ಕ್ಷೇತ್ರದಲ್ಲಿ ಬಿಜೆಪಿಗೆ ಮತದಾರರ ಒಲವು: ಗೋವಿಂದ ಕಾರಜೋಳ

KannadaprabhaNewsNetwork |  
Published : Apr 19, 2024, 01:03 AM IST
ಚಿತ್ರ:ಗೋವಿಂದ ಕಾರಜೋಳ | Kannada Prabha

ಸಾರಾಂಶ

ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಈ ಬಾರಿ ಪುನಃ ಬಿಜೆಪಿ ಪಕ್ಷಕ್ಕೆ ಜಯ ಸಿಗುವುದು ಖಂಡಿತ ಎಂದು ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದರು.

ಚಿತ್ರದುರ್ಗ: ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿಯೂ ಈ ಬಾರಿ ಪುನಃ ಬಿಜೆಪಿ ಪಕ್ಷಕ್ಕೆ ಜಯ ಸಿಗುವುದು ಖಂಡಿತ ಎಂದು ಬಿಜೆಪಿ ಅಭ್ಯರ್ಥಿ ಮಾಜಿ ಸಚಿವ ಗೋವಿಂದ ಕಾರಜೋಳ ಹೇಳಿದರು.

ಸಿರಿಗೆರೆಯಲ್ಲಿ ಗುರುವಾರ ಸಂಜೆ ಮಾಧ್ಯಮದವರೊಡನೆ ಮಾತನಾಡಿದ ಅವರು ಈಗಾಗಲೇ ಒಮ್ಮೆ ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನು ಸುತ್ತುಹಾಕಿದ್ದೇವೆ. ಎಲ್ಲೆಡೆ ಬಿಜೆಪಿ ಬಗ್ಗೆ ಮತದಾರರಲ್ಲಿ ಒಲವು ಇದೆ ಎಂದರು.

ಕ್ಷೇತ್ರದ ವ್ಯಾಪ್ತಿಯಲ್ಲಿರುವ ಕಾರ್ಯಕರ್ತರು ಬಹಳ ಆಸಕ್ತಿಯಿಂದ ಚುನಾವಣಾ ಕಾರ್ಯದಲ್ಲಿ ತೊಡಗಿಸಿಕೊಂಡು ನನ್ನ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಮತದಾರರಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಕಳೆದ ೧೦ ವರ್ಷಗಳಲ್ಲಿ ಜಾರಿಗೆ ತಂದಿರುವ ಕಾರ್ಯಕ್ರಮಗಳು ಗೆಲುವಿಗೆ ಆಸರೆಯಾಗಿವೆ. ಜನರು ದೇಶದ ಸುಭದ್ರತೆ ಮತ್ತು ರಕ್ಷಣೆಯ ಕುರಿತು ಆಲೋಚಿಸುತ್ತಿದ್ದಾರೆ ಎಂದರು. ಪ್ರಧಾನಿ ಮೋದಿಯವರ ವರ್ಚಸ್ಸು, ಪಕ್ಷದ ಸಿದ್ಧಾಂತ ಇವುಗಳು ನನ್ನ ಗೆಲುವಿಗೆ ಸಹಕಾರಿಯಾಗಲಿವೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ-ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಒತ್ತಾಯ