಿಯು ಅ. 10ರ ವರೆಗಿದ್ದು, ಪೂರ್ವ ಸಿದ್ಧತೆ, ತರಬೇತಿ ಮತ್ತು ಮುದ್ರಣವು ಜೂ. 20ರಿಂದ ಜೂ. 29ರ ವರೆಗೆ ನಡೆಯುವುದು. ಜೂ. 30ರಿಂದ ಜು. 29ರ ವರೆಗೆ ಬಿಎಲ್‌ಒನಿಂದ ಮನೆ-ಮನೆಗೆ ಭೇಟಿ ನೀಡುವರು. ಜು. 29ರಂದು ಮತಗಟ್ಟೆಗಳ ರ‍್ಯಾಶಲೈಜೆಶನ್‌ಗೊಳಿಸುವ ಕಾರ್ಯವಿದೆ. ಕರಡು ಮತದಾರರ ಪಟ್ಟಿಯನ್ನು ಆ. 5ರಂದು ಪ್ರಕಟಿಸಲಾಗುವುದು ಎಂದರು.
ಆ. 5ರಿಂದ ಸೆ. 4ರ ವರೆಗೆ ಮತದಾರರು ಅಗತ್ಯವಿದ್ದಲ್ಲಿ, ತಮ್ಮ ಹಕ್ಕು ಮತ್ತು ಆಕ್ಷೇಪಣೆ ಸಲ್ಲಿಸಲು ಕಾಲಾವಧಿವಿದೆ. ಸೆ. 5ರಿಂದ ಅ. 3ರ ವರೆಗೆ ನೋಟಿಸ್ ಹಂತ, ಹಕ್ಕು ಮತ್ತು ಆಕ್ಷೇಪಣೆಗಳಿಗೆ ಸಂಬಂಧಿಸಿದಂತೆ ಸಲ್ಲಿಕೆಯಾಗುವ ಅರ್ಜಿಗಳ ವಿಲೇವಾರಿಗೊಳಿಸಲಾಗುವುದು. ಅ. 7ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದು ಅವರು ತಿಳಿಸಿದರು.ರಾಜ್ಯದಲ್ಲಿ ಅರ್ಹತಾ 2002ರ ಜನವರಿ 1ನ್ನು ಆಧರಿಸಿ ಮತದಾರರ ಪಟ್ಟಿಗಳ ಸಮಗ್ರ ಪರಿಷ್ಕರಣೆ ಕೈಗೊಳ್ಳಲಾಗುತ್ತಿದೆ. ಮತದಾರರ ಪಟ್ಟಿಯನ್ನು ಸಿದ್ಧಪಡಿಸುವಾಗ, ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿದ ಬಗ್ಗೆ ಮತ್ತು ಅಂತಹ ಅರ್ಹ ನಾಗರಿಕರು ಮತದಾರರ ಪಟ್ಟಿಯಿಂದ ಕೈಬಿಟ್ಟುಹೋಗದಂತೆ ಜಾಗೃತಿ ವಹಿಸಲಾಗುವುದು ಎಂದರು. 2 ಲಕ್ಷಕ್ಕೂ ಹೆಚ್ಚು ಮಕ್ಕಳಿಗೆ ಪೋಲಿಯೋ ಗುರಿ
ಜಿಲ್ಲೆಯಲ್ಲಿ 5 ವರ್ಷದೊಳಗಿನ ಮಕ್ಕಳ ಸಂಖ್ಯೆ 2,07,837 ಇದ್ದು, 891 ಒಟ್ಟು ಲಸಿಕಾ ಕೇಂದ್ರ ಸ್ಥಾಪಿಸಲಾಗುತ್ತದೆ. 92 ಟ್ರಾಂಜಿಟ್ ತಂಡ, 57 ಮೊಬೈಲ್ ತಂಡ ಕಾರ್ಯನಿರ್ವಹಿಸಲಿವೆ. 3,829 ವ್ಯಾಕ್ಸಿನೇಟರ್ ಹಾಗೂ 241 ಮೇಲ್ವಿಚಾರಕರು ಭಾಗವಹಿಸಲಿದ್ದಾರೆ. ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜಿಲ್ಲೆಯ ಒಟ್ಟು 4,28,540 ಮನೆಗಳಿಗೆ ಆರೋಗ್ಯ ಕಾರ್ಯಕರ್ತರು ಭೇಟಿ ನೀಡಲಿದ್ದಾರೆ ಎಂದರು.ಇದೇ ವೇಳೆ ಜಿಲ್ಲೆಯಲ್ಲಿ ಮುಂಬರುವ ಮಳೆಗಾಲ ಹಾಗೂ ನಂತರದ ದಿನಗಳಲ್ಲಿ ಮಲೇರಿಯಾ, ಡೆಂಘೀ, ಚಿಕನ್‌ಗುನ್ಯಾ ಹಾಗೂ ಕೀಟಜನ್ಯ ರೋಗಗಳು ಹರಡುವ ಸಾಧ್ಯತೆ ಇರುತ್ತದೆ. ಅವುಗಳ ನಿಯಂತ್ರಣ ಹಾಗೂ ಮುಂಜಾಗೃತಾ ಕ್ರಮಗಳ ಕುರಿತು ಜಿಲ್ಲಾಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿಯ ಸಭೆ ಜರುಗಿತು. ಡಿಎಚ್‌ಒ ಡಾ. ಎಸ್.ಎಂ. ಹೊನಕೇರಿ ಸ್ವಾಗತಿದರು. ಡಾ. ಸುಜಾತಾ ಹಸವೀಮಠ ವಂದಿಸಿದರು.