ಉಪ ಚುನಾವಣೆ ಗೆಲುವು ವಿಪಕ್ಷಗಳಿಗೆ ಮತದಾರರ ಉತ್ತರ: ಆರ್‌.ವಿ. ದೇಶಪಾಂಡೆ

KannadaprabhaNewsNetwork |  
Published : Nov 24, 2024, 01:46 AM IST
1233 | Kannada Prabha

ಸಾರಾಂಶ

ಪಂಚ ಗ್ಯಾರಂಟಿಗಳನ್ನು ಜನರು ಮೆಚ್ಚಿದ್ದಾರೆ ಎಂಬುದನ್ನು ತೋರಿಸುತ್ತದೆ. ಗ್ಯಾರಂಟಿ ಯೋಜನೆ ಟೀಕಿಸುತ್ತಿದ್ದ ವಿಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ.

ಹಳಿಯಾಳ:

ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಮತದಾರರು ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ವಿಪಕ್ಷಗಳಿಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಅಭಿವೃದ್ಧಿ ಕಾರ್ಯ ಹಾಗೂ ಆಡಳಿತ ಮೆಚ್ಚಿ ಮತ ನೀಡಿದ್ದಾರೆಂದು ರಾಜ್ಯ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ. ದೇಶಪಾಂಡೆ ಹೇಳಿದ್ದಾರೆ.

ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಗೆಲುವು ಪಂಚ ಗ್ಯಾರಂಟಿಗಳನ್ನು ಜನರು ಮೆಚ್ಚಿದ್ದಾರೆ ಎಂಬುದನ್ನು ತೋರಿಸುತ್ತದೆ. ಗ್ಯಾರಂಟಿ ಯೋಜನೆ ಟೀಕಿಸುತ್ತಿದ್ದ ವಿಪಕ್ಷಗಳಿಗೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಸರ್ಕಾರ ಜನರಿಂದ ದೂರವಾಗಿದೆ, ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಎನ್ನುವ ಆರೋಪವನ್ನು ಈ ಗೆಲುವು ಸುಳ್ಳಾಗಿಸಿವೆ ಎಂದರು.

ಉಪಚುನಾವಣೆ ಪಕ್ಷವು ಗೆಲುವು ಸಾಧಿಸಿದ್ದು ಮತ್ತಷ್ಟು ಜವಾಬ್ದಾರಿ ಹೆಚ್ಚಿಸಿದೆ. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಅವರು ತೆಗೆದುಕೊಳ್ಳುವ ಹೊಸ ಹೊಸ ಯೋಜನೆಗಳು ಪಕ್ಷದ ಅಭೂತ ಪೂರ್ವ ಗೆಲುವಿಗೆ ಸಾಕ್ಷಿಯಾಗಿವೆ ಎಂದರು.

ಶನಿವಾರ ಸಂಜೆ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿಯನ್ನು ನಡೆಸಿದ ಅವರು ಈ ಚುನಾವಣೆಯ ಫಲಿತಾಂಶವು ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದ ಜನತೆಯು ಮೆಚ್ಚಿದೆ ಎಂದು ಸಾಭಿತು ಪಡಿಸುತ್ತಿದೆ ಎಂದರು. ಗ್ಯಾರಂಟಿ ಯೋಜನೆಗಳನ್ನು ಠೀಕಿಸುತ್ತಿದ್ದ ವಿರೋಧ ಪಕ್ಷಗಳಿಗೆ ತಕ್ಕ ಪಾಠವನ್ನು ಕಲಿಸಿದ್ದಾರೆ ಎಂದರು. ರಾಜ್ಯ ಸರ್ಕಾರ ಜನರಿಂದ ದೂರವಾಗಿದೆ, ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ ಎಂದು ಪ್ರತಿಪಕ್ಷಗಳ ಆರೋಪಗಳು ಇಂದು ಸುಳ್ಳಾಗಿವೆ ಎಂದರು.ಕಾಂಗ್ರೆಸ್ಸಿಗೆ ಬಲ:

ರಾಹುಲ್ ನಾಯಕತ್ವ ಟೀಕಿಸುತ್ತಿದ್ದ ವಿಪಕ್ಷಗಳಿಗೆ ಈ ಗೆಲುವು ಉತ್ತರ ನೀಡಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಬಲ ಅನುಭವಿ ನಾಯಕತ್ವದಲ್ಲಿ ಕಾಂಗ್ರೆಸ್ ಬಲವರ್ಧನೆಗೊಳ್ಳುತ್ತಿದೆ ಎಂದರು. ವಯನಾಡಿನಿಂದ ಚುನಾವಣೆಗೆ ಮೊದಲ ಬಾರಿ ಸ್ಪರ್ಧಿಸಿದ್ದ ಪ್ರಿಯಾಂಕಾ ಗಾಂಧಿ ಬಾರಿ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. ಮಹಾರಾಷ್ಟ್ರದಲ್ಲಿ ನಮ್ಮ ಮೈತ್ರಿಕೂಟಕ್ಕೆ ಹಿನ್ನಡೆಯಾಗಿದೆ. ಮತದರಾರರು ನೀಡಿದ ತೀರ್ಪನ್ನು ನಾನು ಸ್ವಾಗತಿಸುತ್ತೆವೆ ಎಂದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ